ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ರಚಿಸಿ

KannadaprabhaNewsNetwork |  
Published : Dec 19, 2025, 02:15 AM IST
ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆಗೆ ಅಗ್ರಹಿಸಿ ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ ಅವರು ಸಿಎಂ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಕಿತ್ತೂರ ಕರ್ನಾಟಕ ಅಭಿವೃದ್ಧಿಯಲ್ಲಿ ನಿರೀಕ್ಷಿತ ಮಟ್ಟ ತಲುಪಿಲ್ಲ. ಈ ಭಾಗದ ಪ್ರಗತಿಗೆ ವಿಶೇಷ ಒತ್ತು ನೀಡುವ ಅವಶ್ಯಕತೆ ಇದ್ದು, ಬೇರೆ ಬೇರೆ ಪ್ರದೇಶಗಳಿಗೆ ಹೋಲಿಸಿದರೆ ಈ ಭಾಗವು ಆರ್ಥಿಕ ಹಾಗೂ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ (ಶಿಕ್ಷಣ, ಆರೋಗ್ಯ, ಸಾಕ್ಷರತೆ ) ತುಂಬಾ ಹಿಂದುಳಿದಿದೆ.

ನವಲಗುಂದ:

ಕಿತ್ತೂರು ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ “ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ” ರಚಿಸಿ ಪ್ರತಿ ವರ್ಷ ₹ 5,000 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಬೆಳಗಾವಿಯ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಎನ್.ಎಚ್. ಕೋನರಡ್ಡಿ ಮನವಿ ಸಲ್ಲಿಸಿದರು.

ಕಿತ್ತೂರ ಕರ್ನಾಟಕ ಅಭಿವೃದ್ಧಿಯಲ್ಲಿ ನಿರೀಕ್ಷಿತ ಮಟ್ಟ ತಲುಪಿಲ್ಲ. ಈ ಭಾಗದ ಪ್ರಗತಿಗೆ ವಿಶೇಷ ಒತ್ತು ನೀಡುವ ಅವಶ್ಯಕತೆ ಇದ್ದು, ಬೇರೆ ಬೇರೆ ಪ್ರದೇಶಗಳಿಗೆ ಹೋಲಿಸಿದರೆ ಈ ಭಾಗವು ಆರ್ಥಿಕ ಹಾಗೂ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ (ಶಿಕ್ಷಣ, ಆರೋಗ್ಯ, ಸಾಕ್ಷರತೆ ) ತುಂಬಾ ಹಿಂದುಳಿದಿದೆ. ಈ ಭಾಗದ ಜಿಲ್ಲೆಗಳ ತಲಾ ಆದಾಯ ರಾಜ್ಯದಲ್ಲಿ ಅತೀ ಕಡಿಮೆ ಇದ್ದು ಇಲ್ಲಿ ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯಗಳ ಕೊರತೆಯಿದೆ. ಡಾ. ನಂಜುಂಡಪ್ಪ ವರದಿ ಅನ್ವಯ ಈ ಪ್ರಾದೇಶಿಕ ಅಸಮತೋಲನವನ್ನು ನಿವಾರಿಸಲು ವಿಶೇಷ ಆರ್ಥಿಕ ಪ್ಯಾಕೇಜ್, ಹೆಚ್ಚಿನ ಬಂಡವಾಳ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಯ ಅಗತ್ಯವಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನಾತ್ಮಕ ರಕ್ಷಣೆ ಮತ್ತು ಮಂಡಳಿ ಇರುವಂತೆಯೇ ಕಿತ್ತೂರು ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ “ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ” ರಚಿಸಿ ಪ್ರತಿ ವರ್ಷ ಆಯ-ವ್ಯಯದಲ್ಲಿ ಕನಿಷ್ಠ ₹5,000 ಕೋಟಿ ವಿಶೇಷ ಅನುದಾನ ಮೀಸಲಿಡಬೇಕೆಂದು ಒತ್ತಾಯಿಸಿದ್ದಾರೆ.

ಕಿತ್ತೂರ ಕರ್ನಾಟಕ ಭಾಗದ ಎಲ್ಲ ಶಾಸಕರು ಅಧಿವೇಶನದಲ್ಲಿ ಪಕ್ಷಾತೀತವಾಗಿ ಮಾತನಾಡಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದು ಈ ಅಧಿವೇಶನದಲ್ಲಿಯೇ ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ.

ಈ ವೇಳೆ ಸಚಿವರಾದ‌ ಜಿ. ಪರಮೇಶ್ವರ, ಎಚ್.ಕೆ. ಪಾಟೀಲ, ಮುಖ್ಯ ಸಚೇತಕ ಅಶೋಕ ಪಟ್ಟಣ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಸ್ಲಿಮರು ಸೂರ್‍ಯನಮಸ್ಕಾರ ಮಾಡ್ಬೇಕು : ಹೊಸಬಾಳೆ ಕರೆ
ರೈಲ್ವೆ ಬಡ್ತಿ ಪರೀಕ್ಷೆ ಕನ್ನಡದಲ್ಲೂ ನಡೆಸಲು ಸೋಮಣ್ಣ ತಾಕೀತು