ಚೆನ್ನಮ್ಮನ ಸ್ವಾಭಿಮಾನ ಗುಣ ಅನುಕರಣೀಯ

KannadaprabhaNewsNetwork |  
Published : Oct 24, 2026, 02:30 AM IST
ಕುರುಗೋಡಿನ  02 ಪಟ್ಟಣದ ತಾಲ್ಲೂಕು ಆಡಳಿತ ಕಚೇರಿಯಲ್ಲಿ ಶುಕ್ರವಾರ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಿಸಲಾಯಿತು | Kannada Prabha

ಸಾರಾಂಶ

ಮಹಿಳೆಯರು ಎಲ್ಲ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಬಲ್ಲರು ಎನ್ನುವುದಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಉತ್ತಮ ನಿದರ್ಶನ

ಕುರುಗೋಡು: ದಕ್ಷಿಣ ಭಾರತದಲ್ಲಿ ಪ್ರಥಮ ಬಾರಿಗೆ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟದ ಕಹಳೆ ಮೊಳಗಿಸಿದ ಕಿತ್ತೂರು ರಾಣಿ ಚೆನ್ನಮ್ಮ ಸ್ವಾಭಿಮಾನ ಮತ್ತು ಧೈರ್ಯ ಗುಣ ಮೆಚ್ಚುವಂತದ್ದು ಎಂದು ತಹಸೀಲ್ದಾರ್ ನರಸಪ್ಪ ಶ್ಲಾಘಿಸಿದರು.

ಇಲ್ಲಿನ ಪಟ್ಟಣದ ತಾಲೂಕು ಕಚೇರಿಯಲ್ಲಿ ತಾಲೂಕಾಡಳಿತದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರು ಎಲ್ಲ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಬಲ್ಲರು ಎನ್ನುವುದಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಉತ್ತಮ ನಿದರ್ಶನ. ಗಂಡು ಮಕ್ಕಳಂತೆ ಹೆಣ್ಣುಮಕ್ಕಳಿಗೂ ಸಮಾನ ಶಿಕ್ಷಣ ಕೊಡಿಸಬೇಕು ಎಂದರು.

ಆತ್ಮರಕ್ಷಣೆಗಾಗಿ ರಕ್ಷಣಾ ಕಲೆ ಮೈಗೂಡಿಸಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಆದರ್ಶ ಗುಣ ಎಲ್ಲರೂ ಪಾಲಿಸಬೇಕು ಎಂದು ಸಲಹೆ ನೀಡಿದರು.

ಶಿರಸ್ತೇದಾರ್ ರವೀಂದ್ರ ಬಾಬು ಮತ್ತು ವಿಜಯಕುಮಾರ್, ಸಿಬ್ಬಂದಿ ಅನ್ನಪೂರ್ಣ, ಶ್ವೇತಾ, ಚಂದ್ರಮ್ಮ ಮತ್ತು ರಾಜೇಶ್ವರಿ ಇದ್ದರು.ಚಿತ್ರ

ಕುರುಗೋಡ ಪಟ್ಟಣದ ತಾಲೂಕಾಡಳಿತ ಕಚೇರಿಯಲ್ಲಿ ಶುಕ್ರವಾರ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಳೆ ಕೊರತೆ, ತೊಗರಿ ಬೆಳೆಗಾರ ಕಂಗಾಲು
ಚಿರತೆ ಉಗುರು ಸಂಗ್ರಹಿಸಿಟ್ಟ ಆರೋಪಿ ಬಂಧನ