ನಾರಾಯಣಪುರ ಗ್ರಾಪಂಗೆ ಕೆ.ಕೆ.ಪ್ರಕಾಶ್ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

KannadaprabhaNewsNetwork | Published : Sep 29, 2024 1:31 AM

ಸಾರಾಂಶ

ಹಿಂದಿನ ಅಧ್ಯಕ್ಷ ಎನ್.ಎಸ್.ಆನಂದ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆದು ಕೆ.ಕೆ.ಪ್ರಕಾಶ್ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿಯೂ ಆದ ಬಿಆರ್ ಸಿ ಪ್ರಕಾಶ್ ಘೋಷಿಸಿದರು.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ನಾರಾಯಣಪುರ ಗ್ರಾಪಂ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಕೆ.ಕೆ.ಪ್ರಕಾಶ್ ಅವಿರೋಧವಾಗಿ ಆಯ್ಕೆಯಾದರು.

ಹಿಂದಿನ ಅಧ್ಯಕ್ಷ ಎನ್.ಎಸ್.ಆನಂದ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆದು ಕೆ.ಕೆ.ಪ್ರಕಾಶ್ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿಯೂ ಆದ ಬಿಆರ್ ಸಿ ಪ್ರಕಾಶ್ ಘೋಷಿಸಿದರು. ಕೆ.ಕೆ.ಪ್ರಕಾಶ್ ಅಧ್ಯಕ್ಷರಾಗುತ್ತಿದ್ದಂತೆ ಎಲ್ಲಾ ಸದಸ್ಯರು, ಮುಖಂಡರು ಅಭಿನಂದಿಸಿದರು.

ನಂತರ ಪ್ರಕಾಶ್ ಮಾತನಾಡಿ, ನಮ್ಮ ನಾಯಕ ಸಿ.ಎಸ್.ಪುಟ್ಟರಾಜು ಅವರ ಆಶೀರ್ವಾದ ಹಾಗೂ ಎಲ್ಲಾ ಸದಸ್ಯರ ಸಹಕಾರದಿಂದ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಗ್ರಾಪಂ ವ್ಯಾಪ್ತಿಯ ಹಳ್ಳಿಗಳ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು.

ಗ್ರಾಪಂ ಉಪಾಧ್ಯಕ್ಷ ನವೀನ, ಸದಸ್ಯರಾದ ಎನ್.ಎಸ್.ಆನಂದ, ಶಿವಶಂಕರ್, ಮಂಗಳ, ಧನಲಕ್ಷ್ಮೀ, ನಾಗರಾಜು, ಪ್ರಮೀಳ, ಕೆ.ಸುಶೀಲ, ಶೋಭಾ, ಶಶಿಕಲಾ, ಗೋಪಾಲ, ಪವಿತ್ರ, ಮಾಜಿ ಅಧ್ಯಕ್ಷರಾದ ರಾಧಕೃಷ್ಣ, ರಾಮಚಂದ್ರು, ಕೆಂಪರಾಜು, ಯೋಗನರಸಿಂಹೇಗೌಡ, ಸುಂದ್ರಣ್ಣ, ದೇವರಾಜು, ಹಳೇಬೀಡು ಗ್ರಾಪಂ ಅಧ್ಯಕ್ಷ ಧನಂಜಯ್, ಮುಖಂಡರಾದ ಬೋರೇಗೌಡನಕೊಪ್ಪಲು ಕುಮಾರ್, ಚನ್ನಕೃಷ್ಣ, ವೆಂಕಟೇಶ್, ಯೋಗರಾಜು, ಬಲರಾಮ, ಸ್ವಾಮೀಗೌಡ, ಸುರೇಶ್, ಅನಿಲ್‌ಕುಮಾರ್, ಧನಲಕ್ಷ್ಮೀ, ಸುಜಾತ, ಪಿಡಿಒ ಜಗದೀಶ್, ಕಾರ್‍ಯದರ್ಶಿ ವಿಶ್ವೇಶ್ವರಯ್ಯ ಸೇರಿ ಹಲವು ಮುಖಂಡರು ಹಾಜರಿದ್ದರು.ಇಂದು ಪತ್ರಿಕಾ ದಿನಾಚರಣೆ, ವಾರ್ಷಿಕ ಪ್ರಶಸ್ತಿ ಪ್ರದಾನ

ಮಂಡ್ಯ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೆ.29ರಂದು ಬೆಳಗ್ಗೆ ನಗರದ ಕೆ.ವಿ. ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಪತ್ರಿಕಾ ದಿನಾಚರಣೆ, ಜೀವಮಾನ ಸಾಧನೆ, ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ, ಪ್ರತಿಭಾ ಪುರಸ್ಕಾರ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ.ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸುವರು. ಮಾಜಿ ಸಂಸದ ಸಿ.ಎಸ್.ಪುಟ್ಟರಾಜು ಪತ್ರಕರ್ತರಿಗೆ ಜೀವಮಾನ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡುವರು. ಸಂಘದ ಅಧ್ಯಕ್ಷ ಬಿ.ಪಿ. ಪ್ರಕಾಶ್ ಅಧ್ಯಕ್ಷತೆ ವಹಿಸುವರು.

ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವರು. ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ.ವಿ. ಪ್ರಭಾಕರ್ ಅವರು ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡುವರು. ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಧಾನ ಭಾಷಣ ಮಾಡುವರು.ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಮತ್ತೀಕೆರೆ ಜಯರಾಂ ಪ್ರಸ್ತಾವಿಕವಾಗಿ ಮಾತನಾಡುವರು. ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸುವರು.

ಶಾಸಕರಾದ ಪಿ. ರವಿಕುಮಾರ್, ಕೆ.ಎಂ. ಉದಯ್, ದರ್ಶನ್ ಪುಟ್ಟಣ್ಣಯ್ಯ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ನಗರಸಭೆ ಅಧ್ಯಕ್ಷ ಪ್ರಕಾಶ್ (ನಾಗೇಶ್), ವಾತಾಧಿಕಾರಿ ಎಚ್.ಎಸ್. ನಿರ್ಮಲಾ ಇತರರು ಭಾಗವಹಿಸುವರು.

Share this article