ಕೆಎಲ್‌ಇ ಸಂಸ್ಥೆಗೆ ಕೃಷಿ ಮಹಾವಿದ್ಯಾಲಯ ಮಂಜೂರು

KannadaprabhaNewsNetwork |  
Published : Dec 20, 2025, 03:00 AM IST
ತೆನಿಕೊಳ್ಳದ ಕೆಎಲ್‌ಇ ಕೃಷಿ ವಿಜ್ಞಾನಗಳ ಕಾಲೇಜಿನಲ್ಲಿ ಕೃಷಿ ಉನ್ನತಿ ಸಂವಾದ ಕಾರ್ಯಕ್ರಮವನ್ನು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಉದ್ಘಾಟಿಸಿದರು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಕೆಎಲ್‌ಇ ಸಂಸ್ಥೆಯು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಶಿಕ್ಷಣ ಸೇವೆ ಸಲ್ಲಿಸುತ್ತಿದ್ದು, ಈ ಭಾಗದಲ್ಲಿ ಶ್ರೇಷ್ಠ ಶಿಕ್ಷಣ ಸಂಸ್ಥೆಯಾಗಿ ಹೊರಹೊಮ್ಮಿದ ವಿಷಯ ಸರ್ಕಾರದ ಗಮನಕ್ಕಿದೆ. ಈ ದಿಸೆಯಲ್ಲಿ ಕೃಷಿ ಶಿಕ್ಷಣ ವ್ಯವಸ್ಥೆಯನ್ನು ಸರ್ಕಾರೇತರ ಸಂಸ್ಥೆಗಳ ಮೂಲಕ ವಿಸ್ತರಿಸುವ ನಿಟ್ಟಿನಲ್ಲಿ ಕೆಎಲ್‌ಇ ಸಂಸ್ಥೆಯು ಪರಿಣಾಮಕಾರಿಯಾಗಿ ನಿರ್ವಹಿಸುವ ಸಾಮರ್ಥ್ಯವನ್ನು ಪರಿಗಣಿಸಿ ಸರ್ಕಾರ ಉತ್ತರ ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಕೃಷಿ ಮಹಾವಿದ್ಯಾಲಯವನ್ನು ಕೆಎಲ್‌ಇ ಸಂಸ್ಥೆಗೆ ಮಂಜೂರು ಮಾಡಲಾಗಿದೆ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕೆಎಲ್‌ಇ ಸಂಸ್ಥೆಯು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಶಿಕ್ಷಣ ಸೇವೆ ಸಲ್ಲಿಸುತ್ತಿದ್ದು, ಈ ಭಾಗದಲ್ಲಿ ಶ್ರೇಷ್ಠ ಶಿಕ್ಷಣ ಸಂಸ್ಥೆಯಾಗಿ ಹೊರಹೊಮ್ಮಿದ ವಿಷಯ ಸರ್ಕಾರದ ಗಮನಕ್ಕಿದೆ. ಈ ದಿಸೆಯಲ್ಲಿ ಕೃಷಿ ಶಿಕ್ಷಣ ವ್ಯವಸ್ಥೆಯನ್ನು ಸರ್ಕಾರೇತರ ಸಂಸ್ಥೆಗಳ ಮೂಲಕ ವಿಸ್ತರಿಸುವ ನಿಟ್ಟಿನಲ್ಲಿ ಕೆಎಲ್‌ಇ ಸಂಸ್ಥೆಯು ಪರಿಣಾಮಕಾರಿಯಾಗಿ ನಿರ್ವಹಿಸುವ ಸಾಮರ್ಥ್ಯವನ್ನು ಪರಿಗಣಿಸಿ ಸರ್ಕಾರ ಉತ್ತರ ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಕೃಷಿ ಮಹಾವಿದ್ಯಾಲಯವನ್ನು ಕೆಎಲ್‌ಇ ಸಂಸ್ಥೆಗೆ ಮಂಜೂರು ಮಾಡಲಾಗಿದೆ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಹೇಳಿದರು.

ಕೆಎಲ್‌ಇ ಕೃಷಿ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಶುಕ್ರವಾರ ನಡೆದ ಕೃಷಿ ಶಿಕ್ಷಣ ವ್ಯವಸ್ಥೆ ಕುರಿತ ಕೃಷಿ ಉನ್ನತಿ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇಲ್ಲಿ ಅಭಿವೃದ್ಧಿ ಪಡಿಸಿದ ಮಹಾವಿದ್ಯಾಲಯದ ಕಟ್ಟಡದಲ್ಲಿರುವ ಎಲ್ಲ ವಿಭಾಗಗಳ ಪ್ರಯೋಗಾಲಯ, ಗ್ರಂಥಾಲಯ ಹಾಗೂ ಉಪನ್ಯಾಸ ಕೊಠಡಿಗಳು ಉನ್ನತ ಮೂಲ ಸೌಕರ್ಯಗಳೊಂದಿಗೆ ನಿರ್ಮಾಣ ಮಾಡಲಾಗಿದೆ. ಈ ಶಿಕ್ಷಣ ಮಹಾವಿದ್ಯಾಲಯವು ತಮ್ಮ ಹೆಮ್ಮೆಎಂದು ತಿಳಿದು ಉನ್ನತ ಸುಸಜ್ಜಿತ ವ್ಯವಸ್ಥೆಗಳನ್ನು ಒದಗಿಸಿ ಜೊತೆಗೆ ಸರ್ಕಾರದ ನಿರೀಕ್ಷೆಯಂತೆ ಮಹಾವಿದ್ಯಾಲಯವನ್ನು ಅನುಷ್ಠಾನಗೊಳಿಸಲು ಕಾರಣರಾದ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರನ್ನು ಅಭಿನಂದಿಸಿದರು.ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಮಹಾಂತೇಶ ಕವಟಗಿಮಠ ಮಾತನಾಡಿ, ಕೆಎಲ್‌ಇ ಸಂಸ್ಥೆಯು ಕೃಷಿ ಮಹಾವಿದ್ಯಾಲಯವನ್ನು ಪ್ರಾರಂಭಿಸಲು ಸರ್ಕಾರದ ಅನುಮತಿಯನ್ನು ಹಲವಾರು ವರ್ಷಗಳಿಂದ ಕೇಳುತ್ತಾ ಬಂದಿದೆ. ಇಲ್ಲಿಯವರೆಗೆ ಯಾವುದೇ ಸರ್ಕಾರೇತರ ಸಂಸ್ಥೆಗಳಿಗೆ ಕಾಲೇಜನ್ನು ಮಂಜೂರು ಮಾಡದ ಕಾರಣ ಕಾಲೇಜು ಪ್ರಾರಂಭ ವಿಳಂಬವಾಗಿತ್ತು. ಈ ವರ್ಷ ಕೆಎಲ್‌ಇ ಸಂಸ್ಥೆಯ ಉನ್ನತ ಸೇವೆಯನ್ನು ಪರಿಗಣಿಸಿ ಕಾಲೇಜನ್ನು ಪ್ರಾರಂಭಿಸಲು ಸರ್ಕಾರದ ಅನುಮತಿಯನ್ನು ಪಡೆಯಲು ಕಾರಣರಾದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರನ್ನು ಕೆಎಲ್‌ಇ ಸಂಸ್ಥೆಯ ಪರವಾಗಿ ಅಭಿನಂದಿಸಿದರು.ಕೃಷಿ ವಿಜ್ಞಾನ ಕೇಂದ್ರದ ಚೇರ್‌ಮನ್‌ ಬಿ.ಆರ್.ಪಾಟೀಲ ಅವರು ಕೃಷಿ ಸಚಿವರಿಗೆ ಎಲ್ಲ ವಿಭಾಗಗಳಲ್ಲಿರುವ ಬೋಧನ ಕೊಠಡಿ, ಗ್ರಂಥಾಲಯ ಹಾಗೂ ಪ್ರಯೋಗಾಲಯಗಳಿಗೆ ಭೇಟಿ ನೀಡಿ ವ್ಯವಸ್ಥೆಗಳ ಕುರಿತು ವಿವರಿಸಿದರು. ಕೆಎಲ್‌ಇ ಸಂಸ್ಥೆಯ ನಿರ್ದೇಶಕರಾದ ಡಾ.ವ್ಹಿ.ಐ.ಪಾಟೀಲ, ಜಯಾನಂದ ಮುನವಳ್ಳಿ, ಕೃಷಿ ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಡಾ.ಎ.ಬಿ.ಪಾಟೀಲ ಹಾಗೂ ಬೆಳಗಾವಿ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ಎಚ್.ಡಿ.ಕೋಳೇಕರ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಮಂಜುನಾಥ ಚೌರಡ್ಡಿ ಉಪಸ್ಥಿತರಿದ್ದರು. ಕೆಎಲ್‌ಇ ಕೃಷಿ ಕಾಲೇಜಿನ ಪ್ರಭಾರಿ ಡೀನ್‌ ಡಾ.ಶಿವಾನಂದ ಗೌಡ್ರ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಿಬ್ಬಂದಿಗಳಾದ ಡಾ.ಎಸ್.ಎಸ್.ಹಿರೇಮಠ, ಎಸ್.ಎಮ್.ವಾರದ, ಜಿ.ಬಿ.ವಿಶ್ವನಾಥ, ಪ್ರವೀಣ ಯಡಹಳ್ಳಿ, ಡಾ.ಭಾವಿನಿ ಪಾಟೀಲ, ಡಾ.ಗುರುರಾಜ ಕೌಜಲಗಿ, ಶಂಕರಗೌಡ ಪಾಟೀಲ, ವಿನೋದ ಕೋಚಿ, ಮಂಜುನಾಥ.ಪಿ.ಐ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಹಾಯಕ ಪ್ರಾದ್ಯಾಪಕಿ ಡಾ.ಪೃಥ್ವಿ ಹೆಗಡೆ ಸ್ವಾಗತಿಸಿದರು, ಡಾ.ಸೌರಭ ಮುನವಳ್ಳಿ ವಂದಿಸಿದರು. ಡಾ.ಬಾಳೇಶ ನಿರೂಪಿಸಿದರು.-------

ಕೋಟ್‌ಸರ್ಕಾರದ ನಿಯಮಗಳಂತೆ ಅನುಷ್ಠಾನಗೊಂಡಿರುವ ಕೆಎಲ್‌ಇ ಕೃಷಿ ಮಹಾವಿದ್ಯಾಲಯದಲ್ಲಿ ೬೦:೪೦ ಅನುಪಾತದಲ್ಲಿ ಸಿಇಟಿ ಹಾಗೂ ಮ್ಯಾನೇಜ್‌ಮೆಂಟ್‌ ಕೋಟಾದಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತಿದೆ. ಡಾ.ಪ್ರಭಾಕರ ಕೋರೆ ಹಾಗೂ ಕೆಎಲ್‌ಇ ಸಂಸ್ಥೆಯ ನಿರ್ದೇಶಕರ ಮಂಡಳಿಯ ನಿರ್ಧಾರದಂತೆ ಮ್ಯಾನೇಜ್‌ಮೆಂಟ್‌ ಕೋಟಾದಲ್ಲಿ ಎಲ್ಲ ಪ್ರವೇಶಗಳನ್ನು ರೈತರ ಮಕ್ಕಳಿಗೆ ನೀಡಲಾಗುವುದು. ಭವಿಷ್ಯದಲ್ಲಿ ಈ ಮಹಾವಿದ್ಯಾಲಯ ಸರ್ವಶ್ರೇಷ್ಠ ಮಹಾವಿದ್ಯಾಲಯವಾಗಿ ಈ ಭಾಗದ ರೈತರ ಮಕ್ಕಳಿಗೆ ಕೃಷಿ ಶಿಕ್ಷಣವನ್ನು ಒದಗಿಸುವುದು ಡಾ.ಪ್ರಭಾಕರ ಕೋರೆ ಅವರ ಹಾಗೂ ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಮಂಡಳಿ ಕನಸು.ಮಹಾಂತೇಶ ಕೌಜಲಗಿ, ಕೆಎಲ್‌ಇ ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಸಕ್ಕೆ ಬೆಂಕಿ: ಹೊಗೆಯಿಂದ ಮನೆಯಲ್ಲಿ ಉಸಿರಾಡಲು ಆಗುತ್ತಿಲ್ಲ:ನಟಿ ಐಂದ್ರಿತಾ
ಕಟ್ಟುನಿಟ್ಟು ಮಾಡಿದರೂ ನಿಲ್ಲದ ಪರಪ್ಪನ ಅಗ್ರಹಾರ ಪವಾಡ