ಕನ್ನಡಪ್ರಭ ವಾರ್ತೆ ಬೆಳಗಾವಿ
ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ 40 ವರ್ಷಗಳನ್ನು ಪೂರೈಸಿದ ನಿಮಿತ್ತವಾಗಿ ಕೆಎಲ್ಇ ಆಡಳಿತ ಮಂಡಳಿಯು ಶನಿವಾರ ಜವಾಹರಲಾಲ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಆಯೋಜಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಅನೇಕ ಬಾರಿ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆಯಾಗಿ ಯಶಸ್ವಿಯಾದೆ. ನನ್ನ 40 ವರ್ಷಗಳ ಆಡಳಿತ ಹೂವಿನ ಹಾಸಿಗೆ ಆಗಿರಲಿಲ್ಲ. ಬದಲಾಗಿ ಮುಳ್ಳಿನ ಹಾಸಿಗೆಯಂತೆ ಕೂಡ ಅನುಭವ ಆಗಿದೆ. ಪ್ರಜಾಪ್ರಭುತ್ವದಲ್ಲಿ ವಿರೋಧ ಸಹಜ ಎಂದು ತಮ್ಮ ಅನುಭವ ಹಂಚಿಕೊಂಡರು.
ಕೆಎಲ್ಇ ಸಂಸ್ಥೆ ನನಗೆ ಏನೆಲ್ಲ ನೀಡಿದೆ, ಬೆಳೆಸಿದೆ. ಆದ್ದರಿಂದ ಸಮಾಜಕ್ಕಾಗಿ ನಾನು ಸಾಧ್ಯವಾದಷ್ಟು ಸೇವೆ ನೀಡಲು ಪ್ರಯತ್ನಿಸಿದ್ದೇನೆ. ಸಪ್ತರ್ಷಿಗಳ ನೆನಹೆ ನನಗೆ ಉದಯ. ಅವರ ಮರೆವೇ ನನಗೆ ಅಸ್ತಮಾನ. ಅಂತಹ ಕೆಎಲ್ಇ ಕಟ್ಟಿ ಬೆಳೆಸಿದ ಸಂಸ್ಥಾಪಕರನ್ನು ಶಿಕ್ಷಣ ಪರಿವಾರದವರನ್ನು ಮನಸಾರೆ ಸ್ಮರಿಸುತ್ತೇನೆ ಎಂದು ಹೇಳಿದರು.ಒಂದು ಮಹಾಸಂಸ್ಥೆಯ ಕಾರ್ಯಾಧ್ಯಕ್ಷನಾಗಿ 40 ವರ್ಷಗಳ ಕಾಲ ಸಂಸ್ಥೆಯನ್ನು ಮುನ್ನಡೆಸಿ ವಿಶ್ವಮಾನ್ಯ ಮಾಡಿದ್ದು ಪವಾಡವೇ ಸರಿ. ಜಗತ್ತಿನಲ್ಲಿರುವ ಅತ್ಯುತ್ತಮವಾಗಿರುವುದನ್ನು ನೋಡಿದಾಗ ಅದನ್ನು ನಮ್ಮ ಕೆಎಲ್ಇ ಸಂಸ್ಥೆಯಲ್ಲಿಯೂ ಅಳವಡಿಸಿಕೊಳ್ಳುತ್ತಾ ಹೋದೆ ಎಂದ ಅವರು, ದಾನಿಗಳ ಉದಾರ ಕೊಡುಗೆಯಿಂದಲೇ ನಮ್ಮ ಸಂಸ್ಥೆಯನ್ನು 38 ರಿಂದ 310ಕ್ಕೆ ವಿಸ್ತರಿಸಲಾಗಿದೆ. ಇದು ಇತಿಹಾಸ ಎಂದು ಹೇಳಿದರು.
ಮಾಜಿ ಶಾಸಕ, ಬಿವಿವಿ ಸಂಘದ ಅಧ್ಯಕ್ಷ ಡಾ.ವೀರಣ್ಣ ಚರಂತಿಮಠ ಮಾತನಾಡಿ, ಇಂದು ಕೆಎಲ್‌ಇ ಏಷ್ಯಾದ ಬಹುದೊಡ್ಡ ಭಾರತೀಯ ಶಿಕ್ಷಣ ಸಂಸ್ಥೆಯಾಗಿ ಬೆಳೆದಿರುವುದು ಹೆಮ್ಮೆ ಮತ್ತು ಅಭಿಮಾನದ ವಿಷಯ. ಭಾರತದ ಶೈಕ್ಷಣಿಕ ಸಾಮಾಜಿಕ ಚರಿತ್ರೆಯಲ್ಲಿ ಶಿಕ್ಷಣದ ಮೂಲಕ ಹೊಸ ಭಾಷ್ಯ ಬರೆದವರು ಡಾ.ಪ್ರಭಾಕರ ಕೋರೆ ಅವರು. ಸಂಸ್ಥೆಯ ಶೈಕ್ಷಣಿಕ, ಸಾಮಾಜಿಕ ಮತ್ತು ಆರೋಗ್ಯ ಸೇವೆಗಳ ಮೂಲಕ ವಿಶ್ವಮಾನ್ಯ ಸಂಸ್ಥೆಯನ್ನಾಗಿ ಬೆಳೆಸಿದ್ದಾರೆ. ಸತ್ಯಸಂಕಲ್ಪ ಬಲದಿಂದ ಕೆಲಸ ಮಾಡಿ ಮುಟ್ಟಿದ್ದೆಲ್ಲ ಒಳ್ಳೆಯದನ್ನು ನೀಡುವ ಸ್ಪರ್ಶಮಣಿ ಶಕ್ತಿಯ ವ್ಯಕ್ತಿತ್ವದವರು ಎಂದು ಬಣ್ಣಿಸಿದರು.
ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಶಶೀಲ್ ನಮೋಶಿ ಮಾತನಾಡಿ, ಒಂದೇ ಬಾರಿಗೆ ಹೈದರಾಬಾದ ಶಿಕ್ಷಣ ಸಂಸ್ಥೆ, ಕೆಎಲ್‌ಇ ಮತ್ತು ಶಾಮನೂರ ಶಿವಶಂಕರಪ್ಪ ಅವರ ವೈದ್ಯಕೀಯ ಮಹಾವಿದ್ಯಾಲಯಗಳನ್ನು ಸ್ಥಾಪಿಸಲು ಎಸ್.ನಿಜಲಿಂಗಪ್ಪ ಅವರು ಅನುಮತಿ ನೀಡಿದರು. ಕೆಎಲ್‌ಇ ಸಂಸ್ಥೆ ಸಾಕಷ್ಟು ಬೆಳೆದಿದೆ. ನಾವು ಹಿಂದೆ ಉಳಿದಿದ್ದೇವೆ. ನಾವು ಕೂಡ ಇದೇ ರೀತಿ ಬೆಳೆಸಲು ಸಹಾಯ ಸಹಕಾರ ನೀಡಬೇಕು ಎಂದು ಕೋರಿದರು.
ಇದೇ ಸಂದರ್ಭದಲ್ಲಿ ಕೆಎಲ್ಇ ಆಡಳಿತ ಮಂಡಳಿಯ ಸದಸ್ಯರು ಡಾ.ಪ್ರಭಾಕರ ಕೋರೆ ಹಾಗೂ ಆಶಾ ಕೋರೆಯವರನ್ನು ಸತ್ಕರಿಸಿದರು. ಡಾ.ಪ್ರಭಾಕರ ಕೋರೆಯವರ 40 ವರ್ಷಗಳ ಪಯಣವನ್ನು ಹೊತ್ತ ‘ರತ್ನರಾಜ’ ಪುಸ್ತಕವನ್ನು ಲೋಕಾರ್ಪಣೆ ಮಾಡಲಾಯಿತು.