ಹೊಸದಾಗಿ ನಿರ್ಮಿಸಲಾದ ಹಾಸ್ಟೆಲ್ ಕಟ್ಟಡವು ವಿದ್ಯಾರ್ಥಿಗಳಿಗೆ ಆಧುನಿಕ ಸೌಲಭ್ಯ ಸೌಕರ್ಯಗಳನ್ನು ಒದಗಿಸಲಾಗುವುದು. ಹಾಸ್ಟಲ್‌ನಲ್ಲಿ ಸುಸಜ್ಜಿತ ಕೊಠಡಿಗಳು, ವಿಶಾಲ ಅಧ್ಯಯನ ಕೊಠಡಿ ಮತ್ತು ಮನರಂಜನಾ ಪ್ರದೇಶಗಳನ್ನು ಒಳಗೊಂಡಿದೆ.
ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಸಮೀಪದ ಹನುಮಂತನಗರದ ಭಾರತೀ ವಸತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನೂತನ ವಸತಿ ನಿಲಯಕ್ಕೆ ವಿಧಾನ ಪರಿಷತ್ ಸದಸ್ಯ, ಭಾರತೀ ಶಿಕ್ಷಣ ಸಂಸ್ಥೆ ಚೇರ್‍ಮನ್ ಮಧು ಜಿ.ಮಾದೇಗೌಡ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ಹಾಸ್ಟೆಲ್‌ನಲ್ಲಿ 500 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. 10 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿರುವ ಭಾರತೀ ವಸತಿ ಶಾಲೆಗೆ ಈಗಾಗಲೇ 6 ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಪ್ರವೇಶ ಕಲ್ಪಿಸಲಾಗಿದೆ. ಅಲ್ಲದೇ, ಮುಂದಿನ ದಿನಗಳಲ್ಲಿ, ಫಾರ್ಮಸಿ, ಅಗ್ರಿಕಲ್ಚರ್, ತೋಟಗಾರಿಕೆಯ ವಿವಿಧ ಕೋರ್ಸ್ ಗಳಿಗೆ ಪ್ರವೇಶ ಪಡೆಯಬಹುದು ಎಂದರು.
ಹೊಸದಾಗಿ ನಿರ್ಮಿಸಲಾದ ಹಾಸ್ಟೆಲ್ ಕಟ್ಟಡವು ವಿದ್ಯಾರ್ಥಿಗಳಿಗೆ ಆಧುನಿಕ ಸೌಲಭ್ಯ ಸೌಕರ್ಯಗಳನ್ನು ಒದಗಿಸಲಾಗುವುದು. ಹಾಸ್ಟಲ್‌ನಲ್ಲಿ ಸುಸಜ್ಜಿತ ಕೊಠಡಿಗಳು, ವಿಶಾಲ ಅಧ್ಯಯನ ಕೊಠಡಿ ಮತ್ತು ಮನರಂಜನಾ ಪ್ರದೇಶಗಳನ್ನು ಒಳಗೊಂಡಿದೆ ಎಂದರು.
ಭಾರತೀ ಶಿಕ್ಷಣ ಸಂಸ್ಥೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಶಯ್ ಜಿ.ಮಧು ಮಾತನಾಡಿ, ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯದ ಜತೆಗೆ ಮಕ್ಕಳ ಕಲಿಕೆಗೆ ಉತ್ತಮ ವಾತಾವರಣವನ್ನು ಕಲ್ಪಿಸಲಾಗಿದೆ ಎಂದರು.
ಇದಕ್ಕೂ ಮುನ್ನ ನೂತನ ಹಾಸ್ಟೆಲ್ ಕಟ್ಟಡ ಪೂಜೆ ಮತ್ತು ಹೋಮ, ದೇವತಾ ಕಾರ್ಯಗಳು ಅದ್ಧೂರಿಯಾಗಿ ನಡೆಯಿತು. ಸರಸ್ವತಿ ಮೂಲ ಮಂತ್ರ ಹೋಮ, ಮಹಾ ಸುದರ್ಶನ ಚಕ್ರ ಮಂಡಲ, ಗಣೇಶ ಆರಾಧನೆ, ವಾಸ್ತು ಬಲಿ ಪೂಜೆ, ನವಗ್ರಹ ಪೂಜೆ, ಸಪ್ತ ಮಹದೇವತೆ ಪೂಜೆ, ಪುಣ್ಯ, ಮೃತ್ಯುಂಜಯ ಕೂರ್ಮ ಅಗ್ನಿಕೊಂಡ, ಲಕ್ಷ್ಮಿ ಸರಸ್ವತಿ ಪೂಜೆ, ವಿಷ ಪೂಜೆ, ಜಯ ವಿಜಯ, ಪುಣ್ಯ ಕಳಸ, ವರುಣ- ವಾಸ್ತು ಆರಾಧನೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಹಮುಂತನಗರ ಕ್ಯಾಂಪಸ್ ಕಾರ್ಯದರ್ಶಿ ಜಿ.ಡಿ.ಹಳ್ಳಿ ಸಿದ್ದೇಗೌಡ, ಶ್ರೀ ಆತ್ಮಲಿಂಗೇಶ್ವರ ದೇವಾಲಯ ಧರ್ಮದರ್ಶಿ ಮಂಡಳಿ ಸದಸ್ಯ ಕೆ.ಎಸ್.ಗೌಡ, ಭಾರತೀ ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕರಾದ ಎಸ್. ನಾಗರಾಜು, ಹೆಲ್ತ್ ಸೈನ್ಸ್ ನ ನಿರ್ದೇಶಕರಾದ ಡಾ.ತಮಿಜ್ ಮಣಿ. ಕಾಲೇಜಿನ ಪ್ರಾಂಶುಪಾಲ ಪುಟ್ಟಸ್ವಾಮಿ, ಭಾರತೀ ಎಕ್ಸ್‌ಲೆನ್ಸ್ ಪ್ರಾಂಶುಪಾಲ ಸಿ. ರಮ್ಯಾ ಸೇರಿದಂತೆ ಮತ್ತಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.