ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ
ಈ ಸಂದರ್ಭ ಮಾತನಾಡಿದ ಕೆಎಂಎ ಅಧ್ಯಕ್ಷ ದುದ್ದಿಯಂಡ ಎಚ್. ಸೂಫಿ, ಕೊಡಗಿನ ಜಮ್ಮಾ-ಬಾಣೆ ಶಾಸನ ಸಭೆಯಲ್ಲಿ ಅಂಗೀಕಾರಗೊಂಡ ಕರ್ನಾಟಕ ಭೂ ಕಂದಾಯ 2ನೇ ತಿದ್ದುಪಡಿ ವಿಧೇಯಕ-2025 ಹಿಡುವಳಿದಾರರ ಪರವಾಗಿರಬೇಕು. ಮುಂದೆ ಬೇರೆ ಬೇರೆ ಕಾನೂನುಗಳ ನೆಪಗಳಿಂದ ಹಿಡುವಳಿದಾರರು ಯಾವುದೇ ಸಮಸ್ಯೆ ಎದುರಿಸಬಾರದು. ಇದಕ್ಕಾಗಿ ಈ ಕಾನೂನು ಜಾರಿಗೊಳ್ಳುವ ಹಂತದಲ್ಲೇ ಜನಪ್ರತಿನಿಧಿಗಳ ವಿಶೇಷ ಕಾಳಜಿ ಅಗತ್ಯವಿದೆ ಎಂದು ಹೇಳಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು, ಕೊಡಗಿನ ಜಮ್ಮಾ-ಬಾಣೆ ಭೂಮಿ ವಿವಾದಗಳ ಪರಿಹಾರಕ್ಕಾಗಿ ಕರ್ನಾಟಕ ಭೂ ಕಂದಾಯ 2ನೇ ತಿದ್ದುಪಡಿ ವಿಧೇಯಕ-2025 ಅನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡಿಸುವಲ್ಲಿ ಕಂದಾಯ ಸಚಿವ ಕೃಷ್ಣಬೈರೇ ಗೌಡರು ತೋರಿದ ಇಚ್ಛಾಶಕ್ತಿ ಕೊಡಗಿನ ಜನರ ಪರವಾಗಿತ್ತು. ಕೊಡಗಿನ ಬಹು ಕಾಲದ ಈ ಸಮಸ್ಯೆಯನ್ನು ಕಾನೂನು ಬದ್ಧವಾಗಿ ಪರಿಹರಿಸಬೇಕೆಂಬ ಮನಸ್ಸು ಸಚಿವರಿಗೆ ಹಿಂದಿನಿಂದಲೂ ಇತ್ತು. ಈ ಕಾರಣಕ್ಕಾಗಿ ಅವರು ಜಮ್ಮಾ ಭೂಮಿ ಸಮಸ್ಯೆ ಬಗ್ಗೆ ದೀರ್ಘವಾಗಿ ಅಧ್ಯಯನ ನಡೆಸಿದ್ದರು ಎಂದರಲ್ಲದೆ, ಈ ಕಾನೂನನ್ನು ಕೊಡಗಿನ ಜನತೆ ಸಮರ್ಪಕವಾಗಿ ಮತ್ತು ನ್ಯಾಯೋಚಿತವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.ಈ ಸಂದರ್ಭ ಕೊಡವ ಮುಸ್ಲಿಂ ಅಸೋಸಿಯೇಷನ್ ನ ಆಡಳಿತ ಮಂಡಳಿ ಪ್ರಧಾನ ಕಾರ್‍ಯದರ್ಶಿ ಈತಲತಂಡ ರಫೀಕ್ ತೂಚಮಕೇರಿ, ಕೋಶಾಧಿಕಾರಿ ಹರಿಶ್ಚಂದ್ರ ಎ. ಹಂಸ, ನಿರ್ದೇಶಕರಾದ ಆಲೀರ ಎಂ. ರಶೀದ್, ಕೋಳುಮಂಡ ರಫೀಕ್, ಕೆಂಗೋಟಂಡ ಎಸ್. ಸೂಫಿ ಮತ್ತು ಪರವಂಡ ಎ. ಸಿರಾಜ್ ಉಪಸ್ಥಿತರಿದ್ದರು.