ಕೆಎಂಎಫ್‌ನಿಂದ ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭ

KannadaprabhaNewsNetwork |  
Published : Jan 01, 2026, 03:15 AM IST
ಗದುಗಿನಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಚಾಲನೆ ನೀಡಲಾಯಿತು. | Kannada Prabha

ಸಾರಾಂಶ

ಜಿಲ್ಲೆಯ ಮೆಕ್ಕೆಜೋಳ ಬೆಳೆಗಾರರ ಬೇಡಿಕೆಗೆ ಸ್ಪಂದನೆ ಸಿಕ್ಕಿದ್ದು, ಜಿಲ್ಲೆಯಲ್ಲಿ ಕೆಎಂಎಫ್ ವತಿಯಿಂದ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಅಧಿಕೃತವಾಗಿ ಪ್ರಾರಂಭಿಸಲಾಗಿದೆ. ಇದರ ಸದುಪಯೋಗವನ್ನು ರೈತರು ಪಡೆಯಬೇಕು.

​ಗದಗ: ಜಿಲ್ಲೆಯ ರೈತರು ತಮ್ಮ ಬೆಳೆಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವಂತೆ ಮತ್ತು ಕೆಎಂಎಫ್ ಮೂಲಕ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವಂತೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದರು. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಕೇಂದ್ರವನ್ನು ತೆರೆಯಲಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು‌ ಕೆಎಂಎಫ್ ನಿರ್ದೇಶಕ ಲಿಂಗರಾಜಗೌಡ ಪಾಟೀಲ ತಿಳಿಸಿದರು.

ಬುಧವಾರ ನಗರದ‌ ಎಪಿಎಂಸಿ ಪ್ರಾಂಗಣದಲ್ಲಿರುವ ಗೋದಾಮಿನಲ್ಲಿ ಪ್ರಾರಂಭಿಸಲಾದ ಖರೀದಿ ಕೇಂದ್ರದ ಪೂಜೆಯ ನಂತರ ಮಾತನಾಡಿದರು.

ಜಿಲ್ಲೆಯ ಮೆಕ್ಕೆಜೋಳ ಬೆಳೆಗಾರರ ಬೇಡಿಕೆಗೆ ಸ್ಪಂದನೆ ಸಿಕ್ಕಿದ್ದು, ಜಿಲ್ಲೆಯಲ್ಲಿ ಕೆಎಂಎಫ್ ವತಿಯಿಂದ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಅಧಿಕೃತವಾಗಿ ಪ್ರಾರಂಭಿಸಲಾಗಿದೆ. ಇದರ ಸದುಪಯೋಗವನ್ನು ರೈತರು ಪಡೆಯಬೇಕು ಎಂದರು.

ಈ ಸಂದರ್ಭದಲ್ಲಿ ಕೆಎಂಎಫ್ ಜಿಲ್ಲಾ ಮುಖ್ಯಸ್ಥರ ಡಾ. ಪ್ರಸನ್ನ ಎಸ್. ಪಟ್ಟೇದ್, ರಾಯಾಪುರ ಪಶು ಆಹಾರ ಘಟಕದ ಜನರಲ್ ಮ್ಯಾನೇಜರ್ ಪೀರ್ಯನಾಯಕ ಜಿ., ಮುಂಡರಗಿ ವಿಸ್ತರಣಾಧಿಕಾರಿ ಸಿ.ಎಸ್. ಕಲ್ಲನಗೌಡರ ಉಪಸ್ಥಿತರಿದ್ದು, ಖರೀದಿ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

​ಕಾರ್ಯಕ್ರಮದಲ್ಲಿ ಸತೀಶ್ ಕಾವತಕೊಪ್ಪ, ಅಜಿತ್ ನಾಯಕ್, ವಿಠ್ಠಲ ಗುಜನಟ್ಟಿ ಸೇರಿದಂತೆ ಹಲವು ರೈತ ಮುಖಂಡರು ಭಾಗವಹಿಸಿದ್ದರು. ಕೆಎಂಎಫ್‌ನ ಈ ನಿರ್ಧಾರದಿಂದಾಗಿ ಮಧ್ಯವರ್ತಿಗಳ ಹಾವಳಿ ತಪ್ಪಲಿದ್ದು, ರೈತರಿಗೆ ನೇರವಾಗಿ ಬೆಂಬಲ ಬೆಲೆ ಸಿಗುವಂತಾಗಿದೆ ಎಂದು ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

ಇಂದು ದಿನದರ್ಶಿಕೆ ಬಿಡುಗಡೆ ಕಾರ್ಯಕ್ರಮ

ಗದಗ: ತಾಲೂಕಿನ ಲಕ್ಕುಂಡಿ ಗ್ರಾಮದ ಲಕ್ಷ್ಮೀ ನಾರಾಯಣ ಪತ್ತಿನ ಸೌಹಾರ್ದ ಸಹಕಾರಿ ಸಂಘದ ನೂತನ 2026ನೇ ವರ್ಷದ ದಿನದರ್ಶಿಕೆ ಬಿಡುಗಡೆ ಕಾರ್ಯಕ್ರಮ ಜ. 1ರಂದು ಬೆಳಗ್ಗೆ 10 ಕ್ಕೆ ಸಂಘದ ಕಾರ್ಯಾಲಯದಲ್ಲಿ ಜರುಗಲಿದೆ.ಸಾನ್ನಿಧ್ಯ ವಹಿಸಿ ಹರ್ಲಾಪುರದ ಡಾ. ಕೊಟ್ಟೂರೇಶ್ವರ ಸ್ವಾಮಿಗಳು ದಿನದರ್ಶಿಕೆ ಬಿಡುಗಡೆ ಮಾಡುವರು. ಸಂಘದ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಮುಳ್ಳಾಳ ಅಧ್ಯಕ್ಷತೆ ವಹಿಸುವರು. ಉಪಾಧ್ಯಕ್ಷ ಮೃತ್ಯುಂಜಯ ನಡುವಿನಮಠ, ನಿರ್ದೇಶಕರಾದ ಸಾವಿತ್ರಿ ಅರಹುಣಶಿ, ಬಸವರಾಜ ಕವಲೂರ, ವಿನಾಯಕ ಡಿಗ್ಗಾವಿ, ರಾಗಿಣಿ ಕಲಾಲ, ಸುವರ್ಣ ಕವಲೂರು, ಲಲಿತಾ ಮುಳ್ಳಾಳ, ಮಹಾದೇವ ಈಟಿ, ದ್ರಾಕ್ಷಾಯಿಣಿ ನಡುವಿನಮಠ ಇತರರು ಭಾಗವಹಿಸುವರು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ಮೂಡಲತೋಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ರಾಮ ಪಂಚಾಯ್ತಿವಾರು ದೌರ್ಜನ್ಯ ನಿಯಂತ್ರಣ ತಡೆಗೆ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ದಾನಮ್ಮನವರ
ಗ್ರಾಮೀಣ ಬದುಕಿನ ಸಿರಿವಂತಿಕೆ ಉಳಿಸಿಕೊಳ್ಳಿ: ಚಾನಾಳ್ ಅಮರೇಶಪ್ಪ