ಛಲವಾದಿ ಮನೆಗೆ ಚಾಕು: ಬಿಜೆಪಿ ಎಸ್ಸಿ ಮೋರ್ಚಾ ಪ್ರತಿಭಟನೆ

KannadaprabhaNewsNetwork |  
Published : Nov 09, 2026, 01:45 AM IST
BJP Protest 4 | Kannada Prabha

ಸಾರಾಂಶ

ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮನೆಗೆ ಕಾಂಗ್ರೆಸ್ ಕಾರ್ಯಕರ್ತರು ಚಾಕು-ಚೂರಿ ಪಾರ್ಸೆಲ್‌ ಕಳುಹಿಸಿದ್ದನ್ನು ವಿರೋಧಿಸಿ ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಮುಖಂಡರು ಹಾಗೂ ಕಾರ್ಯಕರ್ತರು ಭಾನುವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮನೆಗೆ ಕಾಂಗ್ರೆಸ್ ಕಾರ್ಯಕರ್ತರು ಚಾಕು-ಚೂರಿ ಪಾರ್ಸೆಲ್‌ ಕಳುಹಿಸಿದ್ದನ್ನು ವಿರೋಧಿಸಿ ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಮುಖಂಡರು ಹಾಗೂ ಕಾರ್ಯಕರ್ತರು ಭಾನುವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕ ಸಿಮೆಂಟ್‌ ಮಂಜು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಗೂಂಡಾ ಸಂಸ್ಕೃತಿಯ ಸರ್ಕಾರ ಇದೆ. ಹೀಗಾಗಿ ವಿರೋಧ ಪಕ್ಷದ ನಾಯಕರ ಮನೆಗೆ ಚಾಕು-ಚೂರಿ ಕಳಿಸುತ್ತಾರೆ. ಆದರೆ ಬಿಜೆಪಿ ಕಾರ್ಯಕರ್ತರು ಬಳೆ ತೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗ್ಯಾರಂಟಿ ಕೊಡುವುದಾಗಿ ಹೇಳಿಕೊಂಡು ಅಧಿಕಾರಕ್ಕೆ ಬಂದ ಸರ್ಕಾರ ಅದನ್ನು ಸರಿಯಾಗಿ ಕೊಡಲಿಲ್ಲ. ಈಗ ವಿರೋಧ ಪಕ್ಷದ ನಾಯಕರ ಮನೆಗೆ ಚಾಕು-ಚೂರಿ ಕಳಿಸುತ್ತಿದ್ದಾರೆ. ಇದೇ ಇವರ ಸಂಸ್ಕಾರ. ಬಿಜೆಪಿ ಕಾರ್ಯಕರ್ತರಿಂದ ಕಾರ್ಯಕರ್ತರಿಗಾಗಿ ಕಾರ್ಯಕರ್ತರಿಗೋಸ್ಕರ ಇರುವ ಪಕ್ಷ. ದೇಶದ 22 ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಕೇವಲ ಎರಡು ಸ್ಥಾನ ಹೊಂದಿದ್ದಾಗಲೂ ಕಾಂಗ್ರೆಸ್‌ಗೆ ಬಿಜೆಪಿ ಹೆದರಿಲ್ಲ. ಧಮ್ಕಿ, ಗೊಡ್ಡು ಬೆದರಿಕೆಗೆ ನಾವು ಹೆದರುವುದಿಲ್ಲ ಎಂದರು.

ಗೃಹ ಸಚಿವರ ವಿರುದ್ಧ ಕೇಸ್‌ಗೆ ಆಗ್ರಹ-ಮುನಿಸ್ವಾಮಿ:

ಮಾಜಿ ಸಂಸದ ಎಸ್.ಮುನಿಸ್ವಾಮಿ ಮಾತನಾಡಿ, ಛಲವಾದಿ ನಾರಾಯಣಸ್ವಾಮಿ ಅವರ ಮನೆಗೆ ಚಾಕು-ಚೂರಿ ಕಳುಹಿಸಿದ ಘಟನೆ ಸಂಬಂಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು. ಏಕೆಂದರೆ, ಈ ಗೃಹ ಸಚಿವರು ಛಲವಾದಿ ವಿರುದ್ಧ ಸದಾ ದ್ವೇಷ ಸಾಧಿಸುತ್ತಾ ಬಂದಿದ್ದಾರೆ. ಈ ಚಾಕು-ಚೂರಿ ಕಳುಹಿಸಿದ ಪ್ರಕರಣಕ್ಕೆ ಗೃಹ ಸಚಿವರೇ ನೇರ ಹೊಣೆಯಾಗಿದ್ದು, ಅವರ ವಿರುದ್ಧವೇ ಮೊದಲು ಎಫ್‌ಐಆರ್‌ ದಾಖಲಿಸಬೇಕು ಎಂದು ಆಗ್ರಹಿಸಿದರು.ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಸಿ ಈ ಪ್ರಕರಣದಲ್ಲಿ ಯಾರೆದ್ದಾರೆ ಎಂಬುದನ್ನು ತನಿಖೆ ಮಾಡಬೇಕು ಎಂದರು. ಮಾಜಿ ಶಾಸಕ ವೈ.ಸಂಪಂಗಿ ಮಾತನಾಡಿ, ಕಾಂಗ್ರೆಸ್‍ನಲ್ಲಿ ಗೂಂಡಾ ಸಂಸ್ಕೃತಿ ಇನ್ನೂ ಇದೆ ಎಂಬುದಕ್ಕೆ ವಿರೋಧ ಪಕ್ಷದ ನಾಯಕರ ಮನೆಗೆ ಚಾಕು-ಚೂರಿ ಕಳುಹಿಸಿರುವುದೇ ನಿದರ್ಶನ. ಕಾಂಗ್ರೆಸ್‌ ಕಾರ್ಯಕರ್ತರ ಪರವಾಗಿ ಸಿಎಂ ಡಿ.ಕೆ.ಶಿವಕುಮಾರ್‌ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟನ್ ಕಬ್ಬಿಗೆ ₹1,000 ಹೆಚ್ಚುವರಿ ದರ ನಿಗದಿಗೆ ಪಟ್ಟು
ಸಾಯಿಪ್ರಿಯಾ ಸಕ್ಕರೆ ಕಾರ್ಖಾನೆ ತಕ್ಷಣ ಆರಂಭಿಸಿ