ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಶನಿವಾರ ನಡೆದ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಅಲೆಮಾರಿ ಜನ ಸಮುದಾಯದ ಬಂಜಾರ, ಲಂಬಾಣಿ, ಲಮಾಣಿ, ಸುಗಾಲಿ, ಸುಕಾಲಿ ಗೋರ್, ಸೋನಾರ್, ಲೋಹಾರ್, ಬಾಜೀಗರ್ ಮತ್ತಿತರ ಅನೇಕ ಉಪನಾಮಗಳಿಂದ ಗುರುತಿಸಲ್ಪಡುವ ಬಂಜಾರರು ಮೂಲತಃ ದಿನಸಿ ಮತ್ತು ಲವಣದ ವ್ಯಾಪಾರಿಯಾಗಿದ್ದರು ಎಂದು ವೆಂಕಟ್ ನಾಯಕ್ ಅವರು ವಿವರಿಸಿದರು.ಲಂಬಾಣಿ, ಬಂಜಾರ ಸಮಾಜ ಬಗ್ಗೆ ಮಹಾಭಾರತದಲ್ಲಿಯೇ ಉಲ್ಲೇಖವಾಗಿರುವುದನ್ನು ಕಾಣಬಹುದಾಗಿದ್ದು, ಸುಮಾರು ಎರಡು ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಇದೆ ಎಂದು ತಿಳಿಸಿದರು.
ಲಂಬಾಣಿ ಭಾಷೆ, ಸಂಸ್ಕೃತಿ ಆಚಾರ-ವಿಚಾರ ಉಡುಗೆ-ತೊಡುಗೆ ವೈಶಿಷ್ಟ್ಯತೆಯಿಂದ ಕೂಡಿದೆ. ಸಮಾಜದ ಮುಖ್ಯವಾಹಿನಿಯಿಂದ ಬಂಜಾರ ಸಮಾಜವು ಇನ್ನೂ ಸಹ ದೂರವಿದ್ದು, ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು.
ಬಂಜಾರ, ಲಂಬಾಣಿ ಸಮಾಜಕ್ಕೆ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಅವುಗಳನ್ನು ಬಳಸಿಕೊಂಡು ಮುಖ್ಯವಾಹಿನಿಗೆ ಬರುವಂತಾಗಬೇಕು. ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಮಹಾರಾಷ್ಟ್ರ ಮತ್ತಿತರ ರಾಜ್ಯಗಳು ಸೇರಿದಂತೆ, ದೇಶ ವಿದೇಶಗಳಲ್ಲಿ ಲಂಬಾಣಿ ಸಮಾಜದವರು ಇದ್ದಾರೆ ಎಂದರು.
ಪ್ರತಿ ಎರಡು ವರ್ಷಗಳಿಗೆ ಒಮ್ಮೆ ಗೋಧಿ ಸಸಿಯನ್ನು ಬೆಳೆದು ‘ತೀಜ್ ಹಬ್ಬ’ವೆಂದು ಪ್ರಸ್ತುತಗೊಂಡಿರುವ (ಮನೆ ಮನೆ ಪೂಜೆ) ಘರೆ ಘರೇರ್ ಹಬ್ಬ ಆಚರಿಸಿದಾಗ ಕನಿಷ್ಠ ಒಂದೆರಡು ಕುರಿಗಳನ್ನು ಪ್ರತಿಯೊಬ್ಬ ಬಂಜಾರ ಕುಟುಂಬ ಮರಿಯಮ್ಮಗೆ ಬಲಿಕೊಟ್ಟು ಬೀಗರಿಗೆ ಉಣಿಸುವುದು ವಾಡಿಕೆ. ಈ ಹಬ್ಬ ಬಂತೆಂದರೆ ಸುತ್ತಲ ಹಳ್ಳಿಗಳ ಭಲೇ ಖುಷಿ ಪಡುತ್ತಾರೆ ಎಂದು ವಿವರಿಸಿದರು.