ಪೊಲೀಸ್ ಠಾಣೆಗಳ ಅನಿವಾರ್ಯತೆ, ಅಗತ್ಯತೆ ತಿಳಿದುಕೊಳ್ಳಿ: ಎಸ್‌ಪಿ

KannadaprabhaNewsNetwork |  
Published : Mar 12, 2024, 02:02 AM IST
ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ  ಭದ್ರಾವತಿ ನಗರದಲ್ಲಿ ನಿರ್ಮಿಸಲಾಗಿರುವ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಕಟ್ಟಡ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಠಾಣೆಗಳು ಸಹಕಾರಿಯಾಗಿವೆ. ಪೊಲೀಸ್ ಠಾಣೆಗಳ ಅನಿವಾರ್ಯತೆ ಹಾಗೂ ಅಗತ್ಯತೆಗಳನ್ನು ಜನರು ತಿಳಿದುಕೊಳ್ಳಬೇಕು. ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವುದು ಪೊಲೀಸರ ಕರ್ತವ್ಯವಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಭದ್ರಾವತಿಯಲ್ಲಿ ಹೇಳಿದ್ದಾರೆ.

ಭದ್ರಾವತಿ: ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಠಾಣೆಗಳು ಸಹಕಾರಿಯಾಗಿವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಹೇಳಿದರು.

ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ನಗರದಲ್ಲಿ ನಿರ್ಮಿಸಲಾಗಿರುವ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.

ಪೊಲೀಸ್ ಠಾಣೆಗಳ ಅನಿವಾರ್ಯತೆ ಹಾಗೂ ಅಗತ್ಯತೆಗಳನ್ನು ಜನರು ತಿಳಿದುಕೊಳ್ಳಬೇಕು. ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವುದು ಪೊಲೀಸರ ಕರ್ತವ್ಯವಾಗಿದೆ. ಪೊಲೀಸ್ ಠಾಣೆಗಳು ಅಪರಾಧಗಳನ್ನು ಎಸಗುವ ಅಥವಾ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಭಯ ಹುಟ್ಟಿಸುವ ಕೇಂದ್ರಗಳಾಗಿವೆ. ಇದರಿಂದಾಗಿ ಸಾಕಷ್ಟು ಅಪರಾಧ ಕೃತ್ಯಗಳು ಕಡಿಮೆಯಾಗುತ್ತಿದೆ ಎಂದರು.

ನಗರದಲ್ಲಿ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಆರಂಭಗೊಂಡರೂ ಸುಸಜ್ಜಿತವಾದ ಕಟ್ಟಡವಿರಲಿಲ್ಲ. ಶಾಸಕರು ಹಾಗೂ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಮತ್ತು ಇಲಾಖೆ ಸ್ಥಳೀಯ ಅಧಿಕಾರಿಗಳ ಪ್ರಯತ್ನ ಹಾಗೂ ಸಹಕಾರದಿಂದಾಗಿ ನೂತನ ಕಟ್ಟಡ ನಿರ್ಮಾಣಗೊಂಡಿದೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಶಾಸಕ ಬಿ.ಕೆ.ಸಂಗಮೇಶ್ವರ್ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿದರು. ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಸದಸ್ಯರಾದ ಕೆ.ಸುದೀಪ್ ಕುಮಾರ್, ಮಣಿ, ಚನ್ನಪ್ಪ, ಟಿಪ್ಪು ಸುಲ್ತಾನ್, ಬಿ.ಟಿ ನಾಗರಾಜ್, ಬಿ.ಎಂ. ಮಂಜುನಾಥ್ ಹಾಗೂ ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು, ಸಿಬ್ಬಂದಿ, ಇನ್ನಿತರರು ಉಪಸ್ಥಿತರಿದ್ದರು.

ಪೊಲೀಸ್ ಉಪ ಅಧೀಕ್ಷಕ ಕೆ.ಆರ್. ನಾಗರಾಜ್ ಸ್ವಾಗತಿಸಿ, ನಗರ ವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ ವಂದಿಸಿದರು.

- - - -ಡಿ11-ಬಿಡಿವಿಟಿ4:

ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಭದ್ರಾವತಿ ನಗರದಲ್ಲಿ ನಿರ್ಮಿಸಲಾಗಿರುವ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಕಟ್ಟಡವನ್ನು ಶಾಸಕ ಬಿ.ಕೆ. ಸಂಗಮೇಶ್ವರ್ ಉದ್ಘಾಟಿಸಿದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...