ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ತಾಲೂಕಿನ ಆರೂಢಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಜಾಗೃತಿ ಮೂಡಿಸಿ, ಮುಂದಿನ ಪೀಳಿಗೆಗೆ ಆ ಸಂಪನ್ಮೂಲಗಳನ್ನು ಹೇಗೆ ಸಂರಕ್ಷಿಸುವುದು ಎಂಬುದನ್ನು ಕಲಿಸಲು, ಪರಿಸರದಲ್ಲಿ ಅಗತ್ಯ ಆಸಕ್ತಿಯನ್ನು ಅಭಿವೃದ್ಧಿಪಡಿಸಲು ಅನುವು ಮಾಡಿಕೊಡುವ ಉದ್ದೇಶವನ್ನು ವಿವರಿಸಲಾಯಿತು. ವಲಯ ಅರಣ್ಯ ಸಂರಕ್ಷಣಾಧಿಕಾರಿ ಕೃಷ್ಣೇಗೌಡ ಮಾತನಾಡಿ, ಬೇಸಿಗೆಯಲ್ಲಿ ಅಸಹಜವಾಗಿ ಕಾಡಿಗೆ ಬೆಂಕಿ ಬೀಳುತ್ತಿದ್ದು, ಇದು ಮಾನವ ನಿರ್ಮಿತವಾಗಿದೆ. ಇದರ ಬಗ್ಗೆ ಮಕ್ಕಳು ಇಂದಿನಿಂದಲೇ ಅರಿವು ಮೂಡಿಸಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು.
ಟಿ.ಡಿ.ಯುನ ಉಪನ್ಯಾಸಕ ಡಾ. ಅಬ್ದುಲ್ ಕರೀಂ ಮಾತನಾಡಿ, ನಮ್ಮ ವಿದ್ಯಾರ್ಥಿ ಜೀವನದಲ್ಲಿ ಈ ರೀತಿ ಕಾಡಿನಲ್ಲಿ ಸುತ್ತಾಡುವ ಅವಕಾಶಗಳು ಸಿಗುತ್ತಿರಲಿಲ್ಲ. ಇಂದಿನ ಮಕ್ಕಳಿಗೆ ಈ ರೀತಿ ಅವಕಾಶವಿದ್ದರೂ ಉತ್ತಮ ಅರಣ್ಯ ಉಳಿದಿಲ್ಲ, ಅವುಗಳನ್ನು ಉಳಿಸಿಕೊಳ್ಳುವ ಕಡೆ ಗಮನಹರಿಸಬೇಕು ಎಂದು ಹೇಳಿದರು.ಮಾನವಶಾಸ್ತ್ರಜ್ಞ ಡಾ. ರೊಮೈನ್ ಸಿಮೆನೆಲ್ ಮಾತನಾಡಿ, ಹಾರ, ಆಟಿಕೆ ತಯಾರಿಕೆ, ಸಸ್ಯಗಳೊಂದಿಗೆ ಸಂಗೀತವನ್ನು ಅನ್ವೇಷಿಸುವುದು, ಸಸ್ಯಗಳಿಂದ ಬಣ್ಣ, ಸಸ್ಯಗಳ ಔಷಧೀಯ ಉಪಯೋಗಗಳು ಈ ಎಲ್ಲಾ ಚಟುವಟಿಕೆಗಳ ಮೂಲಕ ಮಕ್ಕಳಿಗೆ ನಲಿ ಕಲಿಯ ಪ್ರಯೋಗದೊಂದಿಗೆ ಕಾನನದಲ್ಲಿ ಒಳಗೊಳಿಸುವ ಪ್ರಯತ್ನ ನಮ್ಮದಾಗಿದೆ ಎಂದು ತಿಳಿಸಿದರು.
ಸಸ್ಯ ವಿಜ್ಞಾನಿಗಳಾದ ಆರ್. ಗಣೇಶನ್, ವೈಷ್ಣವಿ , ಟಿ.ಡಿ.ಯುನಿವರ್ಸಿಟಿಯ ಅಮ್ರಿತ, ಅರುಣ್, ಸುದೇಶ್ನಾ ಪ್ರಧಾನ್ , ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ನ ಮುರುಳಿ, ದಿವಾಕರ್, ನವೀನ್ ಮತ್ತು ಆರೂಢಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಎಂ. ಸಿದ್ದರಾಮಪ್ಪ, ಎಸ್.ಡಿ.ಎಂ.ಸಿ ಅಧ್ಯಕ್ಷ ನರಸಿಂಹಪ್ಪ ಉಪಸ್ಥಿತರಿದ್ದರು.