ಆಚರಣೆಗಳ ವೈಜ್ಞಾನಿಕತೆ ಅರಿವು ಅಗತ್ಯ: ರಾಘವೇಶ್ವರ ಶ್ರೀ

KannadaprabhaNewsNetwork |  
Published : Jul 28, 2026, 02:30 AM IST
ಶ್ರೀ* | Kannada Prabha

ಸಾರಾಂಶ

ನಮ್ಮ ಪ್ರಾಚೀನ ಆಚರಣೆಗಳ ಹಿನ್ನೆಲೆ ತಿಳಿಯದೇ ಇರುವುದರಿಂದ ನಮ್ಮ ಆಚಾರಗಳು ಕಂದಾಚಾರ ಇರಬಹುದು ಎಂದು ಭಾವಿಸಿ ಅನೇಕರು ಅವುಗಳನ್ನು ಕೈಬಿಟ್ಟಿದ್ದಾರೆ. ನಮ್ಮ ಪಾರಂಪರಿಕ ಆಚರಣೆಗಳ ವೈಜ್ಞಾನಿಕತೆ ಹಾಗೂ ಹಿನ್ನೆಲೆ ಸಮಾಜಕ್ಕೆ ತಿಳಿಸಬೇಕಾದ ಅಗತ್ಯ ಇದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದ್ದಾರೆ.

ಮಂಗಳೂರು: ನಮ್ಮ ಪ್ರಾಚೀನ ಆಚರಣೆಗಳ ಹಿನ್ನೆಲೆ ತಿಳಿಯದೇ ಇರುವುದರಿಂದ ನಮ್ಮ ಆಚಾರಗಳು ಕಂದಾಚಾರ ಇರಬಹುದು ಎಂದು ಭಾವಿಸಿ ಅನೇಕರು ಅವುಗಳನ್ನು ಕೈಬಿಟ್ಟಿದ್ದಾರೆ. ನಮ್ಮ ಪಾರಂಪರಿಕ ಆಚರಣೆಗಳ ವೈಜ್ಞಾನಿಕತೆ ಹಾಗೂ ಹಿನ್ನೆಲೆ ಸಮಾಜಕ್ಕೆ ತಿಳಿಸಬೇಕಾದ ಅಗತ್ಯ ಇದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದ್ದಾರೆ.

ಗೋಕರ್ಣದ ಅಶೋಕೆಯ ಪರಿಸರದಲ್ಲಿ ಅನ್ನಬ್ರಹ್ಮ ಚಾತುರ್ಮಾಸ್ಯದ ಅಂಗವಾಗಿ ಸೋಮವಾರ ಪೂರ್ವಸಿದ್ಧತಾ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಇಂದು ಆಹಾರ ಹಾಗೂ ಊಟದ ವ್ಯವಸ್ಥೆಯಲ್ಲಿ ಅನೇಕ ಲೋಪಗಳಿವೆ. ನಾವು ಏನನ್ನು ತಿನ್ನುತ್ತೇವೆ ಹಾಗೂ ಹೇಗೆ ತಿನ್ನುತ್ತೇವೆ ಎಂಬುದು ನಮ್ಮ ಮೇಲೆ ಮಹತ್ತರವಾದ ಪರಿಣಾಮ ಉಂಟುಮಾಡುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ಪ್ರಾಚೀನ ಆಚರಣೆಗಳನ್ನು ಪುನಃ ಆರಂಭಿಸಲೇ ಬೇಕಾದ ಅಗತ್ಯವಿದೆ. ಹಾಗಾಗಿ ಈ ಚಾತುರ್ಮಾಸ್ಯವನ್ನು ವಿಚಾರ ಪ್ರಧಾನ ಚಾತುರ್ಮಾಸ್ಯವಾಗಿ‌ ಆಚರಿಸಲಾಗುತ್ತಿದೆ ಎಂದರು.

ಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ವಿತ್ತಾಧ್ಯಕ್ಷ ಗಣೇಶ್ ಜೆ.ಎಲ್, ಶಾಸನತಂತ್ರದ ಕಾರ್ಯದರ್ಶಿ ಕೆ.ಪಿ. ಎಡಪ್ಪಾಡಿ, ಹವ್ಯಕ ಮಹಾಮಂಡಲದ ಅಧ್ಯಕ್ಷ ಹರಿಪ್ರಸಾದ್ ಪೆರಿಯಾಪು, ಕಾರ್ಯದರ್ಶಿ ಮಹೇಶ್ ಚಟ್ನಳ್ಳಿ, ಮಂಜುನಾಥ ಸುವರ್ಣಗದ್ದೆ, ಚಾತುರ್ಮಾಸ್ಯದ ಪ್ರಧಾನ ಸಂಯೋಜಕ ಚಂದನ್ ಶಾಸ್ತ್ರಿ ಮತ್ತಿತರರಿದ್ದರು.ಅನ್ನಬ್ರಹ್ಮ ಚಾತುರ್ಮಾಸ್ಯ: ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ಈ ವರ್ಷದ ಚಾತುರ್ಮಾಸ್ಯ ನಡೆಯಲಿದ್ದು, ಜು. 29ರಿಂದ ಸೆ. 26ರ ವರೆಗೆ ಆಹಾರದ ಕುರಿತಾದ ಜಾಗೃತಿಯ ''''''''ಅನ್ನಬ್ರಹ್ಮ ಚಾತುರ್ಮಾಸ್ಯ'''''''' ನಡೆಯಲಿದೆ. ಬುಧವಾರ ವ್ಯಾಸಪೂಜೆ ಮಾಡುವ ಮೂಲಕ ಶ್ರೀಗಳು 33ನೇ ವರ್ಷದ ಚಾತುರ್ಮಾಸ್ಯದ ಸಂಕಲ್ಪ ಸ್ವೀಕರಿಸಲಿದ್ದಾರೆ.

ಈ ಚಾತುರ್ಮಾಸ್ಯದ ಸಮಯದಲ್ಲಿ ಆಹಾರದ ಕುರಿತಾಗಿ ಜಾಗೃತಿ ಮೂಡಿಸುವ ಅನೇಕ ಕಾರ್ಯಕ್ರಮಗಳು ಇರಲಿದ್ದು, ಪ್ರತಿದಿನ ಸ್ವತಃ ಶ್ರೀಗಳಿಂದ ಭೋಜನವೆಂಬ ತಪಸ್ಸು, ಆಹಾರ ಯಾವಾಗ ಸ್ವೀಕರಿಸಿದರೆ ಹಿತ? ಜಲಪಾನದ ನಿಯಮಗಳು, ಆಹಾರದ ಉದ್ದೇಶ, ಉಪವಾಸ, ಭೋಜನದ ಬಳಿಕ ಪಾಲಿಸಬೇಕಾದ ನಿಯಮಗಳು, ಭೋಜನ ಪಾತ್ರೆಗಳು ಸೇರಿದಂತೆ ಅನೇಕ ವಿಶಿಷ್ಟ ಪ್ರವಚನಗಳು ನಡೆಯಲಿವೆ. ಜ್ಞಾನೋದ್ದೀಪನದ ಜೊತೆಗೆ ಪ್ರಾಚೀನ ವಿಧಾನದ ಆಹಾರವೂ ಈ ಚಾತುರ್ಮಾಸ್ಯದಲ್ಲಿ ವಿಶೇಷತೆಯಾಗಿರಲಿದೆ.

ಧಾನ್ಯ ಲಕ್ಷ್ಮೀ ಪೂಜೆ: ಅನ್ನಬ್ರಹ್ಮ ಚಾತುರ್ಮಾಸ್ಯಕ್ಕಾಗಿ ನಾಡಿನಾದ್ಯಂತ ಶಿಷ್ಯ ಭಕ್ತರಿಂದ ವಿವಿಧ ಸುವಸ್ತುಗಳು ಸಮರ್ಪಿತವಾಗಿದ್ದು, ಶ್ರೀಮಠದ 11 ಮಂಡಲಗಳು, ಅಂಗಸಂಸ್ಥೆಗಳು ಹಾಗೂ ರಾಜ್ಯಾದ್ಯಂತದ ಶಿಷ್ಯಭಕ್ತರಿಂದ ಸಮರ್ಪಿತವಾದ ಧಾನ್ಯಲಕ್ಷ್ಮಿಗೆ ಜು. 26ರಂದು ಶ್ರೀಗಳು ಪೂಜೆ ಸಲ್ಲಿಸಿದರು. ಕುಮಟಾ ಶಾಸಕ ದಿನಕರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿ.ಟಿ.ರವಿಗೆ ನೋಟೀಸ್, ಹಿಂದು ನಾಯಕರ ದನಿ ಹತ್ತಿಕ್ಕುವ ಪ್ರಯತ್ನ: ಯಶ್‌ಪಾಲ್
ಮಣಿಪಾಲದ ಕೆಎಂಸಿಯಲ್ಲಿ ಶಸ್ತ್ರಚಿಕಿತ್ಸೆ ರಹಿತ ಯಕೃತ್ತಿನ ರಕ್ತಸ್ರಾವಕ್ಕೆ ಚಿಕಿತ್ಸೆ