ಪುಸ್ತಕ ಅಧ್ಯಯನದಿಂದ ಜ್ಞಾನ ವಿಸ್ತಾರ: ಆರ್.ಐಶ್ವರ್ಯ

KannadaprabhaNewsNetwork |  
Published : Nov 21, 2024, 01:04 AM IST
ಚಿತ್ರ : 20ಎಂಡಿಕೆ4 : ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಗ್ರಂಥಾಲಯದ ಪ್ರಮುಖರನ್ನು ಸನ್ಮಾನಿಸಲಾಯಿತು.  | Kannada Prabha

ಸಾರಾಂಶ

ಸಾರ್ವಜನಿಕ ಗ್ರಂಥಾಲಯ ಇಲಾಖೆ, ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯ, ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಪ್ರಯುಕ್ತ ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಬುಧವಾರ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಪುಸ್ತಕಗಳ ಅಧ್ಯಯನದಿಂದ ಜ್ಞಾನ ವಿಸ್ತಾರ ಹೆಚ್ಚಾಗಲಿದೆ. ಆದ್ದರಿಂದ ಒಳ್ಳೆಯ ಪುಸ್ತಕಗಳನ್ನು ಅಧ್ಯಯನ ಮಾಡುವಂತಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಭಿಪ್ರಾಯಪಟ್ಟಿದ್ದಾರೆ.

ಸಾರ್ವಜನಿಕ ಗ್ರಂಥಾಲಯ ಇಲಾಖೆ, ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯ, ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಪ್ರಯುಕ್ತ ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಬುಧವಾರ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಇತಿಹಾಸ ತಿಳಿಯಬೇಕಿದ್ದಲ್ಲಿ ಪುಸ್ತಕಗಳ ಅಧ್ಯಯನ ಅತ್ಯಗತ್ಯ. ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ, ವಿಜ್ಞಾನ, ತಂತ್ರಜ್ಞಾನ, ಆಧುನಿಕತೆ ಹೀಗೆ ಪ್ರತಿಯೊಂದು ವಿಚಾರಗಳನ್ನೂ ತಿಳಿದುಕೊಳ್ಳುವಂತಾಗಲು ಪುಸ್ತಕಗಳ ಅಧ್ಯಯನ ಅತ್ಯಗತ್ಯ ಎಂದರು.

ಯುವ ಜನರಲ್ಲಿ ಓದಿನ ಬಗ್ಗೆ ಹಂಬಲ ಇರಬೇಕು. ಇಂದಿನ ಆಧುನಿಕ ಯುಗದಲ್ಲಿ ಡಿಜಿಟಲ್ ಲೈಬ್ರರಿ ಸಹ ಇದ್ದು, ಇವುಗಳನ್ನು ಬಳಸಿಕೊಳ್ಳಬೇಕು. ಪುಸ್ತಕ ಅಧ್ಯಯನ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಸಲಹೆ ಮಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು 60-70 ಸಾವಿರ ಪುಸ್ತಕಗಳನ್ನು ಅಧ್ಯಯನ ಮಾಡಿದ್ದಾರೆ. ಅವರ ಜ್ಞಾನ ಭಂಡಾರವೇ ಒಂದು ರೀತಿ ಗ್ರಂಥಾಲಯ, ರಾಷ್ಟ್ರಕವಿ ಕುವೆಂಪು, ಅಮೆರಿಕಾದ ಬೂಕರ್ ವಾಷಿಂಗ್ಟನ್, ಡಿ.ವಿ.ಗುಂಡಪ್ಪ, ಮಹಾಭಾರತದ ಪಾತ್ರಗಳು, ಭಗವದ್ಗೀತೆ, ಬೈಬಲ್, ಕುರಾನ್, ಹೀಗೆ ಪ್ರತಿಯೊಂದನ್ನು ಅಧ್ಯಯನ ಮಾಡುವುದರಿಂದ ಪ್ರಬುದ್ಧತೆ ಹೆಚ್ಚಾಗಲಿದೆ ಎಂದು ವಿವರಿಸಿದರು.

ಸಾಹಿತಿ ಉ.ರಾ.ನಾಗೇಶ್ ಮಾತನಾಡಿ, ಪುಸ್ತಕಗಳು ಜ್ಞಾನ ವೃದ್ಧಿಸಲು ಸಹಕಾರಿ. ಭಾಷೆ, ಬರಹ, ಬಣ್ಣ, ಭಾವನೆ ಇವು ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿದೆ. ಮಾತಿನ, ನುಡಿಯ ರೂಪದಲ್ಲಿ ಬರಹದಲ್ಲಿಯೂ ಕೂಡ ಕಾಣಬಹುದಾಗಿದೆ ಎಂದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಪ್ಪ ಮಾತನಾಡಿ, ಶಾಲೆಗಳಲ್ಲಿ ಗ್ರಂಥಾಲಯ ಅಭಿವೃದ್ಧಿಗೆ ಸರ್ಕಾರದಿಂದ ಪ್ರೋತ್ಸಾಹಿಸಲಾಗುತ್ತಿದೆ. ಪಿಎಂಶ್ರೀ ಮೂರು ಶಾಲೆಗಳಿಗೆ ಡಿಜಿಟಲ್ ಗ್ರಂಥಾಲಯ ನಿರ್ವಹಿಸಲಾಗುತ್ತಿದೆ ಎಂದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ರೇಣುಶ್ರೀ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಪ್ರಕಾಶ್ ಎಂ.ಎನ್., ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಸುರೇಖಾ, ಕೋರಂಗಾಲ ಅಲೆಮಾರಿ ಗ್ರಂಥಾಲಯದ ಮೇಲ್ವಿಚಾರಕಿ ನಾಗವೇಣಿ, ಸಹಾಯಕ ಗ್ರಂಥಪಾಲಕ ವಿಜಯ್ ನಾಗ್ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸುದ್ದಿ ಓದದಿದ್ದರೆ ಡಿಜಿಟಲ್‌ ಅರೆಸ್ಟ್‌ ಆಗ್ತಿರಿ!
ರೈತರ ಯೂರಿಯಾ ಕದ್ದು ತಮಿಳ್ನಾಡಿಗೆ ಸಾಗಣೆ ದಂಧೆ ಪತ್ತೆ