ಸಹಕಾರ ಸಂಘಗಳ ಅಭಿವೃದ್ಧಿ ಜ್ಞಾನ ಅತಿ ಅಗತ್ಯ: ಎನ್‌.ಎ.ರವಿಬಸಪ್ಪ

KannadaprabhaNewsNetwork |  
Published : Jan 02, 2025, 12:33 AM IST
ಚಿತ್ರ :  1ಎಂಡಿಕೆ3 : ಜಿಲ್ಲೆಯ ಸಹಕಾರ ಸಂಘಗಳಿಗೆ ಮಾಹಿತಿ, ಶಿಕ್ಷಣ ಕಾರ್ಯಕ್ರಮದ ಉದ್ಘಾಟನೆ.  | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಪಟ್ಟಣ ಸಹಕಾರ ಬ್ಯಾಂಕ್, ಪತ್ತಿನ ಸಹಕಾರ ಸಂಘ, ಗ್ರಾಹಕರ ಮತ್ತು ವಿವಿಧೊದ್ದೇಶ ಸಹಕಾರ ಸಂಘ, ಜೇನು ಮಾರಾಟ ಸಹಕಾರ ಸಂಘ ಹಾಗೂ ಇತರೆ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಮತ್ತು ಕಾರ್ಯನಿರ್ವಾಹಕರಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಸಹಕಾರ ಸಂಘಗಳು ಅಭಿವೃದ್ಧಿ ಪಥದಲ್ಲಿ ಸಾಗಬೇಕಾದರೆ ಜ್ಞಾನ ಅತಿ ಮುಖ್ಯ. ಆಡಳಿತ ಮಂಡಳಿ ಸದಸ್ಯರು ಕಾಯ್ದೆ, ಕಾನೂನು, ತೆರಿಗೆ, ಲೆಕ್ಕಪರಿಶೋಧನೆ ಮತ್ತಿತರ ಮಾಹಿತಿ ಇಲ್ಲದೆ ಆಡಳಿತ ನಡೆಸುವುದರಿಂದ ಸಂಘ ನಷ್ಟ ಅನುಭವಿಸುತ್ತದೆ ಎಂದು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರು ಹಾಗೂ ಶ್ರೇಷ್ಠ ಸಹಕಾರಿ ಪ್ರಶಸ್ತಿ ಪುರಸ್ಕೃತ ಎನ್.ಎ. ರವಿಬಸಪ್ಪ ಅಭಿಪ್ರಾಯಪಟ್ಟಿದ್ದಾರೆ.ಇಲ್ಲಿನ ಪಂದ್ಯಂಡ ಐ.ಬೆಳ್ಯಪ್ಪ ಸ್ಮಾರಕ ಸಹಕಾರ ಭವನ ಸಭಾಂಗಣದಲ್ಲಿ ನಡೆದ

ವಿವಿಧ ರೀತಿಯ ತೆರಿಗೆಗಳು ಹಾಗೂ ಡಿಜಿಟಲ್ ಬ್ಯಾಂಕಿಂಗ್, ಸೈಬರ್ ಭದ್ರತೆ ಮತ್ತು ವ್ಯಾವಹಾರಿಕ ಸಂವಹನೆ ಕುರಿತು ಶಿಕ್ಷಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಪಟ್ಟಣ ಸಹಕಾರ ಬ್ಯಾಂಕ್, ಪತ್ತಿನ ಸಹಕಾರ ಸಂಘ, ಗ್ರಾಹಕರ ಮತ್ತು ವಿವಿಧೊದ್ದೇಶ ಸಹಕಾರ ಸಂಘ, ಜೇನು ಮಾರಾಟ ಸಹಕಾರ ಸಂಘ ಹಾಗೂ ಇತರೆ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಮತ್ತು ಕಾರ್ಯನಿರ್ವಾಹಕರಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಅಧ್ಯಕ್ಷರು, ಕಾರ್ಯನಿರ್ವಹಣಾಧಿಕಾರಿ, ಆಯ್ಕೆಯಾಗಿ ಬಂದ ಪದಾಧಿಕಾರಿಗಳಿಗೆ ಮನವರಿಕೆ ಮಾಡಬೇಕಾದರೆ ಜ್ಞಾನ ಪಡೆಯುವುದು ಅತಿ ಮುಖ್ಯ. ಎಷ್ಟೇ ತಿಳಿವಳಿಕೆ ಹೊಂದಿದರೂ ಬದಲಾವಣೆ ಜಗದ ನಿಯಮ ಎಂಬಂತೆ ಹೊಸ ವಿಷಯ ಅಳವಡಿಸಿಕೊಂಡಲ್ಲಿ ಮಾತ್ರ ಸಂಘದ ಸಮರ್ಪಕ ನಿರ್ವಹಣೆ ಸಾಧ್ಯವಾಗುತ್ತದೆ ಎಂದರು.

ಸಹಕಾರ ಸಂಘಗಳಿಗೆ ಅನ್ವಯವಾಗುವ ಆದಾಯ ತೆರಿಗೆ ಮತ್ತು ಜಿ.ಎಸ್.ಟಿ. ಕುರಿತು ಸವಿವರ ಮಾಹಿತಿಯನ್ನು ಸನ್ನದು ಲೆಕ್ಕಿಗ ರುದ್ರೇಶ್ ಪಟೇಲ್‌ ಹಾಗೂ ಡಿಜಿಟಲ್ ಬ್ಯಾಂಕಿಂಗ್, ಸೈಬರ್ ಭದ್ರತೆ ಮತ್ತು ವ್ಯವಹಾರಿಕ ಸಂವಹನ ಕುರಿತು ಬ್ಯಾಂಕಿಂಗ್ ವ್ಯಕ್ತಿತ್ವ ವಿಕಸನ ತರಬೇತುದಾರ ಮತ್ತು ವೃತ್ತಿ ಮಾರ್ಗದರ್ಶಕ ಆರ್.ಕೆ. ಬಾಲಚಂದ್ರ ಉಪನ್ಯಾಸ ನೀಡಿದರು.

ಜಿಲ್ಲಾ ಸಹಕಾರ ಯೂನಿಯನ್‌ ಮಾಜಿ ನಿರ್ದೇಶಕರು ಹಾಗೂ ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌ನ ನಿರ್ದೇಶಕ ಕನ್ನಂಡ ಸಂಪತ್‌ ಹಾಜರಿದ್ದರು. ಯೂನಿಯನ್‌ನ ವ್ಯವಸ್ಥಾಪಕಿ ಆರ್. ಮಂಜುಳ ಪ್ರಾರ್ಥಿಸಿದರು. ಯೂನಿಯನ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!