ಜ್ಞಾನ ಕಳೆಯದ ಸಂಪತ್ತು

KannadaprabhaNewsNetwork |  
Published : Aug 19, 2024, 12:46 AM IST
(ಪೊಟೋ 18ಬಿಕೆಟಿ4, ನಗರದ ಬಿವ್ಹಿವ್ಹಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್ರತಿಭಾ ಪುರಸ್ಕಾರ ಹಾಗೂ ಬಿ.ಎ ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೋಡಗೆ ಹಾಗೂ  ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭ) | Kannada Prabha

ಸಾರಾಂಶ

ನಿರಂತರವಾಗಿ ಅಧ್ಯಯನ ಹಾಗೂ ಪಠ್ಯೇತರ ಕಾರ್ಯ ಚಟುವಟಿಕೆಗಳಲ್ಲಿ ಮನಸಾ ಪೂರಕವಾಗಿ ತೊಡಗಿಸಿಕೊಂಡಾಗ ಮಾತ್ರ ಭವಿಷ್ಯವನ್ನು ಉಜ್ವಲ ಮಾಡಿಕೊಳ್ಳಲು ಸಾಧ್ಯವಾಗಲಿದೆ. ಬೀಳ್ಕೊಡುಗೆ ಅಂದರೆ ಉನ್ನತ ಶಿಕ್ಷಣಕ್ಕೆ ಹೋಗುವುದು ಹೊರತು ಶಿಕ್ಷಕರು ವಿದ್ಯಾರ್ಥಿಗಳನ್ನು ಬಿಟ್ಟುಕೊಡುವುದಲ್ಲ ಎಂದು ಕೊಣ್ಣೂರಿನ ಹೊರಗಿನಮಠದ ಡಾ. ವಿಶ್ವಪ್ರಭುದೇವ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಬಾಗಲಕೋಟೆ: ನಿರಂತರವಾಗಿ ಅಧ್ಯಯನ ಹಾಗೂ ಪಠ್ಯೇತರ ಕಾರ್ಯ ಚಟುವಟಿಕೆಗಳಲ್ಲಿ ಮನಸಾ ಪೂರಕವಾಗಿ ತೊಡಗಿಸಿಕೊಂಡಾಗ ಮಾತ್ರ ಭವಿಷ್ಯವನ್ನು ಉಜ್ವಲ ಮಾಡಿಕೊಳ್ಳಲು ಸಾಧ್ಯವಾಗಲಿದೆ. ಬೀಳ್ಕೊಡುಗೆ ಅಂದರೆ ಉನ್ನತ ಶಿಕ್ಷಣಕ್ಕೆ ಹೋಗುವುದು ಹೊರತು ಶಿಕ್ಷಕರು ವಿದ್ಯಾರ್ಥಿಗಳನ್ನು ಬಿಟ್ಟುಕೊಡುವುದಲ್ಲ ಎಂದು ಕೊಣ್ಣೂರಿನ ಹೊರಗಿನಮಠದ ಡಾ. ವಿಶ್ವಪ್ರಭುದೇವ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ನಗರದ ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್ರತಿಭಾ ಪುರಸ್ಕಾರ ಹಾಗೂ ಬಿ.ಎ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪದವಿ ಬದುಕಿನಲ್ಲಿ ಬದಲಾವಣೆ ತರುತ್ತದೆ. ಪ್ರತಿಯೊಂದು ವಿಷಯದ ಜ್ಞಾನವು ಬದುಕಿಗೆ ತಳಪಾಯವಿದ್ದಂತೆ. ಶಿಕ್ಷಣದಲ್ಲಿ ಮೌಲ್ಯಯುತ ಶಿಕ್ಷಣವನ್ನು ಕಲಿಯಬೇಕು. ಯುವಜನತೆ ಉತ್ತಮ ಮಾರ್ಗದಲ್ಲಿ ನಡೆಯುವ ಮೂಲಕ ಉತ್ತಮವಾದದ್ದನ್ನು ಪಡೆದುಕೊಳ್ಳಲು ಸಾಧ್ಯ. ನಿರ್ಧಿಷ್ಟ ಗುರಿ ಸಾಧನೆಯತ್ತ ಗಮನ ಹರಿಸಬೇಕು. ಹಸಿವಾದವರಿಗೆ ಅಣ್ಣ ನೀಡಿದರೆ ಶ್ರೇಷ್ಠಧಾನ ಎನ್ನುತ್ತಾರೆ ಆದರೆ ವಿದ್ಯಾ ಧಾನವು ಪರಮಶ್ರೇಷ್ಠ ಧಾನವಾಗಿದ್ದು ಜೀವನ ಪಾಠ ಹೇಳಿದ ಶಿಕ್ಷಕರಿಗೆ ವಿಧೆಯರಾಗಿರಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಪ್ರಾಚಾರ್ಯ ಎಸ್.ಆರ್.ಮೂಗನೂರಮಠ ಅವರು ಮಾತನಾಡಿ, ಯಾವುದೇ ಬೇಧಭಾವವಿಲ್ಲದೆ ಬಸವಣ್ಣನವರ ಏಳು ತತ್ವಗಳನ್ನು ಅಳವಡಿಸಿಕೊಂಡು ವಿದ್ಯಾಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರವುದು ಬಸವೇಶ್ವರ ಸಂಘ ಎನ್ನುವುದು ಒಂದು ಹೆಮ್ಮೆಯ ವಿಷಯ ಎಂದು ಹೇಳಿದರು. ಇದೇ ವೇಳೆ ಕಲಾ ದೀಪ್ತಿ ವಾರ್ಷಿಕ ಸಂಚಿಕೆ ಬಿಡುಗಡೆ ಮಾಡಲಾಯಿತು. ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ವಿವಿ ಮಟ್ಟದಲ್ಲಿ ಬ್ಲ್ಯೂ ಆಗಿ ಹೊರಹೊಮ್ಮಿದ ಕ್ರೀಡಾಪಟುಗಳಿಗೆ ಪ್ರಶಸ್ತಿ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕರಾದ ಡಾ. ಎ. ಯು ರಾಠೋಡ, ಪ್ರಾದ್ಯಾಪಕರುಗಳಾದ ಡಾ. ಕೆ.ವಿ ಮಠ, ಸುರೇಶ. ಆರ್, ಎಮ್.ಎಮ್ ದೇವನಾಳ, ವಿದ್ಯಾರ್ಥಿ ಪ್ರತಿನಿಧಿಗಳಾದ ಸಚೀನ ಪೂಜಾರಿ, ನೇತ್ರಾ ರಾಂಪೂರ ಸೇರಿದಂತೆ ವಿವಿಧ ವಿಭಾಗಗಳ ಪ್ರಾದ್ಯಾಪಕರು, ವಿದ್ಯಾರ್ಥಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎರಡು ಪೋಲಿಯೊ ಹನಿ ಮಕ್ಕಳಿಗೆ ಜೀವಾಮೃತ: ಶಾಸಕ ಪ್ರಸಾದ್ ಅಬ್ಬಯ್ಯ
₹22267 ಕೋಟಿ ವೆಚ್ಚದಲ್ಲಿ 16.75 ಕಿ.ಮೀ ಸುರಂಗ ರಸ್ತೆ ನಿರ್ಮಿಸಲು ಅದಾನಿ ಗ್ರೂಪ್ ಬಿಡ್‌ ಸಲ್ಲಿಕೆ