ಜ್ಞಾನವೇ ಅತ್ಯಂತ ಶಕ್ತಿಶಾಲಿ ಅಸ್ತ್ರ

KannadaprabhaNewsNetwork |  
Published : Oct 29, 2026, 03:00 AM IST
ಶಾಂತಿನಿಕೇತನ ಸಿಬಿಎಸ್‌ಇ ಶಾಲೆಯಲ್ಲಿ ಸುರಕ್ಷಿತ ಬಾಲ್ಯ ಅಭಿಯಾನ ಕಾರ್ಯಕ್ರಮ | Kannada Prabha

ಸಾರಾಂಶ

ವಿಜಯಪುರ: ಮಕ್ಕಳ ಸುರಕ್ಷತೆ, ಸಮಗ್ರ ಅಭಿವೃದ್ಧಿ ಹಾಗೂ ಶಿಕ್ಷಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳನ್ನು ಬಳಸಿಕೊಳ್ಳಬೇಕು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಲು ಶಸ್ತ್ರಾಸ್ತ್ರಗಳ ಅವಶ್ಯಕತೆಯಿಲ್ಲ. ಜ್ಞಾನವೇ ಅತ್ಯಂತ ಶಕ್ತಿಶಾಲಿ ಅಸ್ತ್ರವಾಗಿದೆ ಎಂದು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್‌ ರೆಹಮಾನ್ ನಂದಗಡಿ ಅಭಿಪ್ರಾಯಪಟ್ಟರು.

ವಿಜಯಪುರ: ಮಕ್ಕಳ ಸುರಕ್ಷತೆ, ಸಮಗ್ರ ಅಭಿವೃದ್ಧಿ ಹಾಗೂ ಶಿಕ್ಷಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳನ್ನು ಬಳಸಿಕೊಳ್ಳಬೇಕು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಲು ಶಸ್ತ್ರಾಸ್ತ್ರಗಳ ಅವಶ್ಯಕತೆಯಿಲ್ಲ. ಜ್ಞಾನವೇ ಅತ್ಯಂತ ಶಕ್ತಿಶಾಲಿ ಅಸ್ತ್ರವಾಗಿದೆ ಎಂದು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್‌ ರೆಹಮಾನ್ ನಂದಗಡಿ ಅಭಿಪ್ರಾಯಪಟ್ಟರು.

ಮಕ್ಕಳ ಹಕ್ಕುಗಳು, ಸುರಕ್ಷತೆ ಹಾಗೂ ಕಾನೂನುಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ನಗರದ ಶಾಂತಿನಿಕೇತನ ಅಂತಾರಾಷ್ಟ್ರೀಯ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸುರಕ್ಷಿತ ಬಾಲ್ಯ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ, ಜ್ಞಾನವಂತರಾಗಿ ಸಮಾಜದ ಉತ್ತಮ ನಾಗರಿಕರಾಗಬೇಕು ಎಂದು ಕರೆ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ ಮಾತನಾಡಿ, ಭಾರತೀಯ ಸಂವಿಧಾನದಲ್ಲಿ ಮಕ್ಕಳ ಹಿತರಕ್ಷಣೆಗಾಗಿ ಒದಗಿಸಿರುವ ಹಕ್ಕುಗಳು ಹಾಗೂ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ವಿವಿಧ ಕಾನೂನುಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಶಾಂತಿನಿಕೇತನ ಸಂಸ್ಥೆಯ ಚೇರಮನ್‌ ಡಾ.ಸುರೇಶ ಬಿರಾದಾರ ಮಾತನಾಡಿ, ಇಂದಿನ ಜಗತ್ತಿನಲ್ಲಿ ಜ್ಞಾನಕ್ಕೆ ಮಹತ್ವವಿದ್ದರೂ, ಅದರ ಜೊತೆಗೆ ಕೌಶಲ್ಯಗಳೂ ಇಂದಿನ ದಿನಗಳಲ್ಲಿ ಅತ್ಯಗತ್ಯವಾಗಿವೆ. ಕೌಶಲ್ಯವಿಲ್ಲದ ಜ್ಞಾನವು ಅಪೂರ್ಣವಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಜ್ಞಾನದ ಜೊತೆಗೆ ವಿವಿಧ ಜೀವನ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಡಿ.ಜಿ.ಬಿರಾದಾರ, ಸುಜಾತಾ ಹಿರೇಮಠ ಮಾತನಾಡಿದರು. ಶಾಲೆಯ ಪ್ರಾಂಶುಪಾಲ ರಿಜೇಶ.ಪಿ.ಎನ್, ಕಾರ್ಯಕ್ರಮ ಸಂಯೋಜಕಿ ಕಮರಪಾರಾ ಕಾಜಿ, ವಿದ್ಯಾಶ್ರೀ ಪೂಜಾರಿ, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲ ನೀಡದ್ದಕ್ಕೆ ಬೇಕರಿ ಮಾಲೀಕರಿಗೆ ಧಮ್ಕಿ ಹಾಕಿ ದಾಂಧಲೆ : ಇಬ್ಬರ ಬಂಧನ
ಮೆಟ್ರೋದಲ್ಲಿ ಮಹಿಳೆಯ ವಿಡಿಯೋ ಮಾಡಿದ ಕಿಡಿಗೇಡಿ ವಿರುದ್ಧ ಕೇಸ್