ಪ್ರತಿಭೆ ಅನಾವರಣಕ್ಕೆ ಜ್ಞಾನವೇ ಪ್ರಬಲ ಚೈತನ್ಯ

KannadaprabhaNewsNetwork |  
Published : Sep 11, 2026, 03:30 AM IST
ದೊಡ್ಡಬಳ್ಳಾಪುರದ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಪ್ರತಿಭೆಗೆ ಜಗತ್ತಿನ ಎಲ್ಲಡೆ ಮನ್ನಣೆ ಇದೆ. ಜ್ಞಾನವೇ ಪ್ರಬಲ‌ ಶಕ್ತಿ ಎಂಬುದನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳಬೇಕು ಎಂದು ಆಮ್ಟೇಕ್ ಕಂಪನಿಯ ಹಿರಿಯ ವ್ಯವಸ್ಥಾಪಕಿ ಪಂಕಜ ರಾವ್‌‌ ತಿಳಿಸಿದರು

ದೊಡ್ಡಬಳ್ಳಾಪುರ: ಪ್ರತಿಭೆಗೆ ಜಗತ್ತಿನ ಎಲ್ಲಡೆ ಮನ್ನಣೆ ಇದೆ. ಜ್ಞಾನವೇ ಪ್ರಬಲ‌ ಶಕ್ತಿ ಎಂಬುದನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳಬೇಕು ಎಂದು ಆಮ್ಟೇಕ್ ಕಂಪನಿಯ ಹಿರಿಯ ವ್ಯವಸ್ಥಾಪಕಿ ಪಂಕಜ ರಾವ್‌‌ ತಿಳಿಸಿದರು. ಅವರು ದೊಡ್ಡಬಳ್ಳಾಪುರ ನಗರ ಶ್ರೀ ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರತಿಭೆಯುಳ್ಳ ವಿದ್ಯಾರ್ಥಿಗಳಿಂದ ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಸಹಕಾರಿ ಆಗಲಿದೆ. ವಿದ್ಯಾರ್ಥಿಗಳು ಸದಾ ಉತ್ಸಾಹಶೀಲರಾಗಿ ಇರಬೇಕು. ಪ್ರತಿಯೊಂದು ಕ್ಷಣವನ್ನು ಸಂತಸದ ಕಲಿಕೆಗಾಗಿ ಮೀಸಲಿಡಬೇಕು ಎಂದರು.

ಖಾಸಗಿ ಕಂಪನಿಯ ಹಿರಿಯ ವ್ಯವಸ್ಥಾಪಕ ವೆಂಕಟೇಶ್ ಅನ್ಬರಸು ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಕನಸು ಕಾಣಬೇಕು, ಅದನ್ನು ಸಾಧಿಸಲು ನಿರಂತರವಾಗಿ ಶ್ರಮಿಸಬೇಕು. ಜ್ಞಾನದ ಪ್ರತಿಫಲವನ್ನು ಸಮಾಜಕ್ಕೆ ನೀಡಬೇಕು. ಪೋಷಕರು, ಶಿಕ್ಷಕರು ಹಾಗೂ ಸಮಾಜ ನೀಡುವ ಪ್ರೋತ್ಸಾಹ ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರತರಲು ಸಹಾಯಕ ಎಂದರು.

ಇದೇ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅಗ್ರ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಅಭಿನಂದನೆ ನಡೆಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಕೊಂಗಾಡಿಯಪ್ಪ ವಿದ್ಯಾಸಂಸ್ಥೆಯ ಅಧ್ಯಕ್ಷ ಎ.ರಾಮಶೆಟ್ಟಿ, ಉಪಾಧ್ಯಕ್ಷ ಪಿ.ವಿ.ಶ್ರೀನಿವಾಸಮೂರ್ತಿ, ಗೌರವ ಕಾರ್ಯದರ್ಶಿ ಎಸ್.ಪ್ರಕಾಶ್, ಖಜಾಂಚಿ ಜಗೀಶ್ ಬಾಬು, ನಿರ್ದೇಶಕರಾದ ಜೆ.ಬಿ.ಮಹೇಶ್, ರಮೇಶ್ ಕುಮಾರ್, ಲಲಿತಮ್ಮ, ಪಾರ್ವತಮ್ಮ, ವಾಣಿಜ್ಯೋದ್ಯಮಿಗಳಾದ ಲಲಿತಕುಮಾರ್ ಜೈನ್, ಸುಜಿತ್ ಕುಮಾರ್ ಜೈನ್, ವಿಷನ್ ಟ್ರಸ್ಟ್‌ ಅಧ್ಯಕ್ಷ ಸುನೀಲ್ ಕುಮಾರ್, ಪ್ರಾಂಶುಪಾಲ ಎನ್.ಶ್ರೀನಿವಾಸ್ ಮುಂತಾದವರು ಭಾಗವಹಿಸಿದ್ದರು.

10ಕೆಡಿಬಿಪಿ1- ದೊಡ್ಡಬಳ್ಳಾಪುರದ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೈ ಮುಗಿಯುತ್ತೇನೆ ದಸರಾದಲ್ಲಿ ಚಲನಚಿತ್ರೋತ್ಸವ ಕೈಬಿಡದಿರಿ
ಎಚ್.ಡಿ. ಕೋಟೆ ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಸೋಮೇಶ್ ಆಯ್ಕೆ