ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಜ್ಞಾನ ತುಂಬಬೇಕು

KannadaprabhaNewsNetwork |  
Published : Jun 19, 2024, 01:02 AM IST
ನಿವೃತ್ತನ್ಯಾಯಮೂರ್ತಿ ಎಚ್.ಎನ್‌ . ನಾಗಮೋಹನ್‌ ದಾಸ್‌ ಬರೆದಿರುವ “ಸಂವಿಧಾನ ಓದು” ಪುಸ್ತಕವನ್ನು ಕಾರ್ಯಕ್ರಮದಲ್ಲಿಬಿಡುಗಡೆ ಮಾಡಿ , ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡಲಾಯಿತು. | Kannada Prabha

ಸಾರಾಂಶ

ಮಕ್ಕಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಶ್ರದ್ಧೆ, ಛಲ, ಆಸಕ್ತಿಯೊಂದಿಗೆ ನಿಖರ ಗುರಿಗೆ ಮನಸ್ಸನ್ನು ಕೇಂದ್ರೀಕರಿಸಿಕೊಂಡು ಪರಿಶ್ರಮ ಹಾಕಬೇಕು. ಶಿಕ್ಷಕರು ಮಕ್ಕಳಿಗೆ ಪಾಠಗಳ ಜೊತೆಗೆ ಮಾನವೀಯ ಮೌಲ್ಯಗಳನ್ನು ಹಾಗೂ ಪ್ರಾಮಾಣಿಕತೆಯನ್ನು ಬಿತ್ತಬೇಕು

ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ

ಮಕ್ಕಳಲ್ಲಿ ಸಾಹಿತ್ಯದ ಜ್ಞಾನ ತುಂಬುವ ಮೂಲಕ ಉತ್ತಮ ಸಮಾಜದ ನಿರ್ಮಾಣಕ್ಕೆ ಬುನಾದಿ ಹಾಕಬೇಕು. ಸುಸಂಸ್ಕೃತ ಸಮಾಜ ನಿರ್ಮಾಣವಾದರೆ ಸಾಹಿತ್ಯ ಚಟುವಟಿಕೆಗೆ ಅರ್ಥ ಬರುತ್ತದೆ ಎಂದು ಚಿಕ್ಕಬಳ್ಳಾಪುರದ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಮಂಗಳನಾಥ ಸ್ವಾಮೀಜಿ ನುಡಿದರು. ತಾಲೂಕಿನ ಹಂಡಿಗನಾಳ ಗ್ರಾಮದ ಕೆವಿ ಭವನದಲ್ಲಿ ಶ್ರೀ ಕೆಂಪಣ್ಣಸ್ವಾಮಿ ಶ್ರೀ ವೀರಣ್ಣಸ್ವಾಮಿ ದೇವಾಲಯದ ಟ್ರಸ್ಟ್ ವತಿಯಿಂದ 10ನೇ ವರ್ಷದ ವಾರ್ಷಿಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಶ್ರದ್ಧೆ, ಛಲ, ಆಸಕ್ತಿಯೊಂದಿಗೆ ನಿಖರ ಗುರಿಗೆ ಮನಸ್ಸನ್ನು ಕೇಂದ್ರೀಕರಿಸಿಕೊಂಡು ಪರಿಶ್ರಮ ಹಾಕಬೇಕು ಎಂದರು.ಶಿಕ್ಷಣದ ಜತೆ ಸಂಸ್ಕಾರ ನೀಡಿ

ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಮಾತನಾಡಿ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಜೊತೆಗೆ ಸಂಸ್ಕಾರವನ್ನು ಕೊಡುವುದು ಅವಶ್ಯವಿದೆ. ವಿದ್ಯಾರ್ಥಿ ಜೀವನದಲ್ಲಿ ಚೆನ್ನಾಗಿ ಅಭ್ಯಾಸ ಮಾಡಬೇಕು. ಶಿಕ್ಷಕರು ಪಾಠಗಳ ಜೊತೆಗೆ ಮಾನವೀಯ ಮೌಲ್ಯಗಳನ್ನು ಹಾಗೂ ಪ್ರಾಮಾಣಿಕತೆಯನ್ನು ಬಿತ್ತಬೇಕು ಎಂದರು.

ಶಿಸ್ತು, ಒಳ್ಳೆಯ ನಡತೆ, ನೈತಿಕ ಮೌಲ್ಯಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ನಮ್ಮ ಮಕ್ಕಳಿಗೆ ಇಂಗ್ಲೀಷ್ ಬರುವುದಿಲ್ಲ, ಕನ್ನಡ ಮಾಧ್ಯಮದಲ್ಲಿ ಓದಿದ್ದಾರೆ, ಅಂಕಗಳು ಕಡಿಮೆ ಬಂದಿದೆ, ನಮ್ಮ ಮಗು ಹಳ್ಳಿ ಶಾಲೆಯಲ್ಲಿ ಓದಿರುವುದು ನಮ್ಮ ಮಕ್ಕಳಿಗೆ ಉತ್ತಮ ಕೆಲಸ ಸಿಗುವುದಿಲ್ಲ ಎಂಬ ಅಪನಂಬಿಕೆಯನ್ನು ಬಿಡಬೇಕೆಂದರು.

115 ವಿದ್ಯಾರ್ಥಿಗಳಿಗೆ ಸನ್ಮಾನ

ಪ್ರತಿ ವರ್ಷದಂತೆ ಈ ವರ್ಷವೂ ಸಹ ವಿದ್ಯಾರ್ಥಿಗಳಿಗೆ 10ನೇ ವರ್ಷದ ವಾರ್ಷಿಕ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸುಮಾರು 115 ಜನ ಮಕ್ಕಳಿಗೆ ಸನ್ಮಾನ ಮಾಡಲಾಯಿತು. ಮುಂದಿನ ವರ್ಷದಿಂದ ಎಸ್ಸೆಸ್ಸೆಲ್ಸಿ, ಪಿಯುಸಿ ಜತೆ ಪದವಿ ವಿದ್ಯಾರ್ಥಿಗಳಿಗೂ ಪ್ರತಿಭಾ ಪುರಸ್ಕಾರ ಮಾಡಬೇಕೆಂದು ಅಲೋಚನೆ ಇದೆ ಎಂದು ಟ್ರಸ್ಟಿನ ಅಧ್ಯಕ್ಷ ನಾಗರಾಜ. ಎನ್ ತಿಳಿಸಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕ ವಿ.ಮುನಿಯಪ್ಪ, ಕೆಂಪಣ್ಣಸ್ವಾಮಿ ಶ್ರೀ ವೀರಣ್ಣಸ್ವಾಮಿ ದೇವಾಲಯ ಟ್ರಸ್ಟ್ ನ ಅಧ್ಯಕ್ಷ ಎನ್. ನಾಗರಾಜ್ , ಉಪಾಧ್ಯಕ್ಷ ಬಿಳಿಶಿವಾಲೆ ರವಿ , ಕಾರ್ಯದರ್ಶಿ ಆಶ್ವತ್ತಯ್ಯ, ಖಜಾಂಚಿ ಮುನಿಸ್ವಾಮಿಗೌಡ, ಟ್ರಸ್ಟಿಗಳಾದ ಚಿಕ್ಕದಾಸರಹಳ್ಳಿ ದೇವರಾಜ್, ಸದಾನಂದ ಮೂರ್ತಿ, ಎಲ್ಐಸಿ ನಾಗರಾಜ್, ವಿಜಯೇಂದ್ರ, ಗೊರಮಡಗು ರಾಜಣ್ಣ, ಪ್ರಶಾಂತ್ ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ