ಕನ್ನಡಪ್ರಭ ವಾರ್ತೆ ಮಡಿಕೇರಿ
ಪತ್ರಿಕಾ ಪ್ರಕಟಣೆ ನೀಡಿರುವ ಅವರು ವೀರ ಸೇನಾನಿಗಳನ್ನು ಅವಮಾನಿಸಿದ ಆರೋಪಿಯನ್ನು ಬಂಧಿಸಿರುವ ಕುರಿತು ಈಗಾಗಲೇ ಮಾಹಿತಿ ಲಭ್ಯವಾಗಿದೆ. ಆದರೆ ಈತನನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಫೀ.ಮಾ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರು ಜಾತಿ, ಮತ, ಭೇದ, ಧರ್ಮಗಳನ್ನು ಮೀರಿದ ಅಪ್ರತಿಮ ವ್ಯಕ್ತಿತ್ವದ ವೀರ ಸೇನಾಧಿಕಾರಿಗಳಾಗಿದ್ದಾರೆ. ಭಾರತೀಯ ಸೇನೆಗೆ ಮತ್ತು ಭಾರತದ ರಕ್ಷಣೆಗೆ ಇವರಿಬ್ಬರು ನೀಡಿದ ಕೊಡುಗೆ ಅಪಾರವಾಗಿದೆ. ಇವರನ್ನು ಅವಹೇಳನ ಮಾಡಿರುವುದು ದೇಶದ್ರೋಹದ ಕೃತ್ಯವಾಗಿದೆ. ಇಡೀ ದೇಶದ ಜನರೇ ಬೇಸರ ಪಡುವಂತಹ ಪ್ರಕರಣ ಇದಾಗಿದೆ. ಆದ್ದರಿಂದ ಗೃಹ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಯತ್ನಿಸುತ್ತಿರುವ ಆರೋಪಿಯನ್ನು ತಕ್ಷಣ ಗಡಿಪಾರು ಮಾಡಲು ಕ್ರಮ ಕೈಗೊಳ್ಳಬೇಕು.ಪೊಲೀಸ್ ಇಲಾಖೆ ಈ ಪ್ರಕರಣದ ಕುರಿತು ನಿರ್ಲಕ್ಷ್ಯ ವಹಿಸಿದರೆ ಎಲ್ಲ ಜಾತಿ, ಜನಾಂಗಗಳ, ಸಂಘ ಸಂಸ್ಥೆಗಳ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಜಬ್ಬೂಮಿ ಸಂಘಟನೆ ಕೊಡಗು ಬಂದ್ ಹೋರಾಟಕ್ಕೆ ಮುಂದಾಗಲಿದೆ ಎಂದು ರಾಜೀವ್ ಬೋಪಯ್ಯ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಮಾಜದ ಸಾಮರಸ್ಯವನ್ನು ಕದಡುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಕೊಡವ ಸಮಾಜದ ಅಧ್ಯಕ್ಷ ಎಂ.ಸಿ.ನಾಣಯ್ಯ ಹಾಗೂ ಆಡಳಿತ ಮಂಡಳಿ ಇಡೀ ದೇಶವೇ ಗೌರವದಿಂದ ಕಾಣುವ ಅಪ್ರತಿಮ ವೀರರಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರನ್ನು ಅವಮಾನಿಸಿರುವುದು ಖಂಡನೀಯ. ಇದೊಂದು ಗಂಭೀರ ಪ್ರಕರಣವಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಿಡಿಗೇಡಿಯ ಬಂಧನಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಅಸೋಸಿಯೇಷನ್ ಖಂಡನೆ: ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಹಂಚೆಟ್ಟಿರ ಮನು ಮುದ್ದಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಿಡಿಗೇಡಿಯೊಬ್ಬ ವೀರ ಸೇನಾನಿಗಳನ್ನು ಅವಮಾನಿಸಿದ್ದು, ಈತನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮಕ್ಕಡ ಕೂಟ ಖಂಡನೆ: ಆಕ್ಷೇಪಾರ್ಹ ಹೇಳಿಕೆ ನೀಡಿರುವ ವ್ಯಕ್ತಿಯನ್ನು ತಕ್ಷಣ ಬಂಧಿಸಬೇಕು ಎಂದು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಒತ್ತಾಯಿಸಿದ್ದಾರೆ.