ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ಬಿಜೆಪಿ ಎಸ್.ಸಿ ಮೋರ್ಚಾದ ಸಭೆ ಮಡಿಕೇರಿಯ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಶನಿವಾರ ನಡೆಯಿತು.ಬಿಜೆಪಿ ಎಸ್ ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ ಎಂ ರವಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಎಸ್.ಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್ ಜಿ ಮೈಸೂರು ಪಾಲ್ಗೊಂಡಿದ್ದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯವರು ಹೆಚ್ಚಿನ ಸಂಖ್ಯೆಯಲ್ಲಿದ್ದು ಅವರನ್ನು ಸಂಘಟಿಸಿ ಪಕ್ಷದ ಬಲವರ್ಧನೆಗೆ ಶ್ರಮವಹಿಸುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದರು. ಸರ್ಕಾರದ ಯೋಜನೆಗಳು ಪರಿಶಿಷ್ಟರಿಗೆ ದೊರಕಿಸಿಕೊಡುವಲ್ಲಿ ಎಸ್ ಸಿ ಮೋರ್ಚಾವು ಶ್ರಮ ಪಡಬೇಕು ಎಂದರು. ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಪರಿಶಿಷ್ಟರಿಗೆ ಮಾಹಿತಿ ನೀಡುವಂತೆ ಕರೆ ನೀಡಿದರು.
ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನುದಾನವನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡುತ್ತಿದ್ದು ಈ ವಿಚಾರವಾಗಿ ಅನೇಕ ಹೋರಾಟ ಪ್ರತಿಭಟನೆ ನಡೆದಿದ್ದು ಎಸ್ಸಿ ಮೋರ್ಚಾವು ಎಲ್ಲ ಹೋರಾಟದಲ್ಲಿ ಪಾಲ್ಗೊಳ್ಳುತ್ತಿದ್ದು ಪಕ್ಷದ ಬಲವರ್ಧನೆಗೆ ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು.ಬಿಜೆಪಿ ಎಸ್ಸಿ ಮೋರ್ಚದ ಅಧ್ಯಕ್ಷ ಪಿಎಂ ರವಿ ಮಾತನಾಡಿ, ಜಿಲ್ಲೆಯಲ್ಲಿ ಎಸ್ ಸಿ.ಮೋರ್ಚಾವನ್ನು ಬಲಿಷ್ಠ ಗೊಳಿಸಲಾಗುವುದು ಈ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮವನ್ನು ಆಯೋಜಿಸಿ ಪರಿಶಿಷ್ಟ ಪರವಾಗಿ ಬಿಜೆಪಿ ಎಸ್ ಸಿ ಮೋರ್ಚಾ ಕಾರ್ಯನಿರ್ವಹಿಸಲಿದೆ ಎಂದರು. ಪರಿಶಿಷ್ಟರ ಕಾಲೋನಿಗಳಲ್ಲಿ ಸಭೆ ನಡೆಸಲಾಗುವುದು ಎಂದರು.
ಸಭೆಯಲ್ಲಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪಿ.ಕೆ ಚಂದ್ರು, ಚೇತನ್ ಶಿವಪ್ಪ, ಉಪಾಧ್ಯಕ್ಷರಾದ, ಕೆ.ಕೆ ದೇವಪ್ಪ, ರಾಮಕೃಷ್ಣ, ಮಡಿಕೇರಿ ಗ್ರಾಮಾಂತರ ಮಂಡಲ ಅಧ್ಯಕ್ಷ ಚೆನ್ನಿಗಯ್ಯ ಸೇರಿದಂತೆ ಜಿಲ್ಲೆಯ ಜಿಲ್ಲಾ ತಾಲೂಕು ಮಂಡಲ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು. ಪಿಕೆ ಚಂದ್ರು ಸ್ವಾಗತಿಸಿ ನಿರೂಪಿಸಿದರು. ಮಡಿಕೇರಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಹೀರಾ ಸುಬ್ಬಯ್ಯ ವಂದಿಸಿದರು.