ಕೊಡಗು ಜಿಲ್ಲಾ ವಿಮಾ ಅಧಿಕಾರಿ ಲೋಕಾಯುಕ್ತ ಬಲೆಗೆ

KannadaprabhaNewsNetwork |  
Published : Oct 06, 2026, 02:30 AM IST
 | Kannada Prabha

ಸಾರಾಂಶ

ರು.25 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಜಿಲ್ಲಾ ವಿಮಾ ಅಧಿಕಾರಿ ಹೇಮಕುಮಾರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಲುಕಿದ್ದಾರೆ.

ಮಡಿಕೇರಿ : ರು.25 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಜಿಲ್ಲಾ ವಿಮಾ ಅಧಿಕಾರಿ ಹೇಮಕುಮಾರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಲುಕಿದ್ದಾರೆ.

ಮಡಿಕೇರಿಯ ಮಹದೇವಪೇಟೆಯಲ್ಲಿರುವ ಕೆಜಿಐಡಿ ಕಚೇರಿಯಲ್ಲಿ ರೋಹಿಣಿ ಎಂಬವರಿಂದ ಲಂಚದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೃತ ಪೊಲೀಸ್ ಪೇದೆಯೊಬ್ಬರ ವಿಮಾ ಹಣ ಬಿಡುಗಡೆಗಾಗಿ ಲಂಚದ ಬೇಡಿಕೆ ಇಟ್ಟಿದ್ದರು ಎಂದು ಮಾಹಿತಿ ಲಭ್ಯವಾಗಿದೆ.

ಡಿಎಸ್ಪಿ ದಿನಕರ್ ಶೆಟ್ಟಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹೇಮಕುಮಾರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.ಲಂಚಕ್ಕೆ ಸಂಬಂಧಿಸಿದಂತೆ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆಯನ್ನೂ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳಿಂದ ಮುಂದಿನ ತನಿಖೆ ಮುಂದುವರಿದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಿತ್ರಕೂಟ ಆಯುರ್ವೇದ ಹಬ್ಬಕ್ಕೆ ವೈಭವದ ಚಾಲನೆ
ಗ್ರಾಮೀಣ ಭಾಗಕ್ಕೆ ಸಿಂಗಲ್ ಪ್ಲಾಟ್ ಅನುಮೋದನೆ ಸುಲಭ