ಕೊಡಗು ಜಿಲ್ಲಾಮಟ್ಟದ ರಾಷ್ಟ್ರೀಯ ಯುವ ದಿನ, ಯುವ ಸಪ್ತಾಹಕ್ಕೆ ಚಾಲನೆ

KannadaprabhaNewsNetwork |  
Published : Jan 13, 2024, 01:31 AM IST
ಚಿತ್ರ : 12ಎಂಡಿಕೆ6 : ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವ ದಿನ ಆಚರಿಸಲಾಯಿತು.  | Kannada Prabha

ಸಾರಾಂಶ

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹ ಉದ್ಘಾಟನಾ ಕಾರ್ಯಕ್ರಮ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲಾ ಸಭಾಂಗಣದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹ ಉದ್ಘಾಟನಾ ಕಾರ್ಯಕ್ರಮ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲಾ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.

ಶಾಸಕ ಡಾ.ಮಂತರ್ ಗೌಡ ಮಾತನಾಡಿದರು. ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಬಿ.ಎಂ.ಸರಸ್ವತಿ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಕೋರನ ಸರಸ್ವತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಮಡಿಕೇರಿ ತಾಲೂಕು ಯುವ ಒಕ್ಕೂಟದ ಅಧ್ಯಕ್ಷರಾದ ಬಾಳಾಡಿ ದಿಲೀಪ್ ಕುಮಾರ್, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷರಾದ ಪಿ.ಪಿ.ಸುಕುಮಾರ ಇತರರು ಪಾಲ್ಗೊಂಡಿದ್ದರು.ನಾಪೋಕ್ಲು ಡಿಗ್ರಿ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಜನ್ಮದಿನನೆಹರು ಯುವ ಕೇಂದ್ರ ಮಡಿಕೇರಿ, ಜಿಲ್ಲಾ ಯುವ ಒಕ್ಕೂಟ ಕೊಡಗು, ಶೌರ್ಯ ವಿಪತ್ತು ನಿರ್ವಹಣಾ ಘಟಕ ನಾಪೋಕ್ಲು, ಹಳೆ ವಿದ್ಯಾರ್ಥಿಗಳ ಸಂಘ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಾಪೋಕ್ಲು ಇವರ ಸಂಯುಕ್ತಾಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ ಕಾಲೇಜಿನಲ್ಲಿ ಶುಕ್ರವಾರ ನಡೆಯಿತು.ನಿವೃತ ಪ್ರಾಂಶುಪಾಲರು ಪ್ರೊ. ಕಾಂಡಂಡ ಉಷಾ ಜೋಯಪ್ಪ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಬಾಲ್ಯ, ಚಿಕಾಗೋ ಭಾಷಣದ ಬಗ್ಗೆ ವಿವರಣೆಯನ್ನು ನೀಡಿ, ವಿವೇಕಾನಂದ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಳೆ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷ ದಿಲೀಶ್ ಎನ್ ಬಿ., ವಿದ್ಯಾರ್ಥಿ ಜೀವನದಲ್ಲಿ ಸೇವೆ ಎಂಬ ವಿಷಯದ ಕುರಿತು ಮಾತನಾಡಿ, ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಕಾವೇರಿ ಪ್ರಕಾಶ್‌ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯ ಗುಣಮಟ್ಟ ಭರವಸೆಯ ಕೋಶ ಸಂಯೋಜಕ ಎಚ್.ಎಸ್. ನಂದೀಶ್ , ಸಂಪನ್ಮೂಲ ವ್ಯಕ್ತಿಗಳಾಗಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉಪಾಧ್ಯಕ್ಷ ಎಂ.ಬಿ. ದಿಲೀಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನವೀನ್‌, ಸಿಬ್ಬಂದಿ, ವಿದ್ಯಾರ್ಥಿಗಳು, ಶೌರ್ಯ ಸದಸ್ಯರು ಹಾಜರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ