ಕನ್ನಡಪ್ರಭ ವಾರ್ತೆ ಕುಶಾಲನಗರ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ, ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕುಶಾಲನಗರ ಪಟ್ಟಣದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಎರಡು ದಿನಗಳ ಕಾಲ ಏರ್ಪಡಿಸಿದ್ದ ಕೊಡಗು ಜಿಲ್ಲಾಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಮೇಳಕ್ಕೆ ವರ್ಣರಂಜಿತ ತೆರೆಬಿದ್ದಿತು.ಜಿಲ್ಲೆಯ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಂದ ಆಗಮಿಸಿದ್ದ 600 ಮಕ್ಕಳು ಎರಡು ದಿನಗಳ ಸ್ಕೌಟ್ಸ್ ಮತ್ತು ಗೈಡ್ಸ್ ನ ವಿವಿಧ ತರಬೇತಿ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಸ್ಕೌಟ್ಸ್ ಮತ್ತು ಗೈಡ್ಸ್ ನ ಮಹತ್ವವನ್ನು ಸಾರಿದರು.
ಶಿಕ್ಷಕರು ತರಬೇತಿ ನಿರತ ವಿದ್ಯಾರ್ಥಿಗಳಿಗೆ ವಿವಿಧ ಅಭ್ಯಾಸಾತ್ಮಕ ತರಬೇತಿ ನೀಡಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿ, ಸ್ಕೌಟ್, ಗೈಡ್ ಆಂದೋಲನದ ಉದ್ದೇಶವು ವಿದ್ಯಾರ್ಥಿಗಳು ಯುವಕರಲ್ಲಿ ಉತ್ತಮ ನಾಯಕತ್ವದೊಂದಿಗೆ ದೈಹಿಕ, ಬೌದ್ಧಿಕ, ಸಾಮಾಜಿಕ, ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಯಲ್ಲಿ ಸಹಾಯ ಮಾಡುವ ಮೂಲಕ ಅವರನ್ನು ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸಮುದಾಯದ ಜವಾಬ್ದಾರಿಯುತ ಉತ್ತಮ ನಾಗರಿಕರನ್ನಾಗಿ ರೂಪಿಸುವುದು ಮುಖ್ಯ ಧ್ಯೇಯವಾಗಿದೆ ಎಂದರು.ಶಾಲಾ ಮಕ್ಕಳಲ್ಲಿ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕತೆ ಮತ್ತು ರಾಷ್ಟ್ರೀಯ ಭಾವೈಕ್ಯತೆ ಹಾಗೂ ಸಾಮಾಜಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶ ಹೊಂದಲಾಗಿದೆ.
ಎರಡು ದಿನಗಳ ಕಾಲ ಕುಶಾಲನಗರದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದ ಜಿಲ್ಲಾಮಟ್ಟದ ಮಕ್ಕಳ ಮೇಳದ ಯಶಸ್ವಿ ಸಂಘಟನೆಗೆ ಶ್ರಮಿಸಿದವರನ್ನು ಹಾಗೂ ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳ ಶ್ರಮದ ಕುರಿತು ಶ್ಲಾಘಿಸಿದರು.ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ. ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ, ಸ್ಕೌಟ್ಸ್, ಗೈಡ್ಸ್ ನ
ಮಕ್ಕಳ ಮೇಳವು ಮಕ್ಕಳಲ್ಲಿ ಪರಸ್ಪರ ಪ್ರೀತಿ- ವಿಶ್ವಾಸ, ಸ್ನೇಹಪರತೆ ಹಾಗೂ ಏಕತೆ ಬೆಳೆಸುವಲ್ಲಿ ಸಹಕಾರಿಯಾಗಿದೆ.ಇಂತಹ ಮೇಳವನ್ನು ಸಂಘಟಿಸಲು ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.
ಜಿಲ್ಲಾ ಸ್ಕೌಟ್ಸ್ ಆಯುಕ್ತ ಜಿಮ್ಮಿ ಸಿಕ್ವೇರಾ , ಎರಡು ದಿನಗಳ ಕಾಲ ಮಕ್ಕಳ ಮೇಳದಲ್ಲಿ ಮಕ್ಕಳಿಗೆ ಕಲಿಸಲಾದ ತರಬೇತಿ ವಿವರಗಳನ್ನು ತಿಳಿಸಿದರು.ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಮಾತನಾಡಿ,
ಉತ್ತಮ ನಾಯಕತ್ವ ಗುಣ, ರಾಷ್ಟ್ರೀಯ ಭಾವೈಕ್ಯತೆ, ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯ ಎಂದು ತಿಳಿಸಿದರು.ಜಿಲ್ಲಾ ಪ್ರೌಢಶಾಲಾ ದೈಹಿಕ ಶಿಕ್ಷಣ ಸಂಘ ದ ಅಧ್ಯಕ್ಷ ಡಾ ಸದಾಶಿವಯ್ಯ ಎಸ್ ಪಲ್ಲೇದ್ ಮಾತನಾಡಿ,
ಸ್ಕೌಟ್ಸ್ ಮತ್ತು ಗೈಡ್ಸ್ ನ ಚಟುವಟಿಕೆಗಳು ಮಕ್ಕಳಲ್ಲಿ ಸ್ವಯಂ ಶಿಸ್ತು- ಸಂಯಮ ಬೆಳೆಸುವುದರೊಂದಿಗೆ ಅವರಲ್ಲಿರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಸಹಕಾರಿಯಾಗಿವೆ ಎಂದರು.
ಜಿಲ್ಲಾ ಸ್ಕೌಟ್ಸ್ ಆಯುಕ್ತ ಜಿಮ್ಮಿ ಸಿಕ್ವೇರಾ, ಎರಡು ದಿನಗಳ ಕಾಲ ನಡೆದ ಶಿಬಿರದ ಕುರಿತು ಮಾಹಿತಿ ನೀಡಿದರು.ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಆದ ಜಿಲ್ಲಾ ಗೈಡ್ಸ್ ಆಯುಕ್ತೆ ರಾಣಿ ಮಾಚಯ್ಯ, ಸ್ಥಾನೀಕ ಆಯುಕ್ತ ಎಚ್.ಆರ್.ಮುತ್ತಪ್ಪ,
ಕೋಶಾಧಿಕಾರಿ ಟಿ.ಎಂ.ಮುದ್ದಯ್ಯ, ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್, ಜಿಲ್ಲಾ ಗೈಡ್ಸ್ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನಾ, ಜಿಲ್ಲಾ ತರಬೇತಿ ಆಯುಕ್ತರಾದ ಕೆ.ಯು.ರಂಜಿತ್, ಎಚ್. ಮೈಥಿಲಿರಾವ್, ಸಂಸ್ಥೆಯ ರಾಜ್ಯ ಪ್ರತಿನಿಧಿ ಬಿ.ಎಸ್.ಕಾವೇರಿ, ಗೈಡ್ಸ್ ನ ಪ್ರಮುಖರಾದ ಕೆ.ಬಿ.ಉಷಾರಾಣಿ, ಎನ್.ಎಸ್.ಇಂದಿರಾ, ಸಂಪನ್ಮೂಲ ವ್ಯಕ್ತಿ ಟಿ.ಬಿ.ಕುಮಾರಸ್ವಾಮಿ, ಫ್ಲಾಕ್ ಲೀಡರ್ ಬಿ.ಕೆ.ಲಲಿತಾ , ಗೈಡ್ ಕ್ಯಾಪ್ಟನ್ ಬಿ.ಬಿ.ಜಾಜಿ,ಬುಲ್ ಬುಲ್ ಫ್ಲಾಕ್ ಲೀಡರ್ ಎಂ. ಡೈಸಿ ಫ್ರಾನ್ಸಿಸ್ , ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ, ಕುಶಾಲನಗರ
ಸ್ಥಳೀಯ ಸಂಸ್ಥೆಯ ಕಾರ್ಯಾಧ್ಯಕ್ಷ ಎ.ಎಂ.ತಮ್ಮಯ್ಯ, ಉಪಾಧ್ಯಕ್ಷರಾದ ಕೆ.ವಿ.ಅರುಣ್, ರಾಜೇಗೌಡ,ಕೆ.ಪಿ.ರಾಜು, ತೀರ್ಥೇಶ್ ಕುಮಾರ್, ಶಾಂತಿ, ರೋಹಿಣಿ, ಕಾರ್ಯದರ್ಶಿ ಎಂ.ಎಸ್.ಗಣೇಶ್,
ಸಹ ಕಾರ್ಯದರ್ಶಿ ಎಸ್.ಆರ್.ಶಿವಲಿಂಗ, ಸಿ.ಆರ್.ಪಿ., ಟಿ.ಈ.ವಿಶ್ವನಾಥ್, ಸ್ಥಳೀಯ ಸಂಸ್ಥೆಯ ವಿವಿಧ ಹಂತದ ಪದಾಧಿಕಾರಿಗಳು, ಸ್ಕೌಟ್ಸ್ ಮತ್ತು ಗೈಡ್ಸ್ ನ ದಳ ನಾಯಕರು, ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.ಮಕ್ಕಳ ಮೇಳದ ಅಂಗವಾಗಿ ಏರ್ಪಡಿಸಿದ್ದ ಶಿಬಿರಾಗ್ನಿ ಶಿಬಿರ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಮಕ್ಕಳು ಪ್ರದರ್ಶಿಸಿದ ಹಾಡು, ನೃತ್ಯ ಗಮನ ಸೆಳೆಯಿತು.