)
ಸುಂಟಿಕೊಪ್ಪ: ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ಏ. 29, 30ರಂದು ಸುಂಟಿಕೊಪ್ಪ ಜಿ.ಎಂ.ಪಿ. ಶಾಲಾ ಮೈದಾನದಲ್ಲಿ ನಡೆಯಲಿದೆ.
ಸಮ್ಮೇಳನಕ್ಕೆ ಅಂದಾಜು 18 ರಿಂದ19 ಲಕ್ಷ ರು. ವೆಚ್ಚ ತಗುಲಲಿದ್ದು, ಸಮ್ಮೇಳನವನ್ನು ಅರ್ಥಪೂರ್ಣವಾಗಿ ನಡೆಸಲು 11 ಉಪ ಸಮಿತಿಗಳ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ನಾವೆಲ್ಲರೂ ಕನ್ನಡ ಭಾಷೆ ಮತ್ತು ಸಾಹಿತ್ಯದ ಒಂದೇ ದೃಷ್ಟಿಕೋನದಿಂದ ಒಂದಾಗಿ ದುಡಿಯೋಣ ಎಂದು ಕರೆ ನೀಡಿದರು.
5 ಲಕ್ಷ ರು. ಅನುದಾನವನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ನೀಡುತ್ತದೆ. ಆದರೆ ಈಗಾಗಲೇ ಸರಕಾರದ ನೀತಿ ನಿಯಮಗಳಿಗೆ ಅನುಗುಣವಾಗಿ ಅರ್ಥಿಕ ವರ್ಷ ಮುಗಿದಿದ್ದು, ಏ. 30ರೊಳಗೆ ಲೆಕ್ಕಪತ್ರ ಮಂಡಿಸಬೇಕಾದ ಹಿನ್ನೆಲೆಯಲ್ಲಿ ಏಪ್ರಿಲ್ ತಿಂಗಳಿನಲ್ಲೇ ಸಮ್ಮೇಳನ ಮಾಡಬೇಕಾಗಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಮಾತನಾಡಿದ ಶಾಲಾ ಶಿಕ್ಷಕ ಶಿಕ್ಷಕಿಯರು ಎಸ್ಸೆಸ್ಸೆಲ್ಸಿ ಪರೀಕ್ಷೆ, ಪಿಯುಸಿ ಪರೀಕ್ಷೆ ಮೌಲ್ಯಮಾಪನ, 1 ತಿಂಗಳ ಕಾಲ ನಡೆಯುವ ಜನಗಣತಿ ಕುರಿತು ಮಾಹಿತಿ ನೀಡಿದರಲ್ಲದೆ ಸಮ್ಮೇಳನದ ಯಶಸ್ವಿಗೆ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವುದು ಅಸಾಧ್ಯ ಎಂಬ ಅಂಶವನ್ನು ಸಭೆಯ ಗಮನಕ್ಕೆ ತಂದರು. ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಶಿಕ್ಷಣ ಇಲಾಖೆ ಮೂಲಕ ಸಮ್ಮೇಳನ ನಡೆಯುವ 2 ದಿನಗಳ ಮಟ್ಟಿಗೆ ಅನುಮತಿ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಜಿಲ್ಲಾಡಳಿತದ ಕಾನೂನು ಸಲಹೆಗಾರರಾದ ಎ..ಲೋಕೇಶ್ ಕುಮಾರ್ ಭರವಸೆ ನೀಡಿದ್ದಾರೆ ಎಂದು ಟಿ.ಪಿ. ರಮೇಶ್ ಮಾಹಿತಿ ನೀಡಿದರು. ಇದೇ ಸಂದರ್ಭ ಸಮ್ಮೇಳನದ ಯಶಸ್ವಿಗಾಗಿ ವಿವಿಧ ಉಪ ಸಮಿತಿ ರಚಿಸಲಾಯಿತು. ವೇದಿಕೆಯಲ್ಲಿ ಸುಂಟಿಕೊಪ್ಪ ಹೋಬಳಿ ಕಸಾಪ ಅಧ್ಯಕ್ಷ ಪಿ.ಎಫ್. ಸೆಬಾಸ್ಟೀನ್, ಕುಶಾಲನಗರ ತಾಲೂಕು ಕಸಾಪ ಅಧ್ಯಕ್ಷ ಕೆ.ಎಸ್. ನಾಗೇಶ್, ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಎಸ್.ಎ. ಮುನೀರ್ ಆಹ್ಮದ್, ರೇವತಿ ರಮೇಶ್, ಗೌರವ ಕೋಶಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್, ಸುಂಟಿಕೊಪ್ಪ ಗ್ರಾಪಂ ಮಾಜಿ ಅಧ್ಯಕ್ಷ ಪಿ.ಆರ್. ಸುನಿಲ್ ಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೆ.ಎನ್. ದೇವರಾಜ್, ಸುಂಟಿಕೊಪ್ಪ ಹೋಬಳಿ ಪ್ರಧಾನ ಕಾರ್ಯದರ್ಶಿ ಕೆ.ಎಸ್. ಅನಿಲ್ ಕುಮಾರ್, ಮಹಿಳಾ ಕಾರ್ಯದರ್ಶಿ ಲೀಲಾ ಮೇದಪ್ಪ, ನಿಕಟಪೂರ್ವ ಎಂ.ಎಸ್. ಸುನಿಲ್, ಪಿಡಿಒಗಳಾದ ವಿ.ಜಿ. ಲೋಕೇಶ್, ನಂದೀಶ್, ರವೀಶ್, ನಾಕೂರು ಶಿರಂಗಾಲ ಗ್ರಾಪಂ ಕಾರ್ಯದರ್ಶಿ ಚಂದ್ರಶೇಖರ್, ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ, ಆಟೋ ಚಾಲಕರ ಸಂಘದ ಅಧ್ಯಕ್ಷ ಕೆ.ಎಚ್. ಶರೀಫ್, ಜಿಲ್ಲಾ ಮತ್ತು ತಾಲೂಕು ಹಾಗೂ ಹೋಬಳಿ ಕಸಾಪ ವಿವಿಧ ಪದಾಧಿಕಾರಿಗಳು ಕಸಾಪ ಸದಸ್ಯರು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.