)
ವಿಘ್ನೇಶ್ ಎಂ. ಭೂತನಕಾಡು
ಗಂಭೀರವಾಗಿ ಪರಿಗಣಿಸಿಲ್ಲ: ಎರಡೂವರೆ ತಿಂಗಳಲ್ಲಿ ಐದು ಮಂದಿ ಮೃತಪಟ್ಟಿದ್ದರೂ ಕೂಡ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಹೀಗೆ ಪರಿಸ್ಥಿತಿ ಮುಂದುವರೆದರೆ ಮತ್ತಷ್ಟು ಮಂದಿ ಕಾಡಾನೆ ದಾಳಿಗೆ ಒಳಗಾಗುವ ಸಾಧ್ಯತೆಯಿದ್ದು, ಸಂಬಂಧಿಸಿದ ಇಲಾಖೆ ಈ ಬಗ್ಗೆ ಜಾಗೃತವಾಗಬೇಕೆಂಬ ಒತ್ತಾಯ ಕೇಳಿಬಂದಿದೆ.
ತೋಟದಲ್ಲಿಯೇ ವಾಸ್ತವ್ಯ: ಕಾಡಿನಲ್ಲಿ ಆಹಾರ ಕೊರತೆ ಪರಿಣಾಮ ಪ್ರತಿ ದಿನ ಕೂಡ ನಾಡಿಗೆ ಕಾಡಾನೆಗಳು ಬರುತ್ತಿದೆ. ಕಾಫಿ ತೋಟಗಳಲ್ಲೇ ಆನೆಗಳು ವಾಸ್ತವ್ಯ ಹೂಡಿದ್ದು ಕಾರ್ಮಿಕರು, ಬೆಳೆಗಾರರು, ವಿದ್ಯಾರ್ಥಿ ಸೇರಿದಂತೆ ಹಲವರ ಮೇಲೆ ದಾಳಿ ನಡೆಸಿದೆ.ಬ್ಯಾರಿಕೇಡ್ ಪೂರ್ಣಗೊಂಡಿಲ್ಲ: ಕಾಡಾನೆ ಹಾವಳಿ ನಿಯಂತ್ರಣಕ್ಕೆ ಸರ್ಕಾರ ಇದೀಗ ರೈಲ್ವೇ ಬ್ಯಾರಿಕೇಡ್ ಗೆ ಹೆಚ್ಚಿನ ಅನುದಾನ ಮೀಸಲಿಡುತ್ತಿದೆ. ಆದರೆ ಈ ಕೆಲಸ ಎಲ್ಲ ಕಡೆ ಪೂರ್ಣಗೊಂಡಿಲ್ಲ. ಆದ್ದರಿಂದ ಸುಲಭವಾಗಿ ನಾಡಿಗೆ ಬರುತ್ತಿದೆ. ಆನೆ ಹಾವಳಿ ನಿಯಂತ್ರಣಕ್ಕೆ ಶಾಶ್ವತವಾದ ವೈಜ್ಞಾನಿಕ ಕ್ರಮ ಅಗತ್ಯವಾಗಿದೆ. ಈ ಬಗ್ಗೆ ಸರ್ಕಾರ ಗಂಭೀರ ನಿರ್ಣಯ ತೆಗೆದುಕೊಳ್ಳಬೇಕಾಗಿದೆ.
ಪೊನ್ನಣ್ಣ ಸದನದಲ್ಲಿ ಪ್ರಸ್ತಾಪ: ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ಗುರುವಾರ ವಿಧನಸಭಾ ಅಧಿವೇಶನದಲ್ಲಿ ಕಾಡಾನೆ ಹಾವಳಿಯ ಬಗ್ಗೆ ಗಂಭೀರವಾಗಿ ಪ್ರಸ್ತಾಪಿಸಿ, ಕೂಡಲೇ ಸರ್ಕಾರ ವೈಜ್ಞಾನಿಕ ಕ್ರಮಕ್ಕೆ ಮುಂದಾಗಲು ಸಂಪುಟ ಸಭೆ ನಡೆಸುವಂತೆ ಆಗ್ರಹಿಸಿದ್ದಾರೆ.ಬಿಜೆಪಿ ಪ್ರತಿಭಟನೆ: ಜಿಲ್ಲೆಯಲ್ಲಿ ನಿರಂತರವಾಗಿ ಆನೆ ಹಾವಳಿಯಿಂದ ಜನರು ಮೃತಪಟ್ಟಿದ್ದು, ಇಲಾಖೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿ ಜಿಲ್ಲಾ ಬಿಜೆಪಿಯಿಂದ ಮಡಿಕೇರಿಯ ಅರಣ್ಯ ಭವನದಲ್ಲಿ ಶುಕ್ರವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.*ಕಾಡಾನೆ ಹಾವಳಿಯಿಂದಾಗಿ ರೈತರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜೀವ ಕಳೆದುಕೊಳ್ಳುತ್ತಿದ್ದಾರೆ. ಈ ಕುರಿತು ಅರಣ್ಯ ಇಲಾಖೆ ಈ ಬಗ್ಗೆ ಮೌನ ವಹಿಸಿದ್ದು, ಸರ್ಕಾರ ಕೂಡಾ ಶಾಶ್ವತ ಪರಿಹಾರ ಒದಗಿಸುವಲ್ಲಿ ವಿಫಲವಾಗಿದೆ. ಇದನ್ನು ವಿರೋಧಿಸಿ ಜಿಲ್ಲಾ ಬಿಜೆಪಿಯಿಂದ ಶುಕ್ರವಾರ ಅರಣ್ಯ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
-ರವಿ ಕಾಳಪ್ಪ, ಅಧ್ಯಕ್ಷರು ಕೊಡಗು ಜಿಲ್ಲಾ ಬಿಜೆಪಿ*ಕೊಡಗಿನಲ್ಲಿ ಹತ್ತು ದಿನದಲ್ಲಿ ಮೂವರು ಆನೆ ದಾಳಿಯಿಂದ ಮೃತಪಟ್ಟಿದ್ದಾರೆ. ಇದರಿಂದ ಸರ್ಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಸಂಪುಟ ಸಭೆಯನ್ನು ನಡೆಸಿ ಹಾವಳಿ ತಡೆಗೆ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಕ್ರಮ ತೆಗೆದುಕೊಳ್ಳಬೇಕು. ರೈಲ್ವೇ ಬ್ಯಾರಿಕೇಡ್ ಅಳವಡಿಸಲು ಬಜೆಟ್ ನಲ್ಲಿ ರು.1500 ಕೋಟಿ ಅನುದಾನ ಘೋಷಿಸಿದ್ದು, ಹೆಚ್ಚಿನ ಪಾಲನ್ನು ಕೊಡಗಿಗೆ ನೀಡಬೇಕು.
-ಎ.ಎಸ್. ಪೊನ್ನಣ್ಣ, ಶಾಸಕರು ವಿರಾಜಪೇಟೆ ಕ್ಷೇತ್ರ