ಕೊಡಗು ಗೌಡ ಸಮಾಜದಿಂದ ಮುಖ್ಯಮಂತ್ರಿಗೆ ಗೌರವಾರ್ಪಣೆ

KannadaprabhaNewsNetwork |  
Published : Feb 21, 2026, 02:45 AM IST
ಚಿತ್ರ :  19ಎಂಡಿಕೆ3 : ಕೊಡಗು ಗೌಡ ಸಮಾಜದಿಂದ ಮುಖ್ಯಮಂತ್ರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.  | Kannada Prabha

ಸಾರಾಂಶ

ಮಡಿಕೇರಿ ಕೊಡಗು ಗೌಡ ಸಮಾಜದ ವತಿಯಿಂದ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಮಡಿಕೇರಿ ಕೊಡಗು ಗೌಡ ಸಮಾಜದ ವತಿಯಿಂದ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.

ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಉಪಸ್ಥಿತಿಯಲ್ಲಿ ಕೊಡಗು ಅರೆಭಾಷೆ ಗೌಡ ಸಮುದಾಯ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರನ್ನು ಬೆಂಗಳೂರಿನಲ್ಲಿ ಸನ್ಮಾನಿಸಲಾಯಿತು. ಇತ್ತೀಚಿಗೆ ಬೆಂಗಳೂರಿನಲ್ಲಿ ಜರುಗಿದ ಅರೆಭಾಷೆ ಗೌಡ ಸಮುದಾಯದ ಸಮಾರಂಭದಲ್ಲಿ ನೀಡಿದ ಆಶ್ವಾಸನೆಯಂತೆ, ಮುಖ್ಯಮಂತ್ರಿ, ಅರೆಭಾಷೆ ಗೌಡ ಸಮುದಾಯದ ಸಂಸ್ಕೃತಿ, ಶೈಕ್ಷಣಿಕ ಮತ್ತು ಕ್ರೀಡಾ ಕೇಂದ್ರ ಸ್ಥಾಪನೆ ಉದ್ದೇಶಕ್ಕಾಗಿ, ಮಡಿಕೇರಿ ತಾಲೂಕು ಮದೆ ಗ್ರಾಮದ ಕಾಟಕೇರಿ ಬಳಿ, 6 ಎಕರೆ ಜಾಗ ಮಂಜೂರು ಮಾಡಲು ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದ್ದರು.

ದಶಕಗಳಿಂದ ಕೊಡಗಿನ ಜನತೆಯನ್ನು ಕಾಡುತ್ತಿದ್ದ, ಅತ್ಯಂತ ಜಟಿಲವಾದ ಜಮ್ಮ ಬಾಣೆ ಸಮಸ್ಯೆಯ ಪರಿಹಾರಕ್ಕಾಗಿ, ರಾಜ್ಯ ಕಂದಾಯ ಮಸೂದೆ 2025 ರ ತಿದ್ದುಪಡಿ ವಿದೇಯಕಕ್ಕೆ ಅನುಮೋದನೆ ನೀಡಿರುವುದಕ್ಕಾಗಿ ಮುಖ್ಯಮಂತ್ರಿಗಳನ್ನು ಕಾವೇರಿ ನಿವಾಸದಲ್ಲಿ ಸನ್ಮಾನಿಸಲಾಯಿತು.

ಅರೆಭಾಷೆ ಗೌಡ ಸಮುದಾಯದ ಪ್ರಮುಖರಾದ ಕೊಲ್ಯದ ಗಿರೀಶ್, ಸೂರ್ತಲೆ ಸೋಮಣ್ಣ, ಪುಳಕಂಡ ಸಂದೀಪ್, ಕಾಳೇರಮ್ಮನ ನಂದ, ಪೊನ್ನಚ್ಚನ ಮಧು, ಕೊಂಬನ ಪ್ರವೀಣ್, ನಂಗಾರು ನಾಣಯ್ಯ, ಪಾಣ್ತಳೆ ಪಳಂಗಪ್ಪ, ಕೈಕೇರ ಮನೋಹರ್, ಆಮೆ ಸೀತಾರಾಮ್, ಪೇರಿಯನ ಘನಶ್ಯಾಮ್, ಮೂಲೆಮಜಲು ಅಮಿತ, ಚೊಕ್ಕಾಡಿ ಪ್ರೇಮ ರಾಘವಯ್ಯ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತ್ರಿಪದಿಗಳ ಭಾಷಾಂತರ ಕಾರ್ಯ ನಡೆಯಬೇಕು: ಲೀಲಾಕುಮಾರಿ
ಪವನ ವಿದ್ಯುತ್ ಕಂಬ ತೆರವಿಗೆ ಆಗ್ರಹ