ಗಾಜಿನ ಸೇತುವೆಗಳಿಂದ ಕೊಡಗು ನರಕ: ನಾಚಪ್ಪ ಆರೋಪ

KannadaprabhaNewsNetwork |  
Published : Sep 11, 2024, 01:06 AM IST
ಚಿತ್ರ : 10ಎಂಡಿಕೆ3 : ಚೇರಂಬಾಣೆಯಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು.  | Kannada Prabha

ಸಾರಾಂಶ

ಕೊಡಗಿನಲ್ಲಿ 16ಕ್ಕೂ ಹೆಚ್ಚು ಗ್ಲಾಸ್ ಬ್ರಿಡ್ಜ್‌ಗಳ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ ಎಂದು ತಿಳಿದು ಬಂದಿದೆ. ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ ಗಾಜಿನ ಸೇತುವೆಗಳು ನಿರ್ಮಾಣಗೊಂಡರೆ ಕೊಡವ ಲ್ಯಾಂಡ್ ನರಕವಾಗಲಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗಿನಲ್ಲಿ 16ಕ್ಕೂ ಹೆಚ್ಚು ಗ್ಲಾಸ್ ಬ್ರಿಡ್ಜ್‌ಗಳ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ ಎಂದು ತಿಳಿದು ಬಂದಿದೆ. ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ ಗಾಜಿನ ಸೇತುವೆಗಳು ನಿರ್ಮಾಣಗೊಂಡರೆ ಕೊಡವ ಲ್ಯಾಂಡ್ ನರಕವಾಗಲಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ.

ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‌ಸಿ ವತಿಯಿಂದ ಚೇರಂಬಾಣೆಯಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು.

ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯ ಮೂಲಕ ರೆಸಾರ್ಟ್, ವಿಲ್ಲಾ, ಟೌನ್ ಶಿಪ್‌ಗಳ ನಿರ್ಮಾಣಕ್ಕಾಗಿ ಬೆಟ್ಟಗುಡ್ಡಗಳ ನಾಶ, ಮರಗಳ ಹನನವಾಗುತ್ತಿದೆ. ಪ್ರಾಕೃತಿಕ ವಿಕೋಪಕ್ಕೆ ಕಾರಣವಾಗಬಲ್ಲ ಈ ಅಂಶಗಳನ್ನು ಮುಚ್ಚಿ ಹಾಕುತ್ತಿರುವ ಸರ್ಕಾರ ಬಂಡವಾಳಶಾಹಿಗಳ ಪರವಾದ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ ಎಂದು ಅವರು ಆರೋಪ ಮಾಡಿದರು.

ಆದಿಮಸಂಜಾತ ಕೊಡವರ ಹಕ್ಕುಗಳನ್ನು ರಕ್ಷಿಸಲು ಕೊಡವ ಲ್ಯಾಂಡ್‌ ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್‌ಟಿ ಟ್ಯಾಗ್ ನೀಡುವುದು ಅಗತ್ಯವಾಗಿದೆ. ಇದಕ್ಕಾಗಿ ವ್ಯಾಪಕ ಜನಜಾಗೃತಿ ಮತ್ತು ಜಿಲ್ಲೆಯಾದ್ಯಂತ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

26ರಂದು ಹುದಿಕೇರಿಯಲ್ಲಿ ಜನಜಾಗೃತಿ:

ಸಿಎನ್‌ಸಿ ವತಿಯಿಂದ ಸೆ.16 ರಂದು ಹುದಿಕೇರಿಯಲ್ಲಿ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ನಾಚಪ್ಪ ಮಾಹಿತಿ ನೀಡಿದರು.

ಚೇರಂಬಾಣೆಯಲ್ಲಿ ನಡೆದ ಜನಜಾಗೃತಿ ಮನವ ಸರಪಳಿಯಲ್ಲಿ ಕಲ್ಮಾಡಂಡ ದಮಯಂತಿ, ಕಲ್ಮಾಡಂಡ ರೀಟ, ಮಂದಪಂಡ ರಮ್ಯಾ, ಕಲ್ಮಾಡಂಡ ಕವಿತಾ, ಕೇಕಡ ಗಂಗೆ ಅಪ್ಪಣ್ಣ, ಪಟ್ಟಮಾಡ ಸೀತಮ್ಮ, ತೇಲಪಂಡ ಶೈಲ, ಅಳಮಂಡ ಜೈ, ಅಜ್ಜಿನಂಡ ಪಾಪಣ್ಣ, ಪಟ್ಟಮಾಡ ಕುಶ ಮತ್ತಿತರರು ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ