ಕನ್ನಡಪ್ರಭ ವಾರ್ತೆ ನಾಪೋಕ್ಲು
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆ ಕೋರಂಗಾಲ ಸಹಯೋಗದಲ್ಲಿ ಸೋಮವಾರ ದಿ. ಡಾ. ಇರುವೈಲು ರಘುರಾಮ ಅಸ್ರಣ್ಣ ಮತ್ತು ಶ್ರೀಮತಿ ಲೀಲಾ ಅಸ್ತ್ರಣ್ಣ ದತ್ತಿ ಉಪನ್ಯಾಸ ಮತ್ತು ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಲ್ಲರನ್ನೂ ಸರಿ ಸಮಾನರಾಗಿ ಕಾಣುವ ಸಮಾಜ ನಮ್ಮ ಜಿಲ್ಲೆಯಲ್ಲಿದೆ. ಕೊಡಗಿನ ನೆಲ ಜಲವನ್ನು ಕವಿ ಪಂಜೆ ಮಂಗೇಶರಾಯರು ದೇವ ಸನ್ನಿಧಿ ಎಂದು ಬಣ್ಣಿಸಿರುತ್ತಾರೆ. ಶುದ್ಧ ಗಾಳಿ ಸ್ವಚ್ಛ ನೆಲ ನಮ್ಮ ಜಿಲ್ಲೆಯಲ್ಲಿದೆ ಎಂದು ಸಮೀಕ್ಷೆ ಹೇಳಿದೆ. ಹುಟ್ಟಿನಿಂದ ಸಾವಿನವರೆಗೆ ನಮ್ಮಲ್ಲಿ ವಿಶಿಷ್ಟ ಪದ್ಧತಿಗಳು ಇದ್ದರೂ ಸಾವು ನೋವಿನಲ್ಲೂ ಸಹಾಯದ ಪದ್ಧತಿ ಇಂದಿಗೂ ನಡೆದು ಬಂದಿರುವುದು ನಮ್ಮ ಸಂಸ್ಕೃತಿಯಲ್ಲಿ ಮಾತ್ರ ಎಂದರು.ಕಾರ್ಯಕ್ರಮ ಉದ್ಘಾಟಿಸಿದ ಶಾಲೆಯ ವ್ಯವಸ್ಥಾಪಕ ಚೀಯಕಪೂವಂಡ ಮಿಥುನ್ ಚಂಗಪ್ಪ ಅವರು, ಆಂಗ್ಲಭಾಷೆ ವ್ಯಾವಹಾರಿಕ ಭಾಷೆಯಾಗಬೇಕು. ಅನ್ನದ ಭಾಷೆ ಮಣ್ಣಿನ ಭಾಷೆ ಕನ್ನಡಕ್ಕೆ ನಾವು ಆದ್ಯತೆ ನೀಡಬೇಕು ಎಂದರು.
ಮುಖ್ಯ ಶಿಕ್ಷಕಿ ಶ್ವೇತನ್ ಚಂಗಪ್ಪ ಮಾತನಾಡಿ, ನಮ್ಮ ಪೂರ್ವಜರು ಹಾಕಿಕೊಟ್ಟ ಸಂಸ್ಕೃತಿ ಆಚಾರ ವಿಚಾರ ಸಂಪ್ರದಾಯದ ಅಸ್ಮಿತೆಯನ್ನು ಇಂದಿನ ಮಕ್ಕಳು ಮುಂದುವರಿಸಿಕೊಂಡು ಹೋಗಬೇಕು .ಆದ್ದರಿಂದ ನಮ್ಮ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರದು ಎಂದರು.
ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುನಿಲ್ ಪತ್ರಾವೋ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ, ಮುನಿರ್ ಅಹ್ಮದ್, ಗೌರವ ಕೋಶಾಧಿಕಾರಿ ಸಂಪತ್ ಕುಮಾರ್ ಮತ್ತಿತರರು ಭಾಗವಹಿಸಿದರು.