ಜಮ್ಮು ಕಾಶ್ಮೀರದ ಪೂಂಛ್‌ನಲ್ಲಿ ಸೇನಾ ವಾಹನ ಅಪಘಾತದಲ್ಲಿ ಕೊಡಗು ಜಿಲ್ಲೆ ಯೋಧ ನಿಧನ

ಸಾರಾಂಶ

ಇತ್ತೀಚೆಗೆ ಜಮ್ಮು ಕಾಶ್ಮೀರದ ಪೂಂಛ್‌ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರ ಗ್ರಾಮದ ಸೈನಿಕ ಪಳಂಗೋಟಿ ದಿವಿನ್ (28) ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ನಿಧನರಾಗಿದ್ದಾರೆ.

ಮಡಿಕೇರಿ: ಇತ್ತೀಚೆಗೆ ಜಮ್ಮು ಕಾಶ್ಮೀರದ ಪೂಂಛ್‌ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರ ಗ್ರಾಮದ ಸೈನಿಕ ಪಳಂಗೋಟಿ ದಿವಿನ್ (28) ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ನಿಧನರಾಗಿದ್ದಾರೆ.

 ಇದರೊಂದಿಗೆ ಘಟನೆಯಲ್ಲಿ ಮೃತರಾದ ಕರ್ನಾಟಕದ ಸೈನಿಕರ ಸಂಖ್ಯೆ 4ಕ್ಕೆ ಏರಿದೆ. ತೀವ್ರ ಗಾಯಗೊಂಡಿದ್ದ ಪಳಂಗೋಟಿ ದಿವಿನ್ ಅವರನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

 ದಿವಿನ್ ತಾಯಿ ಜಯ ಕೂಡ ಆಸ್ಪತ್ರೆ ತಲುಪಿದ್ದರು. ಆದರೆ ಶ್ವಾಸಕೋಶಕ್ಕೆ ತೀವ್ರ ಹಾನಿ ಆದ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ. ತಂದೆ-ತಾಯಿಗೆ ಏಕೈಕ ಮಗನಾಗಿದ್ದ ದಿವಿನ್ 10 ವರ್ಷ ಹಿಂದೆ ಸೇನೆ ಸೇರಿದ್ದರು. ಇತ್ತೀಚೆಗೆ ಇವರ ವಿವಾಹ ನಿಶ್ಚಿತಾರ್ಥ ಕೂಡ ನೆರವೇರಿದ್ದು ಇದೇ ಫೆಬ್ರವರಿಯಲ್ಲಿ ವಿವಾಹ ನಿಶ್ಚಯವಾಗಿತ್ತು.

Share this article