ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಸಾರ್ವಜನಿಕರು ಪ್ರಜಾತಂತ್ರದ ಮತದಾನದ ಹಬ್ಬದಲ್ಲಿ ಪಾಲ್ಗೊಳ್ಳುವಂತೆ ಕೋರಿದರು.
21-ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಒಟ್ಟು 546 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಒಟ್ಟು 4,70,766 ಮತದಾರರಿದ್ದು, 2,30,568 ಪುರುಷರು ಮತ್ತು 2,40,182 ಮಹಿಳಾ ಮತದಾರರು, 16 ಇತರ ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದರು.ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 273 ಮತಗಟ್ಟೆಗಳಿದ್ದು, ಒಟ್ಟು 2,38,733 ಮತದಾರರಿದ್ದಾರೆ. ಇದರಲ್ಲಿ 1,16,143 ಪುರುಷರು ಮತ್ತು 1,22,581 ಮಹಿಳಾ ಮತದಾರರಿದ್ದಾರೆ. 9 ಮಂದಿ ಇತರ ಮತದಾರರು ಇದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 273 ಮತಗಟ್ಟೆಗಳಿದ್ದು, ಒಟ್ಟು 2,32,033 ಮತದಾರರಿದ್ದಾರೆ. ಇವರಲ್ಲಿ 1,14,425 ಪುರುಷ ಮತ್ತು 1,17,601 ಮಹಿಳಾ ಮತದಾರರು, 7 ಇತರ ಮತದಾರರು ಇದ್ದಾರೆ ಎಂದರು.
ಜಿಲ್ಲೆಯಲ್ಲಿ ಒಟ್ಟು 546 ಮತಗಟ್ಟೆಗಳಿದ್ದು, 604 ಪಿಆರ್‌ಒ, 604 ಎಪಿಆರ್‌ಒ, 1208 ಪಿಒ ಒಟ್ಟು 2,416 ಸಿಬ್ಬಂದಿ ನಿಯೋಜಿಸಲಾಗಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 273 ಮತಗಟ್ಟೆಗಳಿದ್ದು, 302 ಪಿ.ಆರ್‌ಒ, 302 ಎಪಿಆರ್‌ಒ, 604 ಪಿ.ಒ ಒಟ್ಟು 1208 ಸಿಬ್ಬಂದಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 273 ಮತಗಟ್ಟೆಗಳಿದ್ದು, 302 ಪಿ.ಆರ್‌ಒ, 302 ಎಪಿಆರ್‌ಒ, 604 ಪಿ.ಒ ಒಟ್ಟು 1208 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ನೀತಿಸಂಹಿತೆ 32 ಪ್ರಕರಣ ದಾಖಲು:
ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಒಟ್ಟು 10 ಸಖಿ ಬೂತ್‌ಗಳು, 6 ಸಾಂಪ್ರದಾಯಿಕ ಮತಗಟ್ಟೆಗಳು, 2 ವಿಶೇಷಚೇತನ ಮತಗಟ್ಟೆಗಳು, 2 ಯುವ ಮತದಾರರ ಮತಗಟ್ಟೆಗಳು ಮತ್ತು 3 ಥೀಮ್ ಬೇಸ್ಡ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಮತಗಟ್ಟೆಗಳು ಸಾರ್ವಜನಿಕರ ಆಕರ್ಷಣೀಯ ಮತಗಟ್ಟೆಗಳಾಗಲಿದ್ದು, ಮತದಾನದ ಪ್ರಮಾಣ ಹೆಚ್ಚಿಸಲು ವಿಶೇಷ ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ ಎಂದರು.
ಮತಗಟ್ಟೆ ವ್ಯಾಪ್ತಿಯ 200 ಮೀಟರ್ ಸುತ್ತಲೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ, ಅಭ್ಯರ್ಥಿಗಳಿಗೆ ಹಾಗೂ ಏಜೆಂಟರ್ ಎಲ್ಲರಿಗೂ ಸೇರಿದಂತೆ ಪ್ರಚಾರ ನಿಷೇಧಿಸಿದೆ. ಈ ನಿಯಮ ಉಲ್ಲಂಘಿಸಿದಲ್ಲಿ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಇದ್ದರು...................