ಕೊಡಗು ವಿವಿ ಶೈಕ್ಷಣಿಕ ಸಾಲಿನ ಕ್ರೀಡೋತ್ಸವ

KannadaprabhaNewsNetwork |  
Published : Jun 09, 2024, 01:34 AM IST
ಚಿತ್ರ :  8ಎಂಡಿಕೆ1 : ಕೊಡಗು ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಸೀನಪ್ಪ ಮಾತನಾಡಿದರು. | Kannada Prabha

ಸಾರಾಂಶ

ಜ್ಞಾನ ಕಾವೇರಿ ಕ್ಯಾಂಪಸ್‌ ಚಿಕ್ಕ ಅಳುವಾರ ಇಲ್ಲಿ ವಿವಿಧ ವಿಭಾಗಗಳ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ 2023-24ನೇ ಸಾಲಿನ ಶೈಕ್ಷಣಿಕ ಸಾಲಿನ ಕ್ರೀಡೋತ್ಸವ ನಡೆಯಿತು. ಕ್ರೀಡೆಗಳು ಎಂದ ಮೇಲೆ ಸೋಲು ಗೆಲುವು ಸರ್ವೇ ಸಾಮಾನ್ಯ ಎಂದು ಗಣ್ಯರು ಹೇಳಿದರು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಪಠ್ಯದ ಕಲಿಕೆಯ ಜೊತೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢಗೊಳ್ಳುವುದಕ್ಕೆ ಪ್ರೇರಣೆಯನ್ನು ಒದಗಿಸುತ್ತದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಸಚಿವ ಡಾ. ಸೀನಪ್ಪ ಅಭಿಪ್ರಾಯಿಸಿದರು.

ಜ್ಞಾನ ಕಾವೇರಿ ಕ್ಯಾಂಪಸ್ ಚಿಕ್ಕ ಅಳುವಾರ ಇಲ್ಲಿ ವಿವಿಧ ವಿಭಾಗಗಳ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ 2023-24ನೇ ಶೈಕ್ಷಣಿಕ ಸಾಲಿನ ಕ್ರೀಡೋತ್ಸವವನ್ನುದ್ದೇಶಿಸಿ ಮಾತನಾಡಿದ ಅವರು, ಕ್ರೀಡೆಗಳು ಎಂದ ಮೇಲೆ ಸೋಲು ಗೆಲುವು ಸರ್ವೇ ಸಾಮಾನ್ಯ, ಧನಾತ್ಮಕವಾಗಿ ತೆಗೆದುಕೊಂಡು ಜೀವನದ ಗುರಿ ತಲುಪುವ ಕಡೆಗೆ ಲಕ್ಷ್ಯ ಕೊಡಬೇಕು. ವಿದ್ಯಾರ್ಥಿಗಳಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ತಮ್ಮಲ್ಲಿ ಹುದುಗಿರುವ ಸುಪ್ತ ಪ್ರತಿಭೆಯನ್ನು ಹೊರಹಾಕಲು ಇರುವ ಉತ್ತಮ ವೇದಿಕೆ. ಪಠ್ಯೇತರ ಚಟುವಟಿಕೆಗಳಿಂದ ವಂಚಿತರಾಗಬಾರದು. ಓದಿನ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಸಹ ಸಂಪೂರ್ಣ ತೊಡಗಿಸಿಕೊಳ್ಳಲು ತಿಳಿಸಿದರು.

ಈ ಸಂದರ್ಭ ಸೋಮವಾರಪೇಟೆ ಸೆಂಟ್ ಜೋಸೆಫ್ ಪದವಿ ಕಾಲೇಜಿನ ದೈಹಿಕ ಶಿಕ್ಷಕರಾದ ಶಿವಕುಮಾರ್, ಜೋಡಿಗುಬ್ಬಿ ಶಾಲೆಯ ದೈಹಿಕ ಶಿಕ್ಷಕ ಅರುಣ್‌ ಕುಮಾರ್ ವಿವಿಧ ಕ್ರೀಡೆಗಳಿಗೆ ತೀರ್ಪುಗಾರರಾಗಿದ್ದರು.

ಕ್ರೀಡಾ ಮಹೋತ್ಸವದಲ್ಲಿ ವಿವಿಧ ವಿಭಾಗದ ಉಪನ್ಯಾಸಕರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕೊಡಗು ವಿಶ್ವವಿದ್ಯಾಲಯದ ಉಪನ್ಯಾಸಕರಾದ ಡಾ. ಜ಼ಮೀರ್ ಅಹಮದ್ ಮತ್ತು ಸುದರ್ಶನ್ ಅವರು ಕ್ರೀಡಾ ಕಾರ್ಯಕ್ರಮದ ಸಂಚಾಲಕರಾಗಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ
ರೈತ ಭವನ ಶಿಥಿಲ, ವಾಸಿಸಲು ಜಟಿಲ!