ಕನ್ನಡಪ್ರಭ ವಾರ್ತೆ ಕುಶಾಲನಗರ
ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನ ಪ್ರಾರಂಭಿಸಲು ಬಯಸುವ ವಿದ್ಯಾರ್ಥಿಗಳಿಗೆ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್ (BCA in Artificial Intelligence and Machine Learning) ಜನಪ್ರಿಯ ಕೋರ್ಸ್‌ಗಳಲ್ಲಿ ಒಂದಾಗಿದೆ.
ಮೂರು ವರ್ಷಗಳ ಪದವಿ ಕೋರ್ಸ್ ಇದಾಗಿದ್ದು ಆರು ಸೆಮಿಸ್ಟರ್‌ಗಳನ್ನೊಳಗೊಂಡಿದೆ. ಡೇಟಾಬೇಸ್ ನಿರ್ವಹಣಾ ವ್ಯವಸ್ಥೆಗಳು, ನೆಟ್‌ವರ್ಕಿಂಗ್, ಡೇಟಾ ರಚನೆ ಮತ್ತು ಪೈಥಾನ್, ‘ಸಿ’, ‘ಸಿ ಪ್ಲಸ್ ಪ್ಲಸ್’, ಕ್ಲೌಡ್ ಕಂಪ್ಯೂಟಿಂಗ್ ಮತ್ತು ‘ಜಾವಾ’ ನಂತಹ ಕೋರ್ ಪ್ರೋಗ್ರಾಮಿಂಗ್ ಭಾಷೆಗಳ ಬಗ್ಗೆ ಕಲಿಯುವುದಕ್ಕೆ ಹಾಗೂ ಮಾಹಿತಿ ತಂತ್ರಜ್ಞಾನ ಪರಿಕರಗಳ ವಿನ್ಯಾಸ ಮತ್ತು ಅಭಿವೃದ್ಧಿಯಲ್ಲಿ ಪ್ರಾವಿಣ್ಯತೆಯನ್ನು ಹೊಂದಲು ಈ ಕೋರ್ಸ್ ಅನುಕೂಲವಾಗಲಿದೆ.ಉದ್ಯೋಗಾಧಾರಿತ ವೃತ್ತಿಪರ ಕೋರ್ಸ್‌ಗಳಲ್ಲೊಂದಾಗಿರುವ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್ (BCA in Artificial Intelligence and Machine Learning) ಬಹು ಬೇಡಿಕೆಯ ಕೋರ್ಸ್ ಆಗಿದ್ದು, ಈ ಪದವಿಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿವಿಧ ಸಂಸ್ಥೆಗಳ ಜೊತೆಗೆ ಒಡಂಬಡಿಕೆ ಮಾಡಿಕೊಂಡು ಕೌಶಲ್ಯಾಭಿವೃದ್ಧಿ ತರಬೇತಿಯ ಜೊತೆಗೆ ಕ್ಯಾಂಪಸ್ ಆಯ್ಕೆ ಮತ್ತು ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಸದುದ್ದೇಶದಿಂದ ಕೊಡಗು ಜಿಲ್ಲೆಯ ಮತ್ತು ಸುತ್ತಮುತ್ತಲಿನ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕೊಡಗು ವಿಶ್ವವಿದ್ಯಾಲಯವು 2024-25ನೇ ಶೈಕ್ಷಣಿಕ ಸಾಲಿನಿಂದ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ (BCA in Artificial Intelligence and Machine Learning) ಪದವಿ ವ್ಯಾಸಂಗ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಮೇ 3ರಿಂದ ಮೇ 18ರ ತನಕ ಅವಕಾಶ ಇದೆ. ಹೆಚ್ಚಿನ ಮಾಹಿತಿಗಾಗಿ ಕೊಡಗು ವಿಶ್ವವಿದ್ಯಾಲಯದ ವೆಬ್‌ಸೈಟ್ kuk.karnataka.gov.in ಅನ್ನು ಸಂದರ್ಶಿಸಬಹುದು (ಮೊ: 8861774778).