ಕೊಡಗು ವಿವಿ ಪದವಿ ಫಲಿತಾಂಶ ಪ್ರಕಟ

KannadaprabhaNewsNetwork |  
Published : Jul 24, 2026, 01:30 AM IST
ಫಲಿತಾಂಶ ಪ್ರಕಟ | Kannada Prabha

ಸಾರಾಂಶ

ಕೊಡಗು ವಿಶ್ವವಿದ್ಯಾಲಯದ ಘಟಕ ಮತ್ತು ಸಂಯೋಜಿತ ಮಹಾವಿದ್ಯಾಲಯಗಳ 2025-26ನೇ ಶೈಕ್ಷಣಿಕ ಸಾಲಿನ ಬಿಕಾಂ, ಬಿ.ಸಿ.ಎ, ಬಿಬಿಎ ಮತ್ತು ಬಿಎಸ್ಸಿ ಪದವಿಗಳ ತೃತೀಯ ವರ್ಷದ (ಆವರ್ತನ ಮತ್ತು ಪುನರಾವರ್ತನ) ಪರೀಕ್ಷೆಗಳ ಫಲಿತಾಂಶವನ್ನು ಬುಧವಾರ ಪ್ರಕಟಿಸಲಾಗಿದೆ.

ಕನ್ನಡಪ್ರಭವಾರ್ತೆ ಕುಶಾಲನಗರ

ಕೊಡಗು ವಿಶ್ವವಿದ್ಯಾಲಯದ ಘಟಕ ಮತ್ತು ಸಂಯೋಜಿತ ಮಹಾವಿದ್ಯಾಲಯಗಳ 2025-26ನೇ ಶೈಕ್ಷಣಿಕ ಸಾಲಿನ ಬಿಕಾಂ, ಬಿ.ಸಿ.ಎ, ಬಿಬಿಎ ಮತ್ತು ಬಿಎಸ್ಸಿ ಪದವಿಗಳ ತೃತೀಯ ವರ್ಷದ (ಆವರ್ತನ ಮತ್ತು ಪುನರಾವರ್ತನ) ಪರೀಕ್ಷೆಗಳ ಫಲಿತಾಂಶವನ್ನು ಬುಧವಾರ ಪ್ರಕಟಿಸಲಾಗಿದೆ.

ಸ್ನಾತಕ ಪದವಿ ಪರೀಕ್ಷೆಗಳು ಮುಗಿದ 20 ದಿನಗಳೊಳಗೆ ಫಲಿತಾಂಶವನ್ನು ಪ್ರಕಟಿಸಬೇಕು ಎಂಬ ಯುಜಿಸಿಯ ನಿರ್ದೇಶನದಂತೆ ಕೇವಲ ಐದು ದಿನಗಳಲ್ಲಿ ಫಲಿತಾಂಶ ಪ್ರಕಟಿಸಿದೆ.

ಇದೇ ಜೂನ್/ಜುಲೈ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ಕೊಡಗಿನ 24 ಕಾಲೇಜುಗಳ ಸುಮಾರು 6500 ವಿದ್ಯಾರ್ಥಿಗಳು ಹಾಜರಾಗಿದ್ದರು. ಕೊಡಗು ವಿಶ್ವವಿದ್ಯಾಲಯದ ಸ್ನಾತಕ ವಿದ್ಯಾರ್ಥಿಗಳ ಸೆಮಿಸ್ಟರ್ ಪರೀಕ್ಷೆಗಳ ಮೌಲ್ಯಮಾಪನ ಪ್ರಕ್ರಿಯೆಯನ್ನು ಘಟಕ ಮಹಾವಿದ್ಯಾಲಯವಾಗಿರುವ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನಲ್ಲಿ ವ್ಯವಸ್ಥಿತವಾಗಿ ನಿರ್ವಹಿಸಿದ್ದಾರೆ.

ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (UUMS) ಮೂಲಕ ಯಶಸ್ವಿಯಾಗಿ ನಡೆಸಲಾಗಿದ್ದು, ಸ್ನಾತಕ ಪದವಿ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು UUCMS ಅಥವಾ ಕೊಡಗು ವಿಶ್ವವಿದ್ಯಾಲಯದ ವೆಬ್‌ಸೈಟ್ KUK.Karnataka.gov.in ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಮೂಲಕ ವೀಕ್ಷಿಸಲು ಸಾಧ್ಯ.

ಪರೀಕ್ಷಾ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಆನ್ಲೈನ್ ತಂತ್ರಾಂಶದಲ್ಲಿ ಪ್ರಕಟಿಸಿದರು.

ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಆದ ಡಾ. ಸುರೇಶ್ ಎಂ., ಕೊಡಗು ವಿವಿ ಪರೀಕ್ಷಾಂಗದ ವಿಶೇಷಾಧಿಕಾರಿ ದ ಪ್ರೊ. ರವಿಶಂಕರ್ ಎಂ ಎನ್, ಯುಯುಸಿಎಂಎಸ್‌ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾರಾಯಣಗುರು ನಿಗಮಕ್ಕೆ 500 ಕೋಟಿ ರು. ನೀಡದೆ ಸರ್ಕಾರ ವಂಚಿಸಿದೆ: ವಿಠಲ ಪೂಜಾರಿ
ಮಹಾರಾಷ್ಟ್ರ ತುಳುವ ಮಹಾಸಭೆ ಇಂಟರ್ನ್ಯಾಷನಲ್ ಅಧ್ಯಕ್ಷ ಹರೀಶ್ ಶೆಟ್ಟಿ ಪಡುಬಿದ್ರಿ