ಏ.6 ರಿಂದ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್

KannadaprabhaNewsNetwork |  
Published : Jan 08, 2026, 02:45 AM IST
 ಕ್ರಿಕೆಟ್  | Kannada Prabha

ಸಾರಾಂಶ

ಏ.6 ರಿಂದ ಏ.19 ರವರೆಗೆ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್-3 ಕ್ರಿಕೆಟ್ ಪಂದ್ಯಾವಳಿಯನ್ನು ಗೋಣಿಕೊಪ್ಪದಲ್ಲಿ ಆಯೋಜಿಸಲಾಗಿದೆ

ಮಡಿಕೇರಿ : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಏ.6 ರಿಂದ ಏ.19 ರವರೆಗೆ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್-3 ಕ್ರಿಕೆಟ್ ಪಂದ್ಯಾವಳಿಯನ್ನು ಗೋಣಿಕೊಪ್ಪದಲ್ಲಿ ಆಯೋಜಿಸಲಾಗಿದೆ ಎಂದು ಫೌಂಡೇಶನ್‌ನ ಅಧ್ಯಕ್ಷ ಪೊರುಕೊಂಡ ಸುನಿಲ್ ತಿಳಿಸಿದ್ದಾರೆ.ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಣಿಕೊಪ್ಪದ ಕಾವೇರಿ ಕಾಲೇಜು ಮೈದಾನದಲ್ಲಿ 14 ದಿನಗಳ ಕಾಲ ಐಪಿಎಲ್ ಮಾದರಿಯಲ್ಲಿ ಪಂದ್ಯಾವಳಿ ನಡೆಯಲಿದ್ದು, ಎಲ್ಲಾ ಕೊಡವ ಭಾಷಿಕ ಜನಾಂಗದವರಿಗೆ ಅವಕಾಶ ಕಲ್ಪಿಸಲಾಗಿದೆ. ಕೊಡಗು ಮಾತ್ರವಲ್ಲದೆ ಜಿಲ್ಲೆಯ ಹೊರಗೆ ನೆಲೆಸಿರುವ ಕೊಡವರು ಹಾಗೂ ಕೊಡವ ಭಾಷಿಕರು ಕೂಡ ಪಂದ್ಯಾವಳಿಯಲ್ಲಿ ಭಾಗವಹಿಸಬಹುದಾಗಿದೆ ಎಂದು ಹೇಳಿದರು.

ಸೀಸನ್-3ರ ವಿಜೇತರಿಗೆ ಪ್ರಥಮ 2 ಲಕ್ಷ ರು., ದ್ವಿತೀಯ 1 ಲಕ್ಷ ಹಾಗೂ ತೃತೀಯ 50 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ ಹಾಗೂ ವೈಯಕ್ತಿಕ ಬಹುಮಾನ ನೀಡಿ ಗೌರವಿಸಲಾಗುವುದು. ಅಲ್ಲದೇ ಪ್ರತಿ ಪಂದ್ಯಾವಳಿಯಲ್ಲಿ ಮ್ಯಾನ್‌ ಆಫ್‌ ದಿ ಮ್ಯಾಚ್ ಆಕರ್ಷಕ ಟ್ರೋಫಿ ನೀಡಲಾಗುವುದು. ಕಳೆದ ಬಾರಿ 175 ಆಟಗಾರರು ಪಾಲ್ಗೊಂಡಿದ್ದು, ಈ ಬಾರಿ 180 ಆಟಗಾರರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ 12 ತಂಡಗಳು ಆಯ್ಕೆಯಾಗಿದ್ದು, ಹಳೆಯ ಹತ್ತು ಹಾಗೂ ಎರಡು ಹೊಸ ಪ್ರೆಂಚೈಸಿಗಳು ಹರಾಜು ಪ್ರಕ್ರಿಯೆಯ ಮೂಲಕ ಆಟಗಾರರನ್ನು ಆಯ್ಕೆ ಮಾಡಲಿದ್ದಾರೆ. ಆಟಗಾರರು ಆನ್‌ಲೈನ್ ಮುಖಾಂತರ ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ 9945122952 ಸಂಪರ್ಕಿಸಬಹುದಾಗಿದೆ ಎಂದು ಸುನಿಲ್ ಹೇಳಿದರು.ಉಪಾಧ್ಯಕ್ಷ ಪಾಲಚಂಡ ಜಗನ್ ಉತ್ತಪ್ಪ ಮಾತನಾಡಿ, ಪಂದ್ಯಾವಳಿಯು ಅಂತರಾಷ್ಟ್ರೀಯ ನಿಯಮಗಳಿಗೆ ಒಳಪಟ್ಟಂತೆ ನಡೆಯಲಿದ್ದು, ಸಮುದಾಯದ ಯುವ ಪ್ರತಿಭೆಗಳು ಇದನ್ನು ಸದುಪಯೋಗ ಪಡಿಸಿಕೊಳ್ಳಲು ಸಲಹೆ ನೀಡಿದರು. ಕಾರ್ಯದರ್ಶಿ ಕೀತಿಯಂಡ ಗಣಪತಿ ಮಾತನಾಡಿ, ಕೊಡಗಿನ ಕ್ರೀಡಾ ಪ್ರತಿಭೆಗಳು ಲೆದರ್ ಬಾಲ್ ಕ್ರಿಕೆಟ್‌ನಲ್ಲಿ ತೊಡಗಿಸಿಕೊಂಡರೆ ಉತ್ತಮ ಭವಿಷ್ಯವಿದೆ. ಪ್ರತಿಭಾವಂತ ಯುವಕರನ್ನು ಗುರುತಿಸಿ ಅವರಿಗೆ ಕ್ರೀಡೆಯ ಬಗ್ಗೆ ಮಾರ್ಗದರ್ಶನ ನೀಡಿ, ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೂರ್ಗ್ ಕ್ರಿಕೆಟ್ ಫೌಂಡೇಶನ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಪಂದ್ಯಾವಳಿಗೆ ಉತ್ತೇಜನ ನೀಡುತ್ತಿದೆ ಎಂದು ತಿಳಿಸಿದರು.ಪಂದ್ಯಾವಳಿಯ ನಿರ್ವಾಹಕ ಮಡ್ಲಂಡ ದರ್ಶನ್ ಮಾತನಾಡಿ, ಮೊದಲು ಬರುವ 180 ತಂಡಗಳಿಗೆ ಅವಕಾಶ ಕಲ್ಪಿಸಲಾಗುವುದು ಎಂದರು.ಫೌಂಡೇಶನ್‌ನ ಸಂಚಾಲಕ ಅಣ್ಣಳಮಾಡ ರಾಯ್ ಚಿಣ್ಣಪ್ಪ, ನಿರ್ದೇಶಕರಾದ ಕುಲ್ಲೇಟಿರ ಶಾಂತ ಕಾಳಪ್ಪ ಸುದ್ದಿಗೋಷ್ಠಿಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ