ಕೊಡವ ನೃತ್ಯ ಪ್ರದರ್ಶನ

KannadaprabhaNewsNetwork |  
Published : May 20, 2024, 01:40 AM IST
2ನೇ ಬಾರಿ ವಿಶ್ವ ದಾಖಲೆಯನ್ನು ಮಾಡಿದ ವಿರಾಜಪೇಟೆಯ ನಾಟ್ಯ ಮಯೂರಿ ತಂಡ. | Kannada Prabha

ಸಾರಾಂಶ

ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಆಡಿಟೋರಿಯಂನಲ್ಲಿ ವರ್ಲ್ಡ್‌ ರೆಕಾರ್ಡ್‌ ಕಾರ್ಯಕ್ರಮ ನಡೆಯಿತು. ವಿರಾಜಪೇಟೆ ನಾಟ್ಯ ಮಯೂರಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಆಡಿಟೋರಿಯಂನಲ್ಲಿ ನಡೆದ ವರ್ಲ್ಡ್ ರೆಕಾರ್ಡ್ ಕಾರ್ಯಕ್ರಮದಲ್ಲಿ ವಿರಾಜಪೇಟೆಯ

ನಾಟ್ಯಮಯೂರಿ ನೃತ್ಯ ಶಾಲೆಯ ವಿದ್ಯಾರ್ಥಿಗಳಾದ ಚೈತನ್ಯ, ಲಾವಣ್ಯ, ಲಕ್ಷ, ತೇಜಸ್ವಿನಿ, ಚೈತ್ರ, ಅಪೇಕ್ಷಿತ, ಅನುಶ್ರೀ, ಕಾವ್ಯಶ್ರೀ, ಶ್ರೇಯಾ ಸೋಮಣ್ಣ, ಸಾನ್ವಿ ಹಾಗೂ ನೃತ್ಯ ಶಾಲೆಯ ಸಂಸ್ಥಾಪಕರಾದ ವಿದುಷಿ ಪ್ರೇಮಾಂಜಲಿ ಆಚಾರ್ಯ ಕೊಡವ ನೃತ್ಯ ಪ್ರದರ್ಶನ ನಡೆಸಿದರು.

------------------------------------------

ವಿಶೇಷ ವರ್ಗದ ವಿದ್ಯಾರ್ಥಿಗಳಿಗೆ 6 ನೇ ತರಗತಿ ಪ್ರವೇಶಕ್ಕೆ ಅವಕಾಶ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿಗೆ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ವಿಶೇಷ ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ಇಲ್ಲದೆ ನೇರವಾಗಿ ದಾಖಲಾತಿಗೆ ಅವಕಾಶ ಕಲ್ಪಿಸಲಾಗಿದೆ.ಅದರಂತೆ ಸಪಾಯಿ ಕರ್ಮಚಾರಿ/ ಗುರುತಿಸಿರುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್, ಚಿಂದಿ ಆಯುವವರು, ಸ್ಮಶಾನ ಕಾರ್ಮಿಕರ ಮಕ್ಕಳು ಶೇ.10, ಬಾಲಕಾರ್ಮಿಕರು, ಜೀತ ವಿಮುಕ್ತ ಕಾರ್ಮಿಕರ ಮಕ್ಕಳು, ಗುರುತಿಸಿರುವ ಮಾಜಿ ದೇವದಾಸಿಯರ ಮಕ್ಕಳು ಶೇ.10, ಶೇ.25 ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು, ಎಚ್‍ಐವಿಗೆ ತುತ್ತಾದ ಪೋಷಕರ ಮಕ್ಕಲು, ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಅಥವಾ ಅನಾಥ ಮಕ್ಕಳು ಶೇ.10, ಗುರುತಿಸಿರುವ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ, ಅತೀ ಸೂಕ್ಷ್ಮ ಸಮುದಾಯದ, ಸೈನಿಕರು ಮತ್ತು ಮಾಜಿ ಸೈನಿಕರು, ಸರ್ಕಾರಿ ಯೋಜನೆಗಳಿಂದ ಸ್ಥಳಾಂತರಗೊಂಡ ಪೋಷಕರ ಮಕ್ಕಲು ಶೇ.10 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಆಶ್ರಮ ವಸತಿ ಶಾಲೆಗಳಲ್ಲಿ 5ನೇ ತರಗತಿಯಲ್ಲಿ ಉತ್ತೀರ್ಣರಾದ ಮಕ್ಕಳಿಗೆ ಶೇ.10 ರಂದು ಹಂಚಿಕೆ ಮಾಡಲಾಗಿದೆ.

ವಿಶೇಷ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಮೇ, 28 ರೊಳಗೆ ಸೂಕ್ತ ದಾಖಲೆಗಳೊಂದಿಗೆ ಸಮೀಪದ ವಸತಿ ಶಾಲೆಗಳನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!