ಕೊಡವ ಅಭಿವೃದ್ಧಿ ನಿಗಮ ಘೋಷಣೆ ಸ್ವಾಗತಾರ್ಹ: ಎ.ಎಸ್. ಪೊನ್ನಣ್ಣ

KannadaprabhaNewsNetwork |  
Published : Mar 14, 2026, 02:30 AM IST
ಪೊನ್ನಣ್ಣ  | Kannada Prabha

ಸಾರಾಂಶ

ಕೊಡವ ಅಭಿವೃದ್ಧಿ ನಿಗಮ ಬಹು ವರ್ಷದ ಬೇಡಿಕೆಯಾಗಿದ್ದು, ಈ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡುವ ಮೂಲಕ ದೇಶಕ್ಕೆ ಸೇನಾ ಹಾಗೂ ಕ್ರೀಡೆಗೆ ಕೊಡವ ಜನಾಂಗದ ಕೊಡುಗೆ ಗುರುತಿಸಿ ನಿಗಮ ನೀಡಲಾಗಿರುವುದು ಸ್ವಾಗತಾರ್ಹ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದ್ದಾರೆ.

ಮಡಿಕೇರಿ: ಕೊಡವ ಅಭಿವೃದ್ಧಿ ನಿಗಮ ಬಹು ವರ್ಷದ ಬೇಡಿಕೆಯಾಗಿದ್ದು, ಈ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡುವ ಮೂಲಕ ದೇಶಕ್ಕೆ ಸೇನಾ ಹಾಗೂ ಕ್ರೀಡೆಗೆ ಕೊಡವ ಜನಾಂಗದ ಕೊಡುಗೆ ಗುರುತಿಸಿ ನಿಗಮ ನೀಡಲಾಗಿರುವುದು ಸ್ವಾಗತಾರ್ಹ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದ್ದಾರೆ.

ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಪೊನ್ನಣ್ಣ, ಈ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಯೋಜನೆ ಘೋಷಣೆ ಮಾಡಿದ್ದಾರೆ. ಅರಣ್ಯ ಮತ್ತು ಅರಣ್ಯದಂಚಿನಲ್ಲಿ ವಾಸಿಸುವ ಇರುಳ, ಸೋಲಿಗ, ಕಾಡು ಕುರುಬ, ಕುಡಿಯ, ಸಿದ್ದಿ ಹಾಗೂ ಸೂಕ್ಷ್ಮ ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದವರಿಗೆ ಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ಮೆಚ್ಚುಗೆಯ ಕೆಲಸ ಎಂದರು.

ಮಡಿಕೇರಿ ಹಾಗೂ ವಿರಾಜಪೇಟೆ ಕ್ಷೇತ್ರಕ್ಕೆ ಶ್ರಮಿಕ ವಸತಿ ಶಾಲೆಯನ್ನು ಘೋಷಣೆ ಮಾಡಿದ್ದಾರೆ. ರಾಜ್ಯಾದ್ಯಂತ ವಿದ್ಯುತ್ ಸಮಸ್ಯೆಗೆ ಒಳಗಾಗಿದ್ದು, 100 ಹೊಸ ವಿದ್ಯುತ್ ಕೇಂದ್ರಗಳನ್ನು ಸ್ಥಾಪಿಸುವುದಾಗಿ ಬಜೆಟ್ ನಲ್ಲಿ ಘೋಷಿಸಿದ್ದು, 8 ಕೇಂದ್ರಗಳು ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ನೀಡಿದ್ದು, ವಿದ್ಯುತ್ ಸಮಸ್ಯೆಗೆ ಪೂರಕ ಹೆಜ್ಜೆ ಇಡಲಾಗಿದೆ ಎಂದು ಪೊನ್ನಣ್ಣ ಹೇಳಿದರು.ಅತಿ ಹೆಚ್ಚು ಒಲಂಪಿಯನ್ ನೀಡಿದ ಜಿಲ್ಲೆ ಕೊಡಗು, ಈ ಪ್ರತಿಭೆಗಳನ್ನು ಗುರುತಿಸಿ ಬಾಡಗದಲ್ಲಿ 11.5 ಎಕರೆ ಜಾಗ ಗುರುತಿಸಲಾಗಿದ್ದು, ಸುಸಜ್ಜಿತ ಕ್ರೀಡಾ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಘೋಷಿಸಿರುವುದು ಕೊಡಗಿನ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಪೊನ್ನಣ್ಣ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ