ಮಲ್ಪೆ ಬೀಚ್ ನಲ್ಲಿ ಭವ್ಯ ಗಂಗಾರತಿ

KannadaprabhaNewsNetwork |  
Published : May 18, 2026, 03:45 AM IST
ಮಲ್ಪೆ ಸಮುದ್ರ ತೀರದಲ್ಲಿ ನಡೆದ ಗಂಗಾರತಿಯನ್ನು ಸ,ಾವಿರಾರು ಮಂದಿ ವೀಕ್ಷಿಸಿದರು | Kannada Prabha

ಸಾರಾಂಶ

ಮಲ್ಪೆ: ಇಲ್ಲಿನ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ ನಡೆಯುತ್ತಿರುವ ಮಹಾ ರುದ್ರಯಾಗದ ಅಂಗವಾಗಿ ಮಲ್ಪೆ ಬೀಚ್‌ನಲ್ಲಿ ಭಾನುವಾರ ಸಂಜೆ ಭವ್ಯ ಗಂಗಾರತಿ ಕಾರ್ಯಕ್ರಮ ನೆರವೇರಿತು.

ಮಲ್ಪೆ: ಇಲ್ಲಿನ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ ನಡೆಯುತ್ತಿರುವ ಮಹಾ ರುದ್ರಯಾಗದ ಅಂಗವಾಗಿ ಮಲ್ಪೆ ಬೀಚ್‌ನಲ್ಲಿ ಭಾನುವಾರ ಸಂಜೆ ಭವ್ಯ ಗಂಗಾರತಿ ಕಾರ್ಯಕ್ರಮ ನೆರವೇರಿತು.ಕಾಶಿಯಿಂದ ಆಗಮಿಸಿದ್ದ ಪುರೋಹಿತರು ವೇದಘೋಷ ಹಾಗೂ ಮಂತ್ರೋಚ್ಚಾರಣೆಯೊಂದಿಗೆ ಗಂಗಾರತಿ ನೆರವೇರಿಸಿದರು. ಮತ್ಸ್ಯಸಂಪತ್ತು ವೃದ್ಧಿಗಾಗಿ ಸಮುದ್ರ ರಾಜನಿಗೆ ವಿಶೇಷ ಆರತಿ ಮಾಡಲಾಯಿತು. ಸಮುದ್ರ ತೀರದಲ್ಲಿ ಆಕರ್ಷಕ ದೀಪಗಳೊಂದಿಗೆ ನಡೆದ ಗಂಗಾರತಿಯು ಭಕ್ತರ ಗಮನ ಸೆಳೆಯಿತು.

ಮಹಾರುದ್ರ ಯಾಗದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ನಡೆದ ಗಂಗಾರತಿ ವಿಶೇಷ ಆಕರ್ಷಣೆಯಾಯಿತು. ಕಾರ್ಯಕ್ರಮದ ಸಂದರ್ಭ ಭಕ್ತರು ದೀಪಾರಾಧನೆ ಸಲ್ಲಿಸಿ ದೇವರ ಕೃಪೆಗೆ ಪ್ರಾರ್ಥಿಸಿದರು. ಈ ಸಂದರ್ಭ ಮಹಾರುದ್ರ ಯಾಗದ ಸೇವಾಕರ್ತರಾದ ಪ್ರಸಾದ್ ರಾಜ್ ಕಾಂಚನ್, ಯಾಗ ಸಮಿತಿಯ ಮಹಾ ಸಂಚಾಲಕರಾದ ಕೆ. ಕೃಷ್ಣಮೂರ್ತಿ ಆಚಾರ್ಯ ಮತ್ತು ತಾರಾನಾಥ ಪೂಜಾರಿ, ತೋಟದ ಮನೆ ದಿವಾಕರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನ ಪ್ರತಿಷ್ಠಾ ವರ್ಧಂತ್ಯುತ್ಸವ
ಕಾರ್ಕಳ: ಋಣಾನುಬಂಧ ವಧುವರರ ಸಮಾವೇಶ