ಕೊಡವೂರು ಮಹಾರುದ್ರಯಾಗ: ಸಚಿವೆ ಹೆಬ್ಬಾಳ್ಕರ್ ಭೇಟಿ

KannadaprabhaNewsNetwork |  
Published : May 17, 2026, 02:30 AM IST
16ಯಾಗ | Kannada Prabha

ಸಾರಾಂಶ

ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಆಯೋಜಿಸಿರುವ ಮಹಾರುದ್ರಯಾಗದ 2ನೇ ದಿನ ಶನಿವಾರದ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದರು.

ಉಡುಪಿ: ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಆಯೋಜಿಸಿರುವ ಮಹಾರುದ್ರಯಾಗದ 2ನೇ ದಿನ ಶನಿವಾರದ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದರು. ಮಹಾರುದ್ರಯಾಗ ಸಮಿತಿಯ ಕಾರ್ಯಾಧ್ಯಕ್ಷ ಪ್ರಸಾದ್ ರಾಜ್ ಕಾಂಚನ್‌ ಹಾಗೂ‌ ಸಮಿತಿ ಪದಾಧಿಕಾರಿಗಳು ಸಚಿವರನ್ನು ಬರಮಾಡಿಕೊಂಡರು. ಬಳಿಕ ಸಚಿವರು ಶ್ರೀ‌ಶಂಕರನಾರಾಯಣ ದೇವರ ದರ್ಶನ ಪಡೆದರು. ಸಚಿವರಿಗೆ ಶಾಲು ಹೊದಿಸಿ ದೇವರ ವಿಗ್ರಹ ಕೊಟ್ಟು ಗೌರವಿಸಲಾಯಿತು.ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಸ್ವರೂಪ ಟಿಕೆ, ಜಿಪಂ ಸಿಇಒ ಪ್ರತೀಕ್ ಬಾಯಲ್, ಕೊಡವೂರು ಶಂಕರನಾರಾಯಣ ದೇವಸ್ಥಾನದ ಅಧ್ಯಕ್ಷರಾದ ಪ್ರಕಾಶ್ ಜಿ. ಕೊಡವೂರು, ಮಹಾರುದ್ರ ಯಾಗ ಸಮಿತಿಯ ಪ್ರಧಾನ ಸಂಚಾಲಕ ಕೆ. ಕೃಷ್ಣಮೂರ್ತಿ ಆಚಾರ್ಯ ಮತ್ತು ತಾರನಾಥ ಪೂಜಾರಿ, ಸಂಚಾಲಕ ನಂದಕಿಶೋರ್ ಕೆಮ್ಮಣ್ಣು, ರಮೇಶ್ ತಿಂಗಳಾಯ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಿರಿಜನ ಹಾಡಿಯಲ್ಲಿ ಅನಧಿಕೃತ ಚರ್ಚ್: ತಮಿಳುನಾಡು ಮೂಲದ ಮಂದಿ ವಶಕ್ಕೆ
ಕಾರಿಂಜ ಸಹಿತ ಎರಡು ದೇವಸ್ಥಾನಕ್ಕೆ ಸಿಡಿಲಾಘಾತ