ಕೊಡವೂರು ದೇವಸ್ಥಾನ: ಮಹಾರುದ್ರಯಾಗದ ಅಮಂತ್ರಣ ಪತ್ರಿಕೆ ಬಿಡುಗಡೆ
ಉಡುಪಿ: ಇಲ್ಲಿನ ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಪ್ರಸಾದ್‌ರಾಜ್ ಕಾಂಚನ್ ನೇತೃತ್ವದಲ್ಲಿ ಮೇ 14ರಿಂದ 19ರವರೆಗೆ ನಡೆಯಲಿರುವ ಮಹಾ ರುದ್ರಯಾಗದ ಆಮಂತ್ರಣ ಪತ್ರಿಕೆಯನ್ನು ಭಾನುವಾರ ದೇಗುಲದ ವಸಂತ ಮಂಟಪದಲ್ಲಿ ಉದ್ಯಮಿ, ಅಧ್ಯಕ್ಷ ಸಾಧು ಸಾಲ್ಯಾನ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಮಹಾರುದ್ರಯಾಗ ಸಮಿತಿಯ ಕಾರ್ಯಾಧ್ಯಕ್ಷ ಪ್ರಸಾದ್‌ರಾಜ್ ಕಾಂಚನ್ ಮಾತನಾಡಿ ಮಹಾ ರುದ್ರಯಾಗವು ನಡೆಯುವುದು ಅತ್ಯಂತ ವಿರಳ, ಈ ರುದ್ರಯಾಗದ ಜತೆಗೆ ಬಡಜನರಿಗೆ ಆರೋಗ್ಯ ಸೇವೆ ಮತ್ತು ಉದ್ಯೋಗವನ್ನು ಕಲ್ಪಿಸುವ ಮಹತ್ಕಾರ್ಯವನ್ನು ಮಾಡಲಾಗುತ್ತದೆ. ಕ್ರೀಡಾಕೂಟ, ವಸ್ತು ಪ್ರದರ್ಶನ, ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿದೆ. ಸುಮಾರು 40 ಸಾವಿರ ಜನರಿಗೆ ಆಮಂತ್ರಣ ಪತ್ರಿಕೆಯನ್ನು ವಿತರಿಸಲಾಗುತ್ತದೆ. ಮೇ 14 ರಿಂದ 5 ದಿನಗಳ ಕಾಲ ಅನ್ನಸಂತರ್ಪಣೆ ಇದೆ, ವಿಶೇಷವಾಗಿ 5 ಸಾವಿರ ಮಹಿಳೆಯರಿಗೆ ಮಹಾ ರುದ್ರಯಾಗ ಸಂಕಲ್ಪದೊಂದಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾದವ ಪೂಜಾರಿ ಬನ್ನಂಜೆ, ಉಪ್ಪೂರು ಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಶಾಂತ್ ಸುವರ್ಣ, ಬೆಳ್ಕಳೆ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಬೆಳ್ಕಳೆ, ನಗರಸಭಾ ಮಾಜಿ ಸದಸ್ಯ ವಿಜಯ ಕೊಡವೂರು, ಡೆಂಟಾಕೇರ್‌ನ ಡಾ. ವಿಜಯೇಂದ್ರ ವಸಂತ್, ಭಜನಾ ಸಂಚಾಲಕ ಧನಂಜಯ ಕಾಂಚನ್, ದೇವಳದ ವ್ಯವಸ್ಥಾಪಾನಾ ಸಮತಿಯ ಸದಸ್ಯರಾದ ವಾದಿರಾಜ್ ಸಾಲ್ಯಾನ್ , ರಾಜ ಸೇರಿಗಾರ, ಶೀಲ ಕೃಷ್ಣ ದೇವಾಡಿಗ, ಭಾಸ್ಕರ ಪಾಲನ್ ಬಾಚನಬೈಲು , ಕೆ. ಬಾಬ ಮೊದಲಾದವರು ಪಾಲ್ಗೊಂಡಿದ್ದರು.ವ್ಯವಸ್ಥಾನಪನಾ ಸಮಿತಿಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ಸ್ವಾಗತಿಸಿದರು. ಪೂರ್ಣಿಮಾ ಜನಾರ್ದನ್ ನಿರೂಪಿಸಿದರು. ಸೇವಾ ಸಮಿತಿಯ ಕಾರ್ಯದರ್ಶಿ ಜನಾರ್ದನ್ ಕೊಡವೂರು ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.