ಕೊಡ್ಲಿಪೇಟೆ: ನಂದಿಪುರ ಕೆರೆಗೆ ಬಾಗಿನ ಅರ್ಪಣೆ, ಗಂಗಾಪೂಜೆ

KannadaprabhaNewsNetwork |  
Published : Oct 19, 2024, 12:20 AM IST
ಫೋಟೋ:- ಕೊಡ್ಲಿಪೇಟೆ ನಂದಿಪುರ ಕೆರೆಗೆ ಕಾವೇರಿ ತೀರ್ಥೋದ್ಬವ ಸಂದರ್ಭ ಬಾಗಿನ ಅರ್ಪಣೆ ನೆರವೇರಿಸಿದರು ಚಿತ್ರದಲ್ಲಿ ಹಿರಿಯ ವಕೀಲ ಚಂದ್ರಮೌಳಿ , ಮಹಾಂತ ಸ್ವಾಮೀಜಿ, ಮಹಾಂತ ಶಿವಲಿಂಗ ಸ್ವಾಮೀಜಿ, ರುದ್ರಮುನಿ ಸ್ವಾಮೀಜಿ, ಡಾ.ಅಶೋಕ ಆಲೂರ ಮುಂತಾದವರಿದ್ದಾರೆ. 2. ಮಹಿಳೆಯರಿಂದ ಗಂಗಾರತಿ | Kannada Prabha

ಸಾರಾಂಶ

ಹೈಕೋರ್ಟ್ ಹಿರಿಯ ವಕೀಲ ಮತ್ತು ಸ್ಥಳೀಯರೂ ಆದ ಎಚ್.ಎಸ್. ಚಂದ್ರಮೌಳಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಕೊಡ್ಲಿಪೇಟೆ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ, ಕಲ್ಲಳ್ಳಿ ಮಠದ ಶ್ರೀ ರುದ್ರಮುನಿ ಸ್ವಾಮೀಜಿ, ಕೊಡಗು ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ. ಅಶೋಕ ಆಲೂರ, ಕೊಡ್ಲಿಪೇಟೆ ಗ್ರಾ.ಪಂ. ಅಧ್ಯಕ್ಷೆ ಗೀತ ತ್ಯಾಗರಾಜ್ ಉಪಸ್ಥಿತರಿದ್ದರು.

ಕನ್ನಡಪ್ರಭ ವಾರ್ತೆ ಶನಿವಾರಸಂತೆ

ಕಾವೇರಿ ತೀರ್ಥೋದ್ಭವದ ಸಂದರ್ಭದಲ್ಲಿ ಸಮೀಪದ ಕೊಡ್ಲಿಪೇಟೆ ನಂದಿಪುರ ಕೆರೆಗೆ ಬಾಗಿನ ಅರ್ಪಣೆ ಮತ್ತು ಗಂಗಪೂಜೆಯನ್ನು ಗುರುವಾರ ನೆರವೇರಿಸಲಾಯಿತು.

ಕೊಡಗಿನ ಕುಲದೇವತೆ ಕಾವೇರಿ ಮಾತೆ ತಲಕಾವೇರಿಯಲ್ಲಿ ತೀರ್ಥೊದ್ಭವಾದ ಸಮಯದಲ್ಲೆ ನಂದಿಪುರ ಕೆರೆಗೆ ಬಾಗಿನ ಅರ್ಪಿಸಿ ಗಂಗಾಪೂಜೆ ಮತ್ತು ಗಂಗಾರತಿ ಮಾಡಲಾಯಿತು.

ಕೊಡ್ಲಿಪೇಟೆ ಬಸವೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನದ ಅರ್ಚಕರ ತಂಡ ಪೂಜಾ ವಿಧಿ ವಿಧಾನ ನೆರವೇರಿಸಿದರು. ಮಂತ್ರ ಘೋಷಣೆಯೊಂದಿಗೆ ಕೆರೆಗೆ ಬಾಗಿನ ಅರ್ಪಣೆ ಮಾಡಿ, ಗಂಗಾಪೂಜೆ ಗಂಗಾರತಿ ಮಾಡಲಾಯಿತು.

ಕೊಡ್ಲಿಪೇಟೆ ನಂದಿಪುರ ಕೆರೆಯನ್ನು ಸಣ್ಣ ನೀರಾವರಿ ಇಲಾಖೆಯಿಂದ 4 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿದೆ. ಉದ್ಯಾನವನ ನಿರ್ಮಾಣದ ಕಾಮಗಾರಿ ಪ್ರಗತಿಯಲ್ಲಿದೆ. ಕೊಡ್ಲಿಪೇಟೆ ಭಾಗದಲ್ಲಿ ಇದು ಪುರಾತನ ಕೆರೆಯಾಗಿದ್ದು, ಇದನ್ನೇ ನಂಬಿ ರೈತರು ಕೃಷಿ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಕಾವೇರಿ ತೀರ್ಥೋದ್ಭವ ದಿನದಂದು ಪ್ರಥಮ ಬಾರಿಗೆ ನಂದಿಪುರ ಕೆರೆಗೆ ಬಾಗಿನ ಅರ್ಪಣೆ ಮತ್ತು ಗಂಗಾರತಿ ಪೂಜೆ ನೆರವೇರಿಸಲಾಗಿದೆ.

ಹೈಕೋರ್ಟ್ ಹಿರಿಯ ವಕೀಲ ಮತ್ತು ಸ್ಥಳೀಯರೂ ಆದ ಎಚ್.ಎಸ್. ಚಂದ್ರಮೌಳಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಕೊಡ್ಲಿಪೇಟೆ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ, ಕಲ್ಲಳ್ಳಿ ಮಠದ ಶ್ರೀ ರುದ್ರಮುನಿ ಸ್ವಾಮೀಜಿ, ಕೊಡಗು ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ. ಅಶೋಕ ಆಲೂರ, ಕೊಡ್ಲಿಪೇಟೆ ಗ್ರಾ.ಪಂ. ಅಧ್ಯಕ್ಷೆ ಗೀತ ತ್ಯಾಗರಾಜ್ ಉಪಸ್ಥಿತರಿದ್ದರು. ಮಹಿಳೆಯರಿಂದ ಮೆರವಣಿಗೆ: ಈ ಸಂದರ್ಭದಲ್ಲಿ ಕೊಡ್ಲಿಪೇಟೆ ಕಡೆಪೇಟೆ ಗಣಪತಿ ದೇವಸ್ಥಾನದಿಂದ ನಂದಿಪುರ ಕೆರೆವರೆಗೆ ಗಂಗಾ ವೀರಶೈವ ಸಮಾಜ ಮತ್ತು ಧರ್ಮಸ್ಥಳ ಸಂಘದ ಮಹಿಳೆಯರು ಪೂರ್ಣಕಂಭ ಹೊತ್ತು ನಂದಿಧ್ವಜದೊಂದಿಗೆ ಕಾಲ್ನಡಿಗೆ ಮೂಲಕ ಮೆರವಣಿಗೆಯಲ್ಲಿ ಸಾಗಿದರು. ಮಹಿಳೆಯರು ಹಸಿರು ಬಣ್ಣದ ಸೀರೆ ಧರಿಸಿ ಮೆರವಣಿಗೆಯ ಸೊಬಗು ಹೆಚ್ಚಿಸಿದರು. ಈ ಸಂದರ್ಭ ಕೊಡ್ಲಿಪೇಟೆ ಗ್ರಾ.ಪಂ. ಉಪಾಧ್ಯಕ್ಷೆ ಅಪ್ಸರಿ ಬೇಗಂ, ವೀರಶೈವ ಸಮಾಜದ ಅಧ್ಯಕ್ಷ ಸಿದ್ದೇಶ್, ಗಂಗಾ ವೀರಶೈವ ಸಮೀತಿ ಅಧ್ಯಕ್ಷೆ ಮಂಜುಳಾ ಸುರೇಶ್, ಧರ್ಮಸ್ಥಳ ಸಂಘದ ಪಂಕಜಾ, ಪ್ರಮುಖರಾದ ಡಾ. ಉದಯ್‍ಕುಮಾರ್, ಕಾಂತರಾಜು, ಶರತ್‍ ಶೇಖರ್, ಎಚ್.ಸಿ. ಯತೀಶ್, ಜಿ.ಆರ್. ಸುಬ್ರಮಣ್ಯ, ಕೆ.ಸಿ. ಪ್ರಸನ್ನ, ಶಿಕ್ಷಕ ಅಬ್ದುಲ್ ರಬ್, ವಕೀಲ ಜಗದೀಶ್ ಮುಂತಾದವರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ