ಕ್ರೀಡೆಯಿಂದ ದೈಹಿಕ, ಮಾನಸಿಕ ಬೆಳವಣಿಗೆ: ಶಿವಶೇಖರ್

KannadaprabhaNewsNetwork |  
Published : Sep 19, 2026, 02:30 AM IST
. | Kannada Prabha

ಸಾರಾಂಶ

ಕ್ರೀಡಾ ಚಟುವಟಿಕೆಗಳಿಂದ ವಿದ್ಯಾರ್ಥಿಗಳಲ್ಲಿ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಾಗುತ್ತದೆ ಎಂದು ಕೊಡ್ಲಿಪೇಟೆ ಕಲ್ಲುಮಟ್ಟದ ಎಸ್‌ಕೆಎಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾಸಂಸ್ಥೆ ನಿರ್ದೇಶಕ ಶಿವಶೇಖರ್ ಹೇಳಿದರು.

ಶನಿವಾರಸಂತೆ: ಕ್ರೀಡಾ ಚಟುವಟಿಕೆಗಳಿಂದ ವಿದ್ಯಾರ್ಥಿಗಳಲ್ಲಿ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಾಗುತ್ತದೆ ಎಂದು ಕೊಡ್ಲಿಪೇಟೆ ಕಲ್ಲುಮಟ್ಟದ ಎಸ್‌ಕೆಎಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾಸಂಸ್ಥೆ ನಿರ್ದೇಶಕ ಶಿವಶೇಖರ್ ಹೇಳಿದರು. ಸೋಮವಾರಪೇಟೆ ತಾಲೂಕು ಮಟ್ಟದ ೧೪ ವರ್ಷ ವಯೋಮಾನದ ಬಾಲಕ ಮತ್ತು ಬಾಲಕಿಯರ ಖೋ ಖೋ ಹಾಗೂ ಕರಾಟೆ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.

ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸೂಫಿ ಪೆರಾಜೆ ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆ, ಶಿಸ್ತು ಮತ್ತು ನಿಯಮ ಪಾಲಿಸಬೇಕು ಎಂದರು.

ಕರಾಟೆ ಶಿಕ್ಷಕ ಅರುಣ್, ದೈಹಿಕ ಶಿಕ್ಷಕ ಕರುಂಬಯ್ಯ, ಕೊಡ್ಲಿಪೇಟೆ ವಲಯ ಕ್ರೀಡಾಕೂಟ ಕಾರ್ಯದರ್ಶಿ ಸುನಿಲ್, ಪ್ರಾಥಮಿಕ ಶಾಲಾ ವಿಭಾಗದ ವಲಯ ಕಾರ್ಯದರ್ಶಿ ಆಶಾ, ಶಾಲಾ ಮುಖ್ಯ ಶಿಕ್ಷಕ ಎಚ್.ಎಂ.ಅಭಿಲಾಷ್, ದೈಹಿಕ ಶಿಕ್ಷಕ ಎಚ್.ಪಿ.ಪುನಿತ್ ವಿವಿಧ ಶಾಲೆಗಳ ದೈಹಿಕ ಶಿಕ್ಷಕರು ಕರಾಟೆ ತರಬೇತುದಾರರು ಹಾಜರಿದ್ದರು.ಪಂದ್ಯಾವಳಿಯ ಸ್ಪರ್ಧಾ ವಿಜೇತರು: ಖೋ ಖೋ ಪಂದ್ಯಾವಳಿಯ ಬಾಲಕರ ವಿಭಾಗದಲ್ಲಿ ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲಾ ತಂಡ ಪ್ರಥಮ ಸ್ಥಾನ ಪಡೆದುಕೊಂಡಿತು ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲಾ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತ್ತು

ಖೋ ಖೋ ಬಾಲಕಿಯರ ವಿಭಾಗದಲ್ಲಿ ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲಾ ತಂಡ ಪ್ರಥಮ ಸ್ಥಾನ ಪಡೆದುಕೊಂಡಿತು. ಕೊಡ್ಲಿಪೇಟೆ ಕಲ್ಲುಮಠದ ಎಸ್‌ಕೆಎಸ್ ಶಾಲಾ ತಂಡ ದ್ವೀತಿಯ ಸ್ಥಾನ ಪಡೆದುಕೊಂಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಪೋಕ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 77.45 ಲಕ್ಷ ರು. ಲಾಭ
ಉಷಃಪಾನ, ನಾಸಾಪಾನದಿಂದ ಶತಾಯುಷ್ಯ: ರಾಘವೇಶ್ವರ ಶ್ರೀ