ಕನ್ನಡಪ್ರಭ ವಾರ್ತೆ ಕೋಲಾರರಾಜ್ಯ ಬಜೆಟ್‌ನಲ್ಲಿ ಕೋಲಾರ ಜಿಲ್ಲೆಗೆ ೫೦ ಸಾವಿರ ಕೋಟಿ ಅನುದಾನದ ಜೊತೆಗೆ ವಿದರ್ಭ ಪ್ಯಾಕೇಜ್ ಘೋಷಣೆ ಮಾಡಬೇಕು, ಕೆಸಿ ವ್ಯಾಲಿ ೩ನೇ ಹಂತದ ಶುದ್ಧೀಕರಣದ ಜೊತೆಗೆ ಎಪಿಎಂಸಿಗೆ ೧೦೦ ಎಕರೆ ಜಮೀನು ನೀಡುವಂತೆ ಒತ್ತಾಯಿಸಿ ರೈತಸಂಘವು ಪಲ್ಲವಿ ವೃತ್ತದಲ್ಲಿ ಜಾನುವಾರುಗಳ ಸಮೇತ ಪ್ರತಿಭಟನೆ ನಡೆಸಿ ಕಂದಾಯ ಅಧಿಕಾರಿಗಳ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.
ಚುನಾವಣೆ ನಡೆಸಲು ಒತ್ತಾಯ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆ ವೇಮಗಲ್ ಮಹಿಳಾ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ಸ್ತ್ರೀಶಕ್ತಿ ಸಹಕಾರ ಸಂಘಗಳ ಸಾಲ ಮನ್ನಾ ಮಾಡಬೇಕು ಹಾಗೂ ಡಿಸಿಸಿ ಬ್ಯಾಂಕ್ ಮತ್ತು ಹಾಲು ಒಕ್ಕೂಟಕ್ಕೆ ಚುನಾವಣೆ ನಡೆಸಬೇಕೆಂದು ಒತ್ತಾಯಿಸಿದರು. ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ. ನಳಿನಿಗೌಡ ಮಾತನಾಡಿ, ಗಡಿಭಾಗದ ರೈತರ ನಿದ್ದೆಗೆಡಿಸುತ್ತಿರುವ ಕಾಡು ಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ, ಯರಗೋಳ್ ನೀರಾವರಿ ಯೋಜನೆಯನ್ನು ತ್ವರಿತಗತಿಯಲ್ಲಿ ಕುಡಿಯಲು ಸರಬರಾಜು ಮಾಡಲು ಅನುದಾನ, ಕೃಷಿ ಆಧಾರಿತ ಕೃಗಾರಿಕೆಗಳು, ಮಾವು ಸಂಸ್ಕರಣಾ ಘಟಕಗಳಿಗೆ ಅನುದಾನ ಬಿಡುಗಡೆಗೆ ಒತ್ತಾಯ ಮಾಡಿದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.