ಚಂಡಮಾರುತದ ಎಫೆಕ್ಟ್‌ನಿಂದ ಜಿಲ್ಲೆಯಲ್ಲಿ ನಿರಂತರವಾಗಿ ಜಡಿ ಮಳೆ ಹಾಗೂ ಶೀತಗಾಳಿಯ ಹಿನ್ನೆಲೆಯಲ್ಲಿ ನಿರಂತರವಾಗಿ ಕೋಲಾರ ಜಿಲ್ಲೆಯಲ್ಲಿ ಮಳೆಸುರಿಯುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಜಿಲ್ಲಾಧಿಕಾರಿ ಅಕ್ರಂಪಾಷ ಸೋಮವಾರ ರಜೆ ಘೋಷಿಸಿದ್ದಾರೆ.
ಕೋಲಾರ : ಚಂಡಮಾರುತದ ಎಫೆಕ್ಟ್‌ನಿಂದ ಜಿಲ್ಲೆಯಲ್ಲಿ ನಿರಂತರವಾಗಿ ಜಡಿ ಮಳೆ ಹಾಗೂ ಶೀತಗಾಳಿಯ ಹಿನ್ನೆಲೆಯಲ್ಲಿ ನಿರಂತರವಾಗಿ ಕೋಲಾರ ಜಿಲ್ಲೆಯಲ್ಲಿ ಮಳೆಸುರಿಯುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಜಿಲ್ಲಾಧಿಕಾರಿ ಅಕ್ರಂಪಾಷ ಸೋಮವಾರ ರಜೆ ಘೋಷಿಸಿದ್ದಾರೆ.
ಬಂಗಾಳಕೊಲ್ಲಿ, ತಮಿಳುನಾಡಿನಲ್ಲಿ ಬೀಸುತ್ತಿರುವ ಚಂಡಮಾರುತದ ಕೋಲಾರ ಜಿಲ್ಲೆಯಲ್ಲು ಪರಿಣಾಮ ಬೀರಿದ್ದು, ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣ ಮತ್ತು ಶೀತಗಾಳಿ ಬೀಸುತ್ತಿದೆ.
ಶನಿವಾರ ರಾತ್ರಿಯಿಂದ ಜಿಟಿ ಜಿಟಿ ಮಳೆಯಾಗುತ್ತಿದೆ. ಶೀತ ಗಾಳಿ ಹಾಗೂ ತುಂತುರು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸದಾ ಜನಸಂದಣಿಯಿರುವ ರಸ್ತೆಗಳಲ್ಲಿ ಬಿಕೋ ಎನ್ನುತ್ತಿದ್ದವು. ಶೀತಗಾಳಿಗೆ ತತ್ತರಿಸಿರುವ ಸಾರ್ವಜನಿಕರು ಉಡುಪುಗಳಿಗೆ ಮೊರೆ ಹೋಗಿರುವ ಜನರು ಜಿಟಿ ಮಳೆಯಿಂದ ದಿನನಿತ್ಯದ ಕೆಲಸಗಳಿಗೆ ಮನೆಯಿಂದ ತೆರಳುತ್ತಿರುವುದು ಮಾಮೂಲಿಯಾಗಿದೆ.