ಕೊಳತೋಡು: ಮುಂಜಾನೆ ರಾಜ್ಯ ಹೆದ್ದಾರಿಯಲ್ಲಿ ಹುಲಿ ಪ್ರತ್ಯಕ್ಷ!

KannadaprabhaNewsNetwork |  
Published : Sep 10, 2026, 02:30 AM IST
ಹಾವೇರಿ ನಗರದ ಜಿಲ್ಲಾ ಗುರುಭವನದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಜ್ಞಾನದೀಪ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಚಿವ ರುದ್ರಪ್ಪ ಲಮಾಣಿ ಚಾಲನೆ ನೀಡಿದರು. | Kannada Prabha

ಸಾರಾಂಶ

ವಿರಾಜಪೇಟೆ ತಾಲೂಕಿನ ಕೊಳತೋಡು ಗ್ರಾಮದಲ್ಲಿ ಬುಧವಾರ ಮುಂಜಾನೆ ರಾಜ್ಯ ಹೆದ್ದಾರಿಯಲ್ಲಿ ಹುಲಿ ಕಾಣಿಸಿಕೊಂಡಿದ್ದು ಆತಂಕ ಸೃಷ್ಟಿಸಿದೆ.

ವಿರಾಜಪೇಟೆ : ವಿರಾಜಪೇಟೆ ತಾಲೂಕಿನ ಕೊಳತೋಡು ಗ್ರಾಮದಲ್ಲಿ ಬುಧವಾರ ಮುಂಜಾನೆ ರಾಜ್ಯ ಹೆದ್ದಾರಿಯಲ್ಲಿ ಹುಲಿ ಕಾಣಿಸಿಕೊಂಡಿದ್ದು ಆತಂಕ ಸೃಷ್ಟಿಸಿದೆ.

ಕೊಳತೋಡು ಗ್ರಾಮದ ಉದ್ಯಮಿ ನೀಲಾ ಅವರ ಮನೆಯ ಮುಂಭಾಗದ ರಾಜ್ಯ ಹೆದ್ದಾರಿಯಲ್ಲಿ ಬೆಳಗ್ಗೆ ಸುಮಾರು 4.30ರ ವೇಳೆಗೆ ಹುಲಿ ಕಾಣಿಸಿಕೊಂಡಿದೆ. ಹುಲಿ ರಸ್ತೆ ದಾಟುತ್ತಿರುವ ದೃಶ್ಯ ಕಂಡುಬಂದಿದೆ. ಈ ಭಾಗದಲ್ಲಿ ಬೆಳಗ್ಗೆ ವಾಯುವಿಹಾರಕ್ಕೆ ತೆರಳುವವರು ಹಾಗೂ ದ್ವಿಚಕ್ರ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಮನವಿ ಮಾಡಲಾಗಿದೆ.

ಆದಷ್ಟು ಕೂಡಲೇ ಹುಲಿಯನ್ನು ಸೆರೆ ಹಿಡಿಯುವಂತೆ ಈ ಭಾಗದ ಗ್ರಾಮಸ್ಥರು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಶಾಲನಗರದಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ
ತಂತ್ರಜ್ಞಾನ ಬಳಸಿ ಶಿಕ್ಷಣ ನೀಡಿ: ಮಂತರ್ ಗೌಡ