ಕೊಲ್ಲೂರು: ಮಹಾನವರಾತ್ರಿ ಮಹೋತ್ಸವಕ್ಕೆ ಚಾಲನೆ

KannadaprabhaNewsNetwork |  
Published : Sep 23, 2025, 01:05 AM IST
22ಕೊಲ್ಲೂರು - ಕೊಲ್ಲೂರು ದೇವಸ್ಥಾನದಲ್ಲಿ ಅಧ್ಯಕ್ಷ ಬಾಬು ಶೆಟ್ಟಿ ಮಹಾನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಿದರು | Kannada Prabha

ಸಾರಾಂಶ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಸೋಮವಾರದಿಂದ ಅ.2ರವರೆಗೆ ವೈಭವದಿಂದ ನಡೆಯುವ ಮಹಾನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಗಣಪತಿ ಪೂಜೆಯೊಂದಿಗೆ ನವರಾತ್ರಿಯ ಕಾರ್ಯಕ್ರಮಗಳು ಆರಂಭಗೊಂಡವು, ನಂತರ ಶ್ರೀದೇವಿಗೆ ವಿಶೇಷ ಪೂಜೆ, ಮಂಗಳಾರತಿ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಕುಂದಾಪುರಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಸೋಮವಾರದಿಂದ ಅ.2ರವರೆಗೆ ವೈಭವದಿಂದ ನಡೆಯುವ ಮಹಾನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಗಣಪತಿ ಪೂಜೆಯೊಂದಿಗೆ ನವರಾತ್ರಿಯ ಕಾರ್ಯಕ್ರಮಗಳು ಆರಂಭಗೊಂಡವು, ನಂತರ ಶ್ರೀದೇವಿಗೆ ವಿಶೇಷ ಪೂಜೆ, ಮಂಗಳಾರತಿ ನಡೆಸಲಾಯಿತು.ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಹೆಗ್ಡೆ ತೆಗ್ಗರ್ಸೆ ಅವರು ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ಈ ಹತ್ತು ದಿನಗಳಲ್ಲಿ ದೇವಸ್ಥಾನದಲ್ಲಿ ದಿನಂಪ್ರತಿಯ ಕಟ್ಟುಕಟ್ಟಳೆಯ ಪೂಜೆಗಳ ಜೊತೆ ವಿಶೇಷ ಪೂಜೆ ಹಾಗೂ ಉತ್ಸವಗಳು ಜರುಗಲಿವೆ. ಈ ಪ್ರಯುಕ್ತ ಇಲ್ಲಿಗೆ ಬರುವ ರಾಜ್ಯದ ಮತ್ತು ಹೊರರಾಜ್ಯದ ಭಕ್ತರಿಗೆ ಯಾವುದೇ ಕೊರತೆಯಾಗದಂತೆ ಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಅ. 1ರಂದು ಮಹಾನವಮಿ ಪ್ರಯುಕ್ತ ಬೆಳಗ್ಗೆ 11.30ಕ್ಕೆ ಚಂಡಿಕಾಯಾಗ ಹಾಗೂ ಮಧ್ಯಾಹ್ನ 1.30ರ ಧನುರ್ಲಗ್ನದಲ್ಲಿ ರಥೋತ್ಸವ ಜರುಗಲಿದೆ. 2ರಂದು ವಿಜಯದಶಮಿ ಪ್ರಯುಕ್ತ ಬೆಳಿಗ್ಗೆ ವಿದ್ಯಾರಂಭ, ನವಾನ್ನ ಪ್ರಾಶನ ಹಾಗೂ ಸಂಜೆ ಶ್ರೀ ಮೂಕಾಂಬಿಕಾ ದೇವಿಯ ವಿಜಯೋತ್ಸವ ನಡೆಯಲಿದೆ ಎಂದರು.

ಉತ್ಸವದ ಪ್ರಯುಕ್ತ ಪ್ರತಿದಿನ ಮಧ್ಯಾಹ್ನ 3ರಿಂದ ರಾತ್ರಿ 11.30ರವರೆಗೆ ಸ್ವರ್ಣಮುಖಿ ರಂಗಮಂಟಪದಲ್ಲಿ ದೇಶದ ವಿವಿಧ ಭಾಗದಿಂದ ಬರುವ ಕಲಾ ತಂಡಗಳಿಂದ ಸೇವಾರೂಪವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಳ್ಳಲಿದೆ. ಉತ್ಸವದ ಪಾರಂಪರಿಕ ಆಚರಣೆಯ ಜೊತೆಗೆ ವಿವಿಧ ಸಾಂಸ್ಕೃತಿಕ ವೈಭವಗಳ ವಿಜೃಂಭಣೆಯ ಆಚರಣೆಗಳು ನಡೆಯಲಿದೆ ಎಂದು ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ತಿಳಿಸಿದರು.

ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕೆ.ನಿತ್ಯಾನಂದ ಅಡಿಗ, ಸುಧಾ ಕೆ., ಯು. ರಾಜೇಶ್ ಕಾರಂತ, ಮಹಾಲಿಂಗ ನಾಯ್ಕ, ಸುರೇಂದ್ರ ಶೆಟ್ಟಿ, ರಘುರಾಮ ದೇವಾಡಿಗ, ಶ್ರೀಮತಿ ಧನಾಕ್ಷಿ, ಅಭಿಲಾಷ್ ಪಿ. ವಿ., ತಂತ್ರಿಗಳು, ಅರ್ಚಕರು, ಉಪಾಧಿವಂತ ಕ್ಷೇತ್ರ ಪುರೋಹಿತರು, ದೇವಳದ ಸಿಬ್ಬಂದಿ ವರ್ಗ ಮತ್ತು ನಾಗರಿಕರು ಇದ್ದರು.

PREV

Recommended Stories

ಅಕ್ರಮ ಶಸ್ತ್ರಾಸ್ತ್ರ: ನಿನ್ನೆಯೂ ವಿಚಾರಣೆಗೆ ತಿಮರೋಡಿ ಗೈರು
ಸಿದ್ದು ಆಳ್ವಿಕೆ ಟಿಪ್ಪು ಆಳ್ವಿಕೆ ನಾಚಿಸುವಂತಿದೆ : ಬಿವೈವಿ