ಮಂಗಳೂರು: ಹರೇಕಳದ ರಾಜಗುಡ್ಡೆ ಬಳಿಯ ಮನೆಯೊಂದಕ್ಕೆ ಮಧ್ಯರಾತ್ರಿ ಪ್ರವೇಶಿಸಿ , ಬೆಡ್ ರೂಮಿನಲ್ಲಿ ಮಲಗಿದ್ದ ಮಹಿಳೆಗೆ ಕಿರುಕುಳ ನೀಡಿ ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಆರೋಪಿ ನೌಫಲ್(32) ಎಂಬಾತನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಬುಧವಾರ ಮಧ್ಯರಾತ್ರಿ ಬಾಡಿಗೆ ಮನೆಯೊಂದಕ್ಕೆ ಅಕ್ರಮವಾಗಿ ಪ್ರವೇಶಿಸಿ ಮಲಗಿದ್ದ ಮಹಿಳೆಯೊಬ್ಬರಿಗೆ ಕಿರುಕುಳಕ್ಕೆ ಯತ್ನಿಸಿದ್ದರು. ಅಷ್ಟರಲ್ಲಿ ಮಹಿಳೆಗೆ ಎಚ್ಚರವಾಗಿದ್ದು, ಆರೋಪಿ ಮಂಚದ ಅಡಿಯಿಂದ ಎದ್ದು ಪರಾರಿಯಾಗಿದ್ದನು. ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ನೌಫಲ್‌ನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.