ಅಮಿತ್ ಶಾ ಹೇಳಿಕೆ ಖಂಡಿಸಿ ಹೋರಾಟ । ಜಿಲ್ಲಾ ಕೇಂದ್ರ ಕೊಪ್ಪಳ ನಗರ ಸ್ತಬ್ಧ । ಪ್ರಯಾಣಿಕರ ಪರದಾಟ । ಟೈಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ
ಬೆಳಗ್ಗೆಯಿಂದ ಅಂಗಡಿ, ಮುಂಗಟ್ಟುಗಳು ಬಂದಾಗಿದ್ದು, ಸಂಚಾರಕ್ಕೂ ಸಹ ಬ್ರೇಕ್ ಬಿದ್ದಿತ್ತು. ಹೀಗಾಗಿ, ಪ್ರಯಾಣಿಕರು ಪರದಾಡುವಂತೆ ಆಯಿತು.
ಬೆಳಗ್ಗೆ ಸಾರಿಗೆ ಬಸ್ಸುಗಳು ಸಂಚರಿಸಿದವಾದರೂ 9 ಗಂಟೆಯ ವೇಳೆಗೆ ಅವುಗಳನ್ನು ಸಹ ಬಂದ್ ಮಾಡಲಾಯಿತು.
ಬಂದ್ ಕರೆ ಹಿನ್ನೆಲೆ ಸಂಚಾರ ಸ್ತಬ್ಧವಾಗಿದ್ದರಿಂದ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಆದರೆ, ಬೈಕ್ ಸವಾರರು ಹರಸಾಹಸ ಮಾಡಿ, ಹೋಗುತ್ತಿರುವುದು ಕಂಡು ಬಂದಿತು.
ದಿಢೀರ್ ಧರಣಿ:
ದಲಿತ ಸಂಘಟನೆಗಳು ಕರೆ ನೀಡಿದ್ದ ಕೊಪ್ಪಳ ಬಂದ್ ಹತ್ತು ವರ್ಷಗಳ ನಂತರ ಸಂಪೂರ್ಣ ಯಶಸ್ವಿಯಾಗಿದೆ. ಇತ್ತೀಚೆಗೆ ನಡೆದ ಬಂದ್ ಗಳ ಪೈಕಿ ಬಹುತೇಕ ಇದು ಯಶಸ್ವಿಯಾಗಿರುವ ಬಂದ್ ಎಂದು ಸಹ ವಿಶ್ಲೇಷಣೆ ಮಾಡುತ್ತಿರುವುದು ಕಂಡು ಬಂದಿತು.ಬೆಂಬಲಿಸಿದ ಸಂಘಟನೆಗಳು: ಮಾದಿಗ, ಚಲವಾದಿ, ಮುಸ್ಲಿಮ್, ಕ್ರಿಶ್ಚಿಯನ್, ಮ್ಯಾದರ್, ಲಂಬಾಣಿ, ಲಿಂಗಾಯತ, ಹಾಲುಮತ, ವಾಲ್ಮೀಕಿ, ಭೋವಿ, ಭಜಂತ್ರಿ, ಮಡಿವಾಳ, ಶ್ರೀ ಗುರುಬಸವ, ಮೋಚಿ, ಹಡಪದ, ಪಂಚಮಸಾಲಿ, ಸುಡುಗಾಡು ಸಿದ್ದರ, ಚನ್ನ ದಾಸರ, ಶಿಳ್ಳೆಕ್ಯಾತರ, ಕುರುಬ, ಹಡಪದ ಅಪ್ಪಣ್ಣ ಯುವಕರು ಸಂಘ, ದಲಿತ ಸಂಘಟನೆಗಳು, ಅಲ್ಪಸಂಖ್ಯಾತರ ಹಿಂದುಳಿದ ವರ್ಗದವರ ಸಂಘಟನೆಗಳು, ರೈತ ಸಂಘಟನೆಗಳು, ದಲಿತ ಮಹಿಳಾ ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆಗಳ ಬಣಗಳು, ಮಾನವ ಹಕ್ಕುಗಳ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಜಿಲ್ಲಾ ವಕೀಲರ ಸಂಘ, ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಘಟಕ, ಗ್ರಾಮ ಘಟಕಗಳು, ನೌಕರರ ಸಂಘ, ಮುಸ್ಲಿಮ್ ಪಂಚ್ ಕಮಿಟಿಗಳು, ಜಿಲ್ಲಾ ಪಾಸ್ಟರ್ಸ್ ಅಸೋಸಿಯೇಷನ್, ಕಾರ್ ಟ್ಯಾಕ್ಸಿಗಳ ಸಂಘಟನೆ, ಆಟೋ ಸಂಘಟನೆಗಳು, ಬೀದಿ ಬದಿ ವ್ಯಾಪಾರಿಗಳ ಸಂಘ, ಬ್ಯಾಂಕ್ ನೌಕರರ ಸಂಘ, ಹೋಟೆಲ್ ಮಾಲೀಕರ ಸಂಘ, ವರ್ತಕರ ಸಂಘ, ಬಂಗಾರದ ಅಂಗಡಿಗಳ ಸಂಘ, ಬಟ್ಟೆ ವ್ಯಾಪಾರಿಗಳ ಅಂಗಡಿಗಳೂ ಸೇರಿದಂತೆ ವಿವಿಧ ಜನಪರ ಸಂಘಟನೆಗಳು ಹೋರಟಕ್ಕೆ ಸಂಪೂರ್ಣ ಬೆಂಬಲ ನೀಡಿದವು. ಸಂವಿಧಾನ ಸಂರಕ್ಷಣಾ ಸಮಿತಿಯ ಮುಖಂಡರಾದ ಅಲ್ಲಮ ಪ್ರಭು ಬೆಟ್ಟದೂರು, ಬಸವರಾಜ ಸೂಳಿಬಾವಿ, ಹನುಮೇಶ ಕಡೇಮನಿ, ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಬಸವರಾಜ್ ಶೀಲವಂತರ, ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್.ಎ. ಗಫಾರ್, ಪ್ರಮುಖರಾದ ಜ್ಯೋತಿ ಗೊಂಡಬಾಳ, ರಾಮಣ್ಣ ಚೌಡಕಿ, ಮಂಜುನಾಥ್ ಗೊಂಡಬಾಳ, ಪರಶುರಾಮ್ ಕೆರೆಹಳ್ಳಿ, ಕೌಸರ್ ಕೋಲ್ಕಾರ್, ಕೆ.ಬಿ. ಗೋನಾಳ್, ಬಸವರಾಜ್ ಪೂಜಾರ್, ಸಲೀಮ್ ಖಾದ್ರಿ, ಆದಿಲ್ ಪಟೇಲ್, ರಮೇಶ್ ಗಿಣಿಗೇರಿ, ಕಾಶಪ್ಪ ಚಲವಾದಿ ಇದ್ದರು.ಅಂಬೇಡ್ಕರ್ ತಂಟೆಗೆ ಬಂದರೆ ರಕ್ತಪಾತ:
ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನಾ ಮೆರವಣಿಗೆ ಬಳಿ ನಡೆದ ಸಭೆಯಲ್ಲಿ ಮುಖಂಡರಾದ ಬಸವರಾಜ ಸೂಳಿಬಾವಿ, ಅಲ್ಲಮಪ್ರಭು ಬೆಟ್ಟದೂರು, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಸೇರಿದಂತೆ ಹಲವರು ಮಾತನಾಡಿ ಆಕ್ರೋಶ ವ್ಯಕ್ತಪಡಿಸಿದರು.