ಗವಿಸಿದ್ದೇಶ್ವರರ ಜಾತ್ರೆಯಲ್ಲಿ 2 ಲಕ್ಷ ಭಕ್ತರಿಂದ ಪ್ರಸಾದ ಸ್ವೀಕಾರ

KannadaprabhaNewsNetwork |  
Published : Jan 28, 2024, 01:17 AM IST
27ಕೆಪಿಎಲ್13:ಕೊಪ್ಪಳ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾರಥೋತ್ಸವ ದಿನ ಸಾಲುಗಟ್ಟಿ ಭಕ್ತರು ಪ್ರಸಾದ ಸ್ವೀಕರಿಸುತ್ತಿರುವುದು. ಗವಿಸಿದ್ದೇಶ್ವರ ಶ್ರೀಗಳು ದಾಸೋಹದ ವೀಕ್ಷಣೆ ಮಾಡುತ್ತಿರುವುದು.,  ಚಿತ್ರ ನಾಭಿರಾಜ ದಸ್ತೇನವರ | Kannada Prabha

ಸಾರಾಂಶ

ಗವಿಸಿದ್ದೇಶ್ವರ ಜಾತ್ರೆಯಲ್ಲಿ ಪ್ರಸಾದ ತಯಾರಿಕೆಗೆ ನೂರು ಕ್ವಿಂಟಲ್‌ ಅಕ್ಕಿ ಬಳಕೆ ಮಾಡಲಾಗಿದೆ. ಕಳೆದ ವರ್ಷಕ್ಕಿಂತ 25 ಕ್ವಿಂಟಲ್ ಹೆಚ್ಚು ಬಳಕೆಯಾದ ಅಕ್ಕಿಯಿಂದಾಗಿ ಭಕ್ತರೂ ಹೆಚ್ಚು ಬಂದಂತಾಗಿದೆ.

ಕೊಪ್ಪಳ: ಅನ್ನ ಅಕ್ಷರ ದಾಸೋಹಕ್ಕೆ ಹೆಸರುವಾಸಿಯಾದ ಕೊಪ್ಪಳ ಗವಿಸಿದ್ಧೇಶ್ವರ ಮಠದಲ್ಲಿ ಈ ಬಾರಿಯ ಜಾತ್ರಾ ಮಹೋತ್ಸವದ ರಥೋತ್ಸವದ ದಿನವೇ ಬರೋಬ್ಬರಿ ಎರಡು ಲಕ್ಷ ಭಕ್ತರು ಪ್ರಸಾದ ಸ್ವೀಕರಿಸಿದ್ದಾರೆ. ಈವರೆಗೂ ನಡೆದ ಜಾತ್ರೆಯ ಮಹಾದಾಸೋಹದಲ್ಲಿ ಒಂದೇ ದಿನ ಇಷ್ಟೊಂದು ಸಂಖ್ಯೆಯಲ್ಲಿ ಪ್ರಸಾದ ಸ್ವೀಕರಿಸಿರುವುದು ಇದೇ ಮೊದಲು ಎನ್ನುವುದು ಗಮನಾರ್ಹ.

100 ಕ್ವಿಂಟಲ್‌ ಅಕ್ಕಿ: ಮಹಾರಥೋತ್ಸವ ದಿನ ಅನ್ನ ದಾಸೋಹಕ್ಕೆ ಬರೋಬ್ಬರಿ 100 ಕ್ವಿಂಟಲ್ ಅಕ್ಕಿ ಬಳಕೆಯಾಗಿದೆ. ಮಹಾದಾಸೋಹದಲ್ಲಿ ಸಿಹಿ, ರೊಟ್ಟಿಗಳ ಬಳಕೆ ಲೆಕ್ಕವೇ ಇಲ್ಲದಂತಾಗಿದೆ. ಜಾತ್ರೆಗೆ 8 ಲಕ್ಷ ಶೇಂಗಾ ಹೋಳಿಗೆ, 15 ಲಕ್ಷಕ್ಕೂ ಅಧಿಕ ರೊಟ್ಟಿಗಳು ಬಂದಿದ್ದು, ಬೇಡಿಕೆಗೆ ತಕ್ಕಂತೆ ಬಳಕೆ ಮಾಡಲಾಗುತ್ತದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಏ.1ರಿಂದ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ ಹೆಚ್ಚಳ
ತೈಲ ಕೊರತೆ ವದಂತಿ: ಖರೀದಿಗೆ ಮುಗಿಬಿದ್ದ ಜನ-ಬಂಕ್‌ಗಳಲ್ಲಿ ಭಾರೀ ರಷ್‌