ಕೇಂದ್ರದಲ್ಲಿ ಬಿಜೆಪಿಗೆ ಅಧಿಕಾರ ನಿಶ್ಚಿತ ಎಂದ ಕೊಪ್ಪಳ ಸಂಸದ ಸಂಗಣ್ಣ ಕರಡಿ

KannadaprabhaNewsNetwork |  
Published : Jan 21, 2024, 01:31 AM IST
ಪೋಟೊ20ಕೆಎಸಟಿ2: ಕುಷ್ಟಗಿ ಪಟ್ಟಣದಲ್ಲಿ ನಡೆದ ನಮ್ಮ ಸಂಕಲ್ಪ ವಿಕಸಿತ ಭಾರತ ಕಾರ್ಯಕ್ರಮದಲ್ಲಿ ಸಂಸದ ಕರಡಿ ಸಂಗಣ್ಣ ಅವರು ಮಾತನಾಡಿದರು. | Kannada Prabha

ಸಾರಾಂಶ

ಜನರ ಆಶೀರ್ವಾದದಿಂದ ನಾನು ಎರಡು ಬಾರಿ ಸಂಸದನಾಗಿದ್ದೇನೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಕೆಲಸ ಗಮನಿಸಿದ ಕೇಂದ್ರದ ಬಿಜೆಪಿ ನಾಯಕರು ಮೂರನೇ ಬಾರಿಗೆ ಅವಕಾಶ ಕೊಡುವ ವಿಶ್ವಾಸವಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನರು ಮತ್ತೊಮ್ಮೆ ಆಶೀರ್ವಾದ ಮಾಡಬೇಕು.

ಕುಷ್ಟಗಿ: ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಹ್ಯಾಟ್ರಿಕ್ ಗೆಲುವು ಖಚಿತ, ಕೇಂದ್ರದಲ್ಲಿ ಮೂರನೇ ಅವಧಿಗೆ ಅಧಿಕಾರ ನಿಶ್ಚಿತ ಎಂದು ಸಂಸದ ಸಂಗಣ್ಣ ಕರಡಿ ವಿಶ್ವಾಸ ವ್ಯಕ್ತಪಡಿಸಿದರು.ಪಟ್ಟಣದಲ್ಲಿ ನಡೆದ ನಮ್ಮ ಸಂಕಲ್ಪ, ವಿಕಸಿತ ಭಾರತ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮುಂದಿನ ಅವಧಿಯಲ್ಲಿ ಕೃಷ್ಣಾದಿಂದ ನೀರು ತಂದು ಕುಷ್ಟಗಿ ಸೇರಿದಂತೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಕೆರೆ ತುಂಬಿಸಲಾಗುವುದು. ಅತಿ ಶೀಘ್ರದಲ್ಲಿಯೇ ತಾಲೂಕಿಗೆ ರೈಲ್ವೆ ಸಂಚಾರ ಆರಂಭಿಸಲಾಗುವುದು ಎಂದು ಹೇಳಿದರು.ಗದಗ-ವಾಡಿ ರೈಲ್ವೆ ಯೋಜನೆಯಡಿ ಕುಷ್ಟಗಿಗೆ ರೈಲ್ವೆ ಸಂಪರ್ಕ ಕಲ್ಪಿಸಲಾಗುವುದು. ಇದರಿಂದ ಸಾರ್ವನಿಕರಿಗೆ ಅನುಕೂಲವಾಗಲಿದೆ. ಕಳೆದ ಒಂಬತ್ತೂವರೆ ವರ್ಷದಲ್ಲಿ ಪ್ರತಿ ತಾಲೂಕಿಗೂ ರೈಲು ಹಳಿ ಹಾಕುವಲ್ಲಿ ಪ್ರಮಾಣಿಕ ಪ್ರಯತ್ನ ಮಾಡಿದ್ದೇನೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಆದಂತಹ ಕೆಲಸಗಳು ಯಾವ ಸರ್ಕಾರದ ಅವಧಿಯಲ್ಲೂ ಆಗಿಲ್ಲ ಎಂದರು.ಜನರ ಆಶೀರ್ವಾದದಿಂದ ನಾನು ಎರಡು ಬಾರಿ ಸಂಸದನಾಗಿದ್ದೇನೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಕೆಲಸ ಗಮನಿಸಿದ ಕೇಂದ್ರದ ಬಿಜೆಪಿ ನಾಯಕರು ಮೂರನೇ ಬಾರಿಗೆ ಅವಕಾಶ ಕೊಡುವ ವಿಶ್ವಾಸವಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನರು ಮತ್ತೊಮ್ಮೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಕೇಂದ್ರ ಸರ್ಕಾರದ ಯೋಜನೆಗಳನ್ನು ತಲುಪಿಸಬೇಕು. ಜನತೆ ಲೋಕಸಭಾ ಚುನಾವಣೆಯಲ್ಲಿ ಎಂದಿಗೂ ಬಿಜೆಪಿಯನ್ನು ಬಿಟ್ಟುಕೊಟ್ಟಿಲ್ಲ. ಈ ಬಾರಿಯೂ ಬಿಜೆಪಿ ಬೆಂಬಲಿಸುವ ಮೂಲಕ ಮೂರನೇ ಬಾರಿಗೆ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.ಅಂಚೆ ಇಲಾಖೆಯ ಯೋಜನೆ ಬಗ್ಗೆ ಮಹಾಂತೇಶ ಹೊಸಪೇಟೆ ಮಾತನಾಡಿ, ಅಂಚೆ ಇಲಾಖೆಯ ಕೇಂದ್ರದ ಜನಪರ ಯೋಜನೆಗಳ ಸಮಗ್ರವಾದ ಮಾಹಿತಿ ಹಂಚಿಕೊಂಡು ಪ್ರತಿಯೊಬ್ಬರೂ ಇವುಗಳ ಸದುಪಯೋಗ ಪಡಿಸಿಕೊಳ್ಳಲು ಕರೆ ನೀಡಿದರು.ಎಸ್.ಎಸ್.ಪಾಟೀಲ್ ಮಾತನಾಡಿ, ಬ್ಯಾಂಕುಗಳಲ್ಲಿ ಜನ್‌ಧನ್‌ ಯೋಜನೆ ಮತ್ತು ಜೀವನ ಜ್ಯೋತಿ, ಅಟಲ್ ಪೆನ್ಶನ್ ಯೋಜನೆಯ ಪೂರಕ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಕುಷ್ಟಗಿ ಶಾಖೆಯ ವ್ಯವಸ್ಥಾಪಕ ಮುಹಹ್ಮದ್ ಬಶೀರ, ಪುರಸಭೆಯ ಮಾಜಿ ಸದಸ್ಯ ವಿಜಯಕುಮಾರ್ ಹಿರೇಮಠ, ಪುರಸಭೆಯ ಸದಸ್ಯರಾದ ರಾಜಪ್ಪ ಪತ್ತಾರ, ಜೆ.ಜೆ. ಆಚಾರ, ಶಿವಕುಮಾರ ಪಾಟೀಲ್, ಪುರಸಭೆಯ ಮುಖ್ಯಾಧಿಕಾರಿ ಧರಣೇಂದ್ರಕುಮಾರ, ಯುವ ಮುಖಂಡ ಚಂದ್ರಕಾಂತ ವಡಗೇರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಆರಂಭದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕೆನರಾ ಬ್ಯಾಂಕಿನ ಮನೋಜಕುಮಾರ ಸ್ವಾಗತಿಸಿದರು. ರವೀಂದ್ರಸಾ ಬಾಕಳೆ ನಿರೂಪಿಸಿ, ವಂದಿಸಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರತಿಯೊಂದು ಯೋಜನೆಯನ್ನು ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ ಎನ್ನುತ್ತಾರೆ ಸಂಸದ ಸಂಗಣ್ಣ ಕರಡಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ : ಲಕ್ಷ್ಮೀ
ನಾಯಿಗಳ ಮೇಲೂ ತೆರಿಗೆ ಹೇರಿಕೆಗೆ ಮುಂದಾದ ಸರ್ಕಾರ!